‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಕರ್ನಾಟಕದಲ್ಲಿ ಬಿಡುಗಡೆ ಆಗಲಿದೆ ‘ಆಡುಜೀವಿತಂ’ ಚಿತ್ರ

ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್​ ಅಭಿನಯದ ‘ಆಡುಜೀವಿತಂ’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್​’ನ ವಿಜಯ್​ ಕಿರಗಂದೂರು ಅವರು ರಿಲೀಸ್​ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಬೆಂಗಳೂರಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಲಾಯಿತು. ಅದರಲ್ಲಿ ಚಿತ್ರತಂಡದವರು ಭಾಗಿಯಾಗಿದ್ದರು.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಕರ್ನಾಟಕದಲ್ಲಿ ಬಿಡುಗಡೆ ಆಗಲಿದೆ ‘ಆಡುಜೀವಿತಂ’ ಚಿತ್ರ
‘ಆಡುಜೀವಿತಂ’ ಚಿತ್ರತಂಡದ ಸುದ್ದಿಗೋಷ್ಠಿ
Follow us
ಮದನ್​ ಕುಮಾರ್​
|

Updated on: Mar 25, 2024 | 7:52 PM

ಬಹುನಿರೀಕ್ಷಿತ ‘ಆಡುಜೀವಿತಂ’ (ಗೋಟ್ ಲೈಫ್) ಸಿನಿಮಾ ಮಾರ್ಚ್​ 28ರಂದು ಬಿಡುಗಡೆ ಆಗಲಿದೆ. ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬ್ಲೆಸ್ಸಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಮಲಯಾಳಂನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಅವರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾವನ್ನು ಕರ್ನಾಟಕದಲ್ಲಿ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಬಿಡುಗಡೆ ಮಾಡಲಿದೆ. ‘ಆಡುಜೀವಿತಂ’ ಚಿತ್ರದ ವಿತರಣೆಯ ಹಕ್ಕನ್ನು ಪಡೆದುಕೊಂಡಿರುವ ವಿಜಯ್ ಕಿರಗಂದೂರು ಅವರು ಈ ಸಿನಿಮಾವನ್ನು ಅರ್ಪಿಸಿ, ರಿಲೀಸ್​ ಮಾಡುತ್ತಿದ್ದಾರೆ. ವಿಜಯ್ ಕಿರಗಂದೂರು (Vijay Kiragandur) ಮತ್ತು ಪೃಥ್ವಿರಾಜ್ ಸುಕುಮಾರನ್ ನಡುವೆ ಉತ್ತಮ ಗೆಳೆತನ ಇದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣ ಆಗಿದ್ದ ‘ಕೆಜಿಎಫ್’, ‘ಕಾಂತಾರ’ ಸಿನಿಮಾಗಳನ್ನು ಪೃಥ್ವಿರಾಜ್ ಸುಕುಮಾರನ್ ಅವರು ಕೇರಳದಲ್ಲಿ ರಿಲೀಸ್​ ಮಾಡಿದ್ದರು. ಈಗ ಪೃಥ್ವಿರಾಜ್ ಅಭಿನಯಿಸಿದ ‘ಆಡುಜೀವಿತಂ’ ಸಿನಿಮಾವನ್ನು ವಿಜಯ್​ ಕಿರಗಂದೂರು ಅವರು ಕರುನಾಡಿನಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಈ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು. ಹಾಲಿವುಡ್ ಕಲಾವಿದ ಜಿಮ್ಮಿ ಜೀನ್ ಲೂಯಿಸ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದು, ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೃಥ್ವಿರಾಜ್​ ಸುಕುಮಾರನ್​ ಅವರು, ‘ಹೊಂಬಾಳೆ ಫಿಲ್ಮ್ಸ್​ ಮೂಲಕ ನಮ್ಮ ಸಿನಿಮಾ ಬಿಡುಗಡೆ ಆಗುತ್ತಿರುವುದು ಬಹಳ ಖುಷಿ ನೀಡಿದೆ’ ಎಂದರು. ನಜೀಬ್ ಎಂಬ ವ್ಯಕ್ತಿಯ ಬದುಕಿನ ನೈಜ ಘಟನೆಗಳನ್ನು ಇಟ್ಟುಕೊಂಡು ಬರೆದ ‘ಆಡುಜೀವಿತಂ’ ಕಾದಂಬರಿಯನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಅಮಲಾ ಪೌಲ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಎ.ಆರ್. ರೆಹಮಾನ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಏಕಕಾಲಕ್ಕೆ ಮಲಯಾಳಂ, ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ‘ಅಗತ್ಯ ಇದ್ದಿದ್ದಕ್ಕೆ ಲಿಪ್​ ಕಿಸ್​ ಮಾಡಿದೆ’: ಪೃಥ್ವಿರಾಜ್​​ ಜತೆಗಿನ ದೃಶ್ಯದ ಬಗ್ಗೆ ಅಮಲಾ ಪೌಲ್​ ಪ್ರತಿಕ್ರಿಯೆ

‘ನಿರ್ದೇಶಕ ಬ್ಲೆಸ್ಸಿ ಅವರು ಈ ಸಿನಿಮಾವನ್ನು ಮಾಡಬೇಕು ಎಂದುಕೊಂಡಿದ್ದು 2008ರಲ್ಲಿ. ಆದರೆ ಶೂಟಿಂಗ್​ ಆರಂಭವಾಗಿದ್ದು 2018ರಲ್ಲಿ. ಈ ಸಿನಿಮಾದ ಸಲುವಾಗಿ 16 ವರ್ಷಗಳ ಪರಿಶ್ರಮ ಹಾಕಲಾಗಿದೆ. ನಾನು ಈ ಪಾತ್ರಕ್ಕಾಗಿ 31 ಕೆಜಿ ದೇಹದ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಬೆನ್ಯಾಮಿನ್ ಬರೆದ ಆಡುಜೀವಿತಂ ಕಾದಂಬರಿಯನ್ನು ಆಧರಿಸಿದ ಸಿನಿಮಾ ಇದು. ಈ ಫೇಮಸ್​ ಕಾದಂಬರಿಯು ಈವರೆಗೂ 251 ಬಾರಿ ಮುದ್ರಣವಾಗಿದೆ’ ಎಂದು ಪೃಥ್ವಿರಾಜ್​ ಸುಕುಮಾರನ್​ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್