AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್​ಗೆ ಜೈಲುವಾಸ ಖಾಯಂ, ಪೊಲೀಸರು ಹೇಳಿದ್ದೇನು?

Allu Arjun Arrested: ‘ಪುಷ್ಪ 2’ ಸಿನಿಮಾದ ಬೆನಿಫಿಟ್ ಶೋ ವೇಳೆ ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ಕಾಲ್ತುಳಿದ ವೇಳೆ ಮಹಿಳೆಯೊಬ್ಬರು ನಿಧನರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಲ್ಲು ಅರ್ಜುನ್ ಅನ್ನು ಬಂಧಿಸಿದ್ದು, ಅಲ್ಲು ಅರ್ಜುನ್​ ಕೆಲ ದಿನಗಳ ಕಾಲ ಜೈಲು ವಾಸ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಪೊಲೀಸರ ಹೇಳಿಕೆ ಇಲ್ಲಿದೆ.

ಅಲ್ಲು ಅರ್ಜುನ್​ಗೆ ಜೈಲುವಾಸ ಖಾಯಂ, ಪೊಲೀಸರು ಹೇಳಿದ್ದೇನು?
ಅಲ್ಲು ಅರ್ಜುನ್ ಬಂಧನ
ಮಂಜುನಾಥ ಸಿ.
| Edited By: |

Updated on:Dec 13, 2024 | 3:56 PM

Share

ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಚೀಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ಹೈದರಾಬಾದ್​ನ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಸಾವಿಗೆ ಕಾರಣವಾದ ಕಾರಣ ಪೊಲೀಸರು ಅಲ್ಲು ಅರ್ಜುನ್ ಅನ್ನು ಬಂಧಿಸಿದ್ದು, ಅಲ್ಲು ಅರ್ಜುನ್ ಅನ್ನು ಸ್ಟೇಷನ್ ಬೇಲ್ ನೀಡಿ ಬಿಡುಗಡೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು ಆದರೆ ಅದು ಸುಳ್ಳಾಗಿದೆ.

ಅಲ್ಲು ಅರ್ಜುನ್ ಬಂಧನದ ಬಗ್ಗೆ ಮಾತನಾಡಿರುವ ಹೈದರಾಬಾದ್ ಸಿಪಿ ಸಿವಿ ಆನಂದ್, ‘ಚಿಕ್ಕಡಪಲ್ಲಿ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅನ್ನು ಬಂಧಿಸಲಾಗಿದೆ. ಸಂಧ್ಯಾ ಥಿಯೇಟರ್‌ಗೆ ಅಲ್ಲು ಅರ್ಜುನ್ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು ಅದೇ ಕಾರಣಕ್ಕೆ ಮಹಿಳೆಯ ಸಾವಾಗಿದೆ. ಇದೀಗ ಉಸ್ಮಾನಿಯಾ ಆಸ್ಪತ್ರೆಯಲ್ಲಿ ಅಲ್ಲು ಅರ್ಜುನ್‌ಗೆ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದೇವೆ’ ಎಂದಿದ್ದಾರೆ.

ಇದನ್ನೂ ಓದಿ:ಅಲ್ಲು ಅರ್ಜುನ್ ಬಂಧಿಸಿ ಕರೆದೊಯ್ದ ಪೊಲೀಸರು: ವಿಡಿಯೋ ಇಲ್ಲಿದೆ ಆ ಮೂಲಕ ಅಲ್ಲು ಅರ್ಜುನ್ ಗೆ ಸ್ಟೇಷನ್ ಬೇಲ್ ನೀಡುವುದಿಲ್ಲ ಬದಲಿಗೆ ನ್ಯಾಯಾಂಗ ಬಂಧನಕ್ಕೆ ನೀಡುವುದನ್ನು ಪೊಲೀಸರು ಖಾತ್ರಿಪಡಿಸಿದ್ದಾರೆ. ಅಲ್ಲು ಅರ್ಜುನ್ ಅನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದಲ್ಲಿ ಕನಿಷ್ಟ 14 ದಿನಗಳ ಕಾಲ ಅವರು ಜೈಲು ವಾಸ ಅನುಭವಿಸಬೇಕಿರುತ್ತದೆ. ಆ ಬಳಿಕ ಜಾಮೀನಿಗೆ ಅವರು ಪ್ರಯತ್ನಿಸಬಹುದಾಗಿರುತ್ತದೆ. ಕೆಲವು ಪ್ರಕರಣದಲ್ಲಿ ಮೊದಲ ದಿನವೇ ಜಾಮೀನು ದೊರೆಯುವ ಸಾಧ್ಯತೆಯೂ ಇರುತ್ತದೆ. ಅಲ್ಲು ಅರ್ಜುನ್ ಪ್ರಕರಣದಲ್ಲಿ ಏನಾಗುತ್ತದೆ ಎಂಬುದು ಸಂಜೆ ವೇಳೆಗೆ ತಿಳಿದು ಬರಲಿದೆ.

ಅಲ್ಲು ಅರ್ಜುನ್ ಬಂಧನದ ವಿಡಿಯೋ ಇಲ್ಲಿದೆ

ಅಲ್ಲು ಅರ್ಜುನ್ ಬಂಧನದ ಬಗ್ಗೆ ಅವರ ಅಭಿಮಾನಿಗಳು ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹೈದರಾಬಾದ್ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲು ಅರ್ಜುನ್ ಬಂಧನದಲ್ಲಿ ಅರ್ಥವೇ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಹಿಳೆ ಸಾವಿನಲ್ಲಿ ಅಲ್ಲು ಅರ್ಜುನ್ ಪಾತ್ರ ಏನೂ ಇಲ್ಲ, ವಿನಾಕರಣ ಅಲ್ಲು ಅರ್ಜುನ್ ಅನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Fri, 13 December 24