AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆ ವೇಳೆ ಕೋರ್ಟ್​ನಲ್ಲೇ ಅತ್ತ ಶಾಲಿನಿ ತಲ್ವಾರ್​; ಹನಿ ಸಿಂಗ್​ ಬಗ್ಗೆ ಅಸಮಾಧಾನ ಹೊರ ಹಾಕಿದ ಕೋರ್ಟ್​

ಹನಿ ಸಿಂಗ್​ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ, ಆತ ತನ್ನ ಮೇಲೆ ನಿರಂತರವಾಗಿ ಹಲ್ಲೆ ಮಾಡಿದ್ದಾನೆ ಎಂದು ಶಾಲಿನಿ ಗಂಭೀರ ಆರೋಪ ಮಾಡಿದ್ದರು.

ವಿಚಾರಣೆ ವೇಳೆ ಕೋರ್ಟ್​ನಲ್ಲೇ ಅತ್ತ ಶಾಲಿನಿ ತಲ್ವಾರ್​; ಹನಿ ಸಿಂಗ್​ ಬಗ್ಗೆ ಅಸಮಾಧಾನ ಹೊರ ಹಾಕಿದ ಕೋರ್ಟ್​
Yo Yo Honey Singh-Shalini Talwar
TV9 Web
| Edited By: |

Updated on:Aug 29, 2021 | 2:59 PM

Share

ಗಾಯಕ ಹನಿ ಸಿಂಗ್​ ಪತ್ನಿ ಶಾಲಿನಿ ತಲ್ವಾರ್​ ಅವರು ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ದಾಖಲು ಮಾಡಿದ್ದಾರೆ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಸದ್ಯ, ಈ ಪ್ರಕರಣ ವಿಚಾರಣೆ ಹಂತದಲ್ಲಿದೆ. ಆಗಸ್ಟ್​​ 28ರಂದು ಶಾಲಿನಿ ತಲ್ವಾರ್​ ಅವರು ಮೆಟ್ರೋಪೊಲಿಟಿನ್​ ನ್ಯಾಯಾಲಯದಲ್ಲಿ  ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಈ ವೇಳೆ ಅವರು ನ್ಯಾಯಾಧೀಶೆ ಮುಂದೆ ಗಳಗಳನೆ ಅತ್ತಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹನಿ ಸಿಂಗ್​ಗೆ ಸೆಪ್ಟೆಂಬರ್​ 3ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್​ ಸೂಚಿಸಿದೆ.

ಹನಿ ಸಿಂಗ್​ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ, ಆತ ತನ್ನ ಮೇಲೆ ನಿರಂತರವಾಗಿ ಹಲ್ಲೆ ಮಾಡಿದ್ದಾನೆ ಎಂದು ಶಾಲಿನಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪವನ್ನು ಹನಿ ಸಿಂಗ್​ ಅಲ್ಲಗಳೆದಿದ್ದಾರೆ. ಸದ್ಯ, ಈ ವಿಚಾರ ಮೆಟ್ರೋಪೊಲಿಟಿನ್​ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಆಗಸ್ಟ್​ 28ರಂದು ಕೋರ್ಟ್​ನಲ್ಲಿಯೇ ಶಾಲಿನಿ ಕಣ್ಣೀರು ಹಾಕಿದ್ದಾರೆ. ‘ಜೀವನದ ಯಾವ ಘಟ್ಟದಲ್ಲಿ ಮದುವೆ ಆಗಿತ್ತು? ಪ್ರೀತಿ ಮುರಿದು ಬಿದ್ದಿದ್ದು ಯಾವಾಗ’ ಎಂಬಿತ್ಯಾದಿ ಪ್ರಶ್ನೆಗಳನ್ನು ನ್ಯಾಯಾಧೀಶೆ ತನಿಯಾ ಸಿಂಗ್ ಅವರು ಶಾಲಿನಿಗೆ ಕೇಳಿದ್ದಾರೆ. ಈ ಪ್ರಶ್ನೆಗೆ ಉತ್ತರ ಹೇಳುವಾಗ ಶಾಲಿನಿ ಅತ್ತಿದ್ದಾರೆ.

ಅನಾರೋಗ್ಯದ ಕಾರಣ ನೀಡಿ ಹನಿ ಸಿಂಗ್​ ಕೋರ್ಟ್​ಗೆ ಹಾಜರಾಗಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಧೀಶೆ ತನಿಯಾ ಸಿಂಗ್​ ಅಸಮಾಧಾನ ಹೊರ ಹಾಕಿದ್ದಾರೆ. ‘ಯಾರೊಬ್ಬರೂ ಕಾನೂನಿಗಿಂತ ದೊಡ್ಡವರಲ್ಲ. ಈ ಪ್ರಕರಣವನ್ನು ಅವರು ಹಗುರವಾಗಿ ತೆಗೆದುಕೊಂಡಿದ್ದು ನಿಜಕ್ಕೂ ಅಚ್ಚರಿ ಮೂಡಿಸುತ್ತಿದೆ’ ಎಂದಿದ್ದಾರೆ ನ್ಯಾಯಾಧೀಶೆ ತನಿಯಾ ಅವರು.

ಇತ್ತೀಚೆಗೆ ಹನಿ ಸಿಂಗ್​ ಈ ಪ್ರಕರಣದಲ್ಲಿ ಮೌನ ಮುರಿದಿದ್ದರು. ‘20 ವರ್ಷಗಳಿಂದ ನನ್ನ ಬಾಳ ಸಂಗಾತಿ ಆಗಿರುವ ಶಾಲಿನಿ ತಲ್ವಾರ್ ಅವರು ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿರುವುದು ನನಗೆ ತೀವ್ರ ನೋವುಂಟು ಮಾಡಿದೆ. ಈ ನನ್ನ ಆರೋಗ್ಯದ ಬಗ್ಗೆ ಊಹಾಪೋಹ ಹಬ್ಬಿದ್ದಾಗ, ನನ್ನ ಸಾಹಿತ್ಯದ ಬಗ್ಗೆ ಕಟು ಟೀಕೆ ಕೇಳಿಬಂದಾಗ, ಮಾಧ್ಯಮಗಳಲ್ಲಿ ನೆಗೆಟಿವ್​ ಪ್ರಚಾರ ಮಾಡಿದಾಗ ನಾನು ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡಿರಲಿಲ್ಲ. ಆದರೆ ಇಂದು ನನ್ನ ಸಹೋದರಿ, ತಂದೆ-ತಾಯಿ ಮೇಲೆ ಆರೋಪ ಕೇಳಿ ಬಂದಿರುವುದರಿಂದ ನಾನು ಮೌನವಾಗಿರುವುದು ಸೂಕ್ತವಲ್ಲ. ದೇಶದ ಕಾನೂನಿನ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ. ಸತ್ಯ ಹೊರಗೆ ಬರಲಿದೆ ಎಂಬ ಭರವಸೆ ಇದೆ. ನ್ಯಾಯಾಲಯ ತೀರ್ಪು ನೀಡುವುದಕ್ಕಿಂತ ಮುನ್ನವೇ ಜನರು ಮತ್ತು ಅಭಿಮಾನಿಗಳು ತೀರ್ಮಾನಕ್ಕೆ ಬರಬಾರದ ಅಂತ ಮನವಿ ಮಾಡಿಕೊಳ್ಳುತ್ತೇನೆ’ ಎಂದು ಹನಿ ಸಿಂಗ್​ ಹೇಳಿದ್ದರು.

ಇದನ್ನೂ ಓದಿ: ಕೌಟುಂಬಿಕ ದೌರ್ಜನ್ಯ ಆರೋಪದ ನಂತರ ಮೊದಲ ಬಾರಿಗೆ ಹೊಸ ಹಾಡಿನ ಪೋಸ್ಟ್ ಹಂಚಿಕೊಂಡ ಯೋ ಯೋ ಹನಿ ಸಿಂಗ್

Published On - 2:59 pm, Sun, 29 August 21

Follow Us
TV9 Web
TV9 Web

TV9 Kannada

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್