AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡ ‘ಸಲಾರ್​’; ಎಷ್ಟಾಯಿತು ಬಿಸ್ನೆಸ್​?

ಪ್ರಭಾಸ್​ ಮತ್ತು ಪ್ರಶಾಂತ್​ ನೀಲ್​ ಅವರ ಕಾಂಬಿನೇಷನ್​ ಎಂಬ ಕಾರಣದಿಂದ ‘ಸಲಾರ್​’ ಚಿತ್ರಕ್ಕೆ ಬೇಡಿಕೆ ಬಂದಿದೆ. ಬಿಡುಗಡೆಗೂ ಮುನ್ನ ಭರ್ಜರಿ ಬಿಸ್ನೆಸ್​ ಆಗುತ್ತಿದೆ.

ವಿದೇಶದಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡ ‘ಸಲಾರ್​’; ಎಷ್ಟಾಯಿತು ಬಿಸ್ನೆಸ್​?
ಪ್ರಶಾಂತ್ ನೀಲ್
ಮದನ್​ ಕುಮಾರ್​
|

Updated on:Apr 02, 2023 | 9:53 AM

Share

ಭಾರತದ ಸಿನಿಮಾಗಳು ಈಗ ಹಾಲಿವುಡ್​ ಗುಣಮಟ್ಟದಲ್ಲಿ ಮೂಡಿಬರುತ್ತಿವೆ. ರಾಜಮೌಳಿ, ಪ್ರಶಾಂತ್​ ನೀಲ್​ (Prashanth Neel), ಶಂಕರ್​ ಅವರಂತಹ ನಿರ್ದೇಶಕರು ಅಂಥ ಸಾಧನೆ ಮಾಡಿ ತೋರಿಸಿದ್ದಾರೆ. ಆ ಕಾರಣದಿಂದ ವಿದೇಶದಲ್ಲಿ ಭಾರತದ ಸಿನಿಮಾಗಳಿಗೆ ಭಾರಿ ಬೇಡಿಕೆ ಬಂದಿದೆ. ಅದರಲ್ಲೂ ಸೌತ್​ ಸಿನಿಮಾಗಳು ಸಖತ್​ ಸೌಂಡು ಮಾಡುತ್ತಿವೆ. ಕಳೆದ ವರ್ಷ ‘ಕೆಜಿಎಫ್​ 2’ ಚಿತ್ರ ಮೋಡಿ ಮಾಡಿತ್ತು. ಈಗ ಪ್ರಶಾಂತ್​ ನೀಲ್​ ನಿರ್ದೇಶಿಸುತ್ತಿರುವ ಸಲಾರ್​’ (Salaar Movie) ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ವಿದೇಶದಲ್ಲಿ ಈ ಚಿತ್ರವನ್ನು ವಿತರಣೆ ಮಾಡಲು ದೊಡ್ಡ ದೊಡ್ಡ ಕಂಪನಿಗಳು ಆಸಕ್ತಿ ತೋರಿಸಿವೆ. ಬರೋಬ್ಬರಿ 90ರಿಂದ 100 ಕೋಟಿ ರೂಪಾಯಿಗೆ ವಿತರಣೆ ಹಕ್ಕು ಸೇಲ್​ ಆಗಿದೆ ಎಂದು ಹೇಳಲಾಗುತ್ತಿದೆ.

2022ರಲ್ಲಿ ‘ಆರ್​ಆರ್​ಆರ್​’ ಸಿನಿಮಾದ ವಿದೇಶಿ ವಿತರಣೆ ಹಕ್ಕು 78 ಕೋಟಿ ರೂಪಾಯಿಗೆ ಮಾರಾಟ ಆಗಿತ್ತು. ಅದನ್ನು ಮೀರಿಸುವ ರೀತಿಯಲ್ಲಿ ಈಗ ‘ಸಲಾರ್​’ ಚಿತ್ರಕ್ಕೆ ಬೇಡಿಕೆ ಬಂದಿದೆ. ಇಷ್ಟು ಬೇಡಿಕೆ ಸೃಷ್ಟಿ ಆಗಲು ಪ್ರಭಾಸ್​ ಮತ್ತು ಪ್ರಶಾಂತ್​ ನೀಲ್​ ಅವರ ಕಾಂಬಿನೇಷನ್​ ಕಾರಣ ಎಂಬುದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. ವಿದೇಶಿ ಚಿತ್ರಮಂದಿರಗಳಲ್ಲಿ ‘ಸಲಾರ್​’ ಧೂಳೆಬ್ಬಿಸುವ ಸೂಚನೆ ಸಿಕ್ಕಿದೆ.

‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಮೂಲಕ ‘ಸಲಾರ್​’ ಚಿತ್ರ ಸಿದ್ಧವಾಗುತ್ತಿದೆ. ಈ ಸಿನಿಮಾದ ಮೇಲೆ ಬಹುಕೋಟಿ ರೂಪಾಯಿ​ ಸುರಿಯಲಾಗಿದೆ. ಅದ್ದೂರಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್​ ಜೊತೆ ಶ್ರುತಿ ಹಾಸನ್​, ಪೃಥ್ವಿರಾಜ್​ ಸುಕುಮಾರನ್ ಮುಂತಾದ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ.

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

‘ಸಲಾರ್​’ ಸಿನಿಮಾಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ ಈ ವಿಚಾರ

ಬಹುತೇಕ ‘ಕೆಜಿಎಫ್​: ಚಾಪ್ಟರ್​ 2’ ತಂಡದಲ್ಲಿ ಕೆಲಸ ಮಾಡಿದ್ದ ತಂತ್ರಜ್ಞರೇ ‘ಸಲಾರ್​’ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ರವಿ ಬಸ್ರೂರು ಅವರ ಸಂಗೀತ, ಭುವನ್​ ಗೌಡ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸೆಪ್ಟೆಂಬರ್​ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ‘ಸಲಾರ್​’ ವಿತರಣೆ ಹಕ್ಕುಗಳಿಗೆ ಬರೋಬ್ಬರಿ 200 ಕೋಟಿ ರೂಪಾಯಿ ಡಿಮ್ಯಾಂಡ್​ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರಗಳ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಏನನ್ನೂ ಬಹಿರಂಗಪಡಿಸಿಲ್ಲ. ಆದರೆ ಟಾಲಿವುಡ್​ ಅಂಗಳದಲ್ಲಿ ಈ ಸುದ್ದಿ ಹರಿದಾಡುತ್ತಿದೆ.

ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?

ಇದಲ್ಲದೇ, ಓಂ ರಾವತ್​ ನಿರ್ದೇಶನದ ‘ಆದಿಪುರುಷ್​’ ಸಿನಿಮಾದಲ್ಲೂ ಪ್ರಭಾಸ್​ ನಟಿಸಿದ್ದಾರೆ. ಜುಲೈ 16ರಂದು ಆ ಚಿತ್ರ ಬಿಡುಗಡೆ ಆಗಲಿದೆ. ‘ಆದಿಪುರುಷ್​’ ಗೆದ್ದರೆ ಅಭಿಮಾನಿಗಳ ವಲಯದಲ್ಲಿ ಪ್ರಭಾಸ್​ ಬಗ್ಗೆ ಕ್ರೇಜ್​ ಹೆಚ್ಚಾಗುತ್ತದೆ. ಅದರಿಂದ ‘ಸಲಾರ್​’ ಸಿನಿಮಾಗೆ ಲಾಭ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:22 am, Sun, 2 April 23

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ