AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲರ್ 2: ಶಾರುಖ್ ಬದಲು ಮತ್ತೊಬ್ಬ ಬಾಲಿವುಡ್ ಸ್ಟಾರ್, ರಜಿನಿಗೆ ಹಳೆ ಪರಿಚಯ

Hritik Roshan and Rajinikanth: ‘ಜೈಲರ್ 2’ ಸಿನಿಮಾನಲ್ಲಿ ಈ ಬಾರಿಯೂ ಸಹ ಅತಿಥಿ ಪಾತ್ರದ ಹವಾ ಮುಂದುವರೆಸಲಾಗಿದ್ದು, ಇನ್ನೂ ಒಂದು ಹೆಜ್ಜೆ ಮುಂದು ಹೋಗಲೆಂದು, ಬಾಲಿವುಡ್ ಬಾದ್​ಶಾ ಶಾರುಖ್ ಖಾನ್ ಅವರನ್ನು ಅತಿಥಿ ಪಾತ್ರಕ್ಕೆ ಕೇಳಲಾಗಿತ್ತು. ಆದರೆ ಅವರು ನಿರಾಕರಿಸಿದ್ದರು. ಇದೀಗ ಶಾರುಖ್ ಖಾನ್ ಬದಲು ಮತ್ತೊಬ್ಬ ಬಾಲಿವುಡ್ ಸೂಪರ್ ಸ್ಟಾರ್ ಅವರನ್ನು ಕರೆತರಲಾಗಿದೆ. ಆದರೆ ರಜನೀಕಾಂತ್​​ ಜೊತೆಗೆ ಅವರದ್ದು ಹಳೆಯ ಪರಿಚಯ.

ಜೈಲರ್ 2: ಶಾರುಖ್ ಬದಲು ಮತ್ತೊಬ್ಬ ಬಾಲಿವುಡ್ ಸ್ಟಾರ್, ರಜಿನಿಗೆ ಹಳೆ ಪರಿಚಯ
Rajinikanth Hritik Roshan
ಮಂಜುನಾಥ ಸಿ.
|

Updated on:May 30, 2026 | 8:37 PM

Share

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಬಹು ನಿರೀಕ್ಷಿತ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರದಲ್ಲಿದೆ. 2023 ರಲ್ಲಿ ಬಿಡುಗಡೆ ಆಗಿದ್ದ ‘ಜೈಲರ್’ ಚಿತ್ರ ದೊಡ್ಡ ಹಿಟ್ ಆಗಿತ್ತು. ಆ ಸಿನಿಮಾನಲ್ಲಿ ರಜನೀಕಾಂತ್ ಅವರಷ್ಟೆ ಇತರೆ ಅತಿಥಿ ಪಾತ್ರಗಳು ಸಹ ಸಖತ್ ಆಗಿ ಮಿಂಚಿದ್ದವು. ಶಿವರಾಜ್ ಕುಮಾರ್, ಮೋಹನ್​​ಲಾಲ್, ಜಾಕಿ ಶ್ರಾಫ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದರು. ಈ ಬಾರಿಯೂ ಸಹ ಅದೇ ಅತಿಥಿ ಪಾತ್ರದ ಹವಾ ಮುಂದುವರೆಸಲಾಗಿದ್ದು, ಇನ್ನೂ ಒಂದು ಹೆಜ್ಜೆ ಮುಂದು ಹೋಗಲೆಂದು, ಬಾಲಿವುಡ್ ಬಾದ್​ಶಾ ಶಾರುಖ್ ಖಾನ್ ಅವರನ್ನು ಅತಿಥಿ ಪಾತ್ರಕ್ಕೆ ಕೇಳಲಾಗಿತ್ತು. ಆದರೆ ಅವರು ನಿರಾಕರಿಸಿದ್ದರು. ಇದೀಗ ಶಾರುಖ್ ಖಾನ್ ಬದಲು ಮತ್ತೊಬ್ಬ ಬಾಲಿವುಡ್ ಸೂಪರ್ ಸ್ಟಾರ್ ಅವರನ್ನು ಕರೆತರಲಾಗಿದೆ. ಆದರೆ ರಜನೀಕಾಂತ್​​ ಜೊತೆಗೆ ಅವರದ್ದು ಹಳೆಯ ಪರಿಚಯ.

ಶಾರುಖ್ ಖಾನ್ ನಿರಾಕರಿಸಿದ ಅತಿಥಿ ಪಾತ್ರದಲ್ಲಿ ಬಾಲಿವುಡ್​​ನ ಸೂಪರ್ ಸ್ಟಾರ್ ಹೃತಿಕ್ ರೋಷನ್ ಅವರು ನಟಿಸಲಿದ್ದಾರೆ. ಹೃತಿಕ್ ರೋಷನ್ ಅವರು ಕಳೆದ ವರ್ಷ, ತೆಲುಗಿನ ಸ್ಟಾರ್ ನಟ ಜೂ ಎನ್​​ಟಿಆರ್ ಜೊತೆಗೆ ‘ವಾರ್ 2’ ಸಿನಿಮಾನಲ್ಲಿ ನಟಿಸಿದ್ದರು. ಇದೀಗ ರಜನೀಕಾಂತ್ ಅವರ ಸಿನಿಮಾನಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ. ಅಂದಹಾಗೆ ರಜನೀಕಾಂತ್ ಮತ್ತು ಹೃತಿಕ್ ರೋಷನ್ ಒಟ್ಟಿಗೆ ನಟಿಸಲಿರುವುದು ಇದು ಮೊದಲೇನೂ ಅಲ್ಲ. ದಶಕಗಳ ಹಿಂದೆಯೇ ಈ ಜೋಡಿ ಒಟ್ಟಿಗೆ ನಟಿಸಿತ್ತು ಎಂಬುದು ಹಲವರಿಗೆ ಗೊತ್ತಿಲ್ಲ.

ಇದನ್ನೂ ಓದಿ:ಸಿಎಂ ಅನ್ನೇ ರಸ್ತೆಯಲ್ಲಿ ನಿಲ್ಲಿಸಿದ್ದ ರಜನೀಕಾಂತ್: ಯಾವ ಸಿನಿಮಾ ಸೀನ್​​ಗೂ ಕಮ್ಮಿ ಇಲ್ಲ

ರಜನಿಕಾಂತ್ ಮತ್ತು ಹೃತಿಕ್ ರೋಷನ್ ಈ ಹಿಂದೆಯೂ ಒಟ್ಟಿಗೆ ಸಿನೆಮಾದಲ್ಲಿ ನಟಿಸಿದ್ದಾರೆ. ಹೃತಿಕ್ ರೋಷನ್ ಅವರು ಬಾಲನಟನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು 1986 ರ ‘ಭಗವಾನ್ ದಾದಾ’ ಎಂಬ ಹಿಂದಿ ಚಿತ್ರದ ಮೂಲಕ. ಆ ಸಿನಿಮಾನಲ್ಲಿ ರಜನಿಕಾಂತ್ ನಾಯಕ. ಆ ಸಿನಿಮಾದಲ್ಲಿ ಹೃತಿಕ್ ರೋಷನ್, ರಜನಿಕಾಂತ್ ಅವರ ಸಾಕು ಮಗನಾಗಿ ನಟಿಸಿದ್ದರು ಮತ್ತು ಹೃತಿಕ್ ತಮ್ಮ ಸಂದರ್ಶನಗಳಲ್ಲಿ ಆ ನೆನಪುಗಳ ಬಗ್ಗೆ ಆಗಾಗ ಅತ್ಯಂತ ಪ್ರೀತಿಯಿಂದ ಮಾತನಾಡಿದ್ದಾರೆ. ಈಗ 40 ವರ್ಷಗಳ ಬಳಿಕ ರಜನೀಕಾಂತ್ ಮತ್ತು ಹೃತಿಕ್ ರೋಷನ್ ಒಟ್ಟಿಗೆ ನಟಿಸುತ್ತಿದ್ದಾರೆ. ವಿಶೇಷವೆಂದರೆ ‘ಜೈಲರ್ 2’ ಸಿನಿಮಾನಲ್ಲೂ ಹೃತಿಕ್ ಅವರು ರಜನೀಕಾಂತ್ ಅವರ ಸಾಕು ಮಗನಾಗಿಯೇ ನಟಿಸಲಿದ್ದಾರಂತೆ.

ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಮತ್ತು ಸನ್ ಪಿಕ್ಚರ್ಸ್ ನಿರ್ಮಿಸುತ್ತಿರುವ ಈ ಚಿತ್ರವು ಈಗಾಗಲೇ ಗೋವಾ, ಕೇರಳ ಮತ್ತು ಚೆನ್ನೈನಲ್ಲಿ ಪ್ರಮುಖ ಶೂಟಿಂಗ್ ಹಂತಗಳನ್ನು ಪೂರ್ಣಗೊಳಿಸಿದೆ. ಅನಿರುದ್ಧ್ ರವಿಚಂದರ್ ಅವರ ಸಂಗೀತ ನಿರ್ದೇಶನವಿರುವ ಈ ಸಿನಿಮಾನಲ್ಲಿ ಶಿವರಾಜ್ ಕುಮಾರ್, ಮೋಹನ್​​ಲಾಲ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ಮುಂದುವರೆದಿದ್ದಾರೆ. ಸಿನಿಮಾ ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Sat, 30 May 26

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ