ಡ್ರಗ್ಸ್ ಕೇಸ್ನಲ್ಲಿ ನಟಿ ರಕುಲ್ ಸಹೋದರ ಅಮನ್ ಪ್ರೀತ್ ಸಿಂಗ್ ಬಂಧನ
199 ಗ್ರಾಂ ಮಾದಕ ವಸ್ತು, 2 ಪಾಸ್ಪೋರ್ಟ್, 2 ಬೈಕ್ ಹಾಗೂ 10 ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ಕೇಸ್ನಲ್ಲಿ ರಕುಲ್ ಪ್ರೀತ್ ಸಿಂಗ್ ಸಹೋದರ ಅಮನ್ ಪ್ರೀತ್ ಸಿಂಗ್ ಬಂಧನ ಆಗಿದೆ. ಅಮನ್ ಪ್ರೀತ್ ಸಿಂಗ್ ಕೊಕೇನ್ ಸೇವಿಸಿರವುದು ದೃಢಪಟ್ಟಿದೆ. ಆದ್ದರಿಂದ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.
ಖ್ಯಾತ ನಟಿ ರಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ ಪ್ರೀತ್ ಸಿಂಗ್ ಅವರು ಡ್ರಗ್ಸ್ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಹೈದರಾಬಾದ್ನಲ್ಲಿ ಅವರನ್ನು ಬಂಧಿಸಲಾಗಿದೆ. ಸೋಮವಾರ (ಜುಲೈ 15) ಸಂಜೆ ಸುದ್ದಿಗೋಷ್ಠಿ ನಡೆಸಿದ ಹೈದರಾಬಾದ್ ಪೊಲೀಸರು ಅಮನ್ ಪ್ರೀತ್ ಸಿಂಗ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅಮನ್ ಪ್ರೀತ್ ಸಿಂಗ್ಗೆ ಸಂಕಷ್ಟ ಎದುರಾಗಿದೆ. ಸದ್ಯದಲ್ಲೇ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಹೈದರಾಬಾದ್ ಪೊಲೀಸರು 199 ಗ್ರಾಂ ಮಾದಕ ವಸ್ತು, 2 ಬೈಕ್, 2 ಪಾಸ್ಪೋರ್ಟ್ ಮತ್ತು 10 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಇತ್ತೀಚೆಗೆ ಬೆಳಕಿಗೆ ಬಂದ ಡ್ರಗ್ಸ್ ಜಾಲದಲ್ಲಿ ಅಮನ್ ಪ್ರೀತ್ ಸಿಂಗ್ ಕೂಡ ಭಾಗಿ ಆಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಡ್ರಗ್ಸ್ ಪೆಡ್ಲಿಂಗ್ ಮಾಡಿದ ಆರೋಪದಲ್ಲಿ 5 ಜನರನ್ನು ಬಂಧಿಸಲಾಗಿದೆ. ಡ್ರಗ್ಸ್ ಸೇವಿಸಿದ್ದಾರೆ ಎನ್ನಲಾದ ಒಟ್ಟು 13 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಮನ್ ಅವರು ಮಾದಕ ವಸ್ತು ಸೇವಿಸಿರುವುದು ಖಚಿತವಾಗಿದೆ.
ಡ್ರಗ್ಸ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಅಮನ್ ಪ್ರೀತ್ ಸಿಂಗ್ ಅವರಿಗೆ ಬೇರೆ ಯಾವೆಲ್ಲ ವ್ಯಕ್ತಿಗಳ ಜೊತೆ ನಂಟು ಇದೆ ಎಂಬುದು ತನಿಖೆಯಲ್ಲಿ ಬಯಲಾಗಲಿದೆ. ಭಾರತೀಯರು ಮಾತ್ರವಲ್ಲದೇ ಕೆಲವು ನೈಜೀರಿಯನ್ ಪ್ರಜೆಗಳು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರಲ್ಲಿ ಕೆಲವರು ಪದೇ ಪದೇ ಅಪರಾಧ ಎಸಗಿರುವುದು ತಿಳಿದುಬಂದಿದೆ. ಅಮನ್ ಪ್ರೀತ್ ಸಿಂಗ್ ಕೊಕೇನ್ ಸೇವಿಸಿರುವುದು ಖಚಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ.
ಇದನ್ನೂ ಓದಿ: ಡ್ರಗ್ಸ್ ಪಾರ್ಟಿ ಕೇಸ್ನಲ್ಲಿ ಅರೆಸ್ಟ್ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ
ಈ ಮೊದಲು ನಟಿ ರಕುಲ್ ಪ್ರೀತ್ ಸಿಂಗ್ ಹೆಸರು ಕೂಡ ಡ್ರಗ್ಸ್ ಪ್ರಕರಣದಲ್ಲಿ ತಳುಕುಹಾಕಿಕೊಂಡಿತ್ತು. ಡ್ರಗ್ಸ್ ಕೇಸ್ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆಗಿದ್ದಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರುಕುಲ್ ಪ್ರೀತ್ ಸಿಂಗ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಈಗ ಅವರ ಹೆಸರು ಕೇಳಿಬಂದಿಲ್ಲ. ಕೇವಲ ಸಹೋದರ ಅಮನ್ ಪ್ರೀತ್ ಸಿಂಗ್ ಮಾತ್ರ ಡ್ರಗ್ಸ್ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಅನಗತ್ಯವಾಗಿ ರಕುಲ್ ಹೆಸರು ತರುವುದು ಬೇಡ ಎಂದು ಪೊಲೀಸರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.