AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರಾ ಪ್ರೀಕ್ವೆಲ್​ನಲ್ಲಿ ನಾನಿರಲ್ಲ, ನನ್ನ ಜಾಗಕ್ಕೆ ಬೇರೆಯವರು ಬಂದಿದ್ದಾರೆ’; ಸಪ್ತಮಿ ಗೌಡ

ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ ಅವರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ಸಪ್ತಮಿ ಗೌಡ ಅವರು ಮಾತಿಗೆ ಸಿಕ್ಕರು. ಈ ವೇಳೆ ತಾವು ‘ಕಾಂತಾರಾ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಕಾಂತಾರಾ ಪ್ರೀಕ್ವೆಲ್​ನಲ್ಲಿ ನಾನಿರಲ್ಲ, ನನ್ನ ಜಾಗಕ್ಕೆ ಬೇರೆಯವರು ಬಂದಿದ್ದಾರೆ’; ಸಪ್ತಮಿ ಗೌಡ
ಸಪ್ತಮಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Apr 15, 2024 | 8:49 AM

Share

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ (Kantara Movie) ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೆಟ್ಟೇರುತ್ತಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ನಟಿಸೋದು ಖಚಿತವಾಗಿದೆ. ಅವರೇ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ. ‘ಕಾಂತಾರ’ದಲ್ಲಿ ಲೀಲಾ ಹೆಸರಿನ ಪಾತ್ರ ಮಾಡಿದ್ದ ಸಪ್ತಮಿ ಗೌಡ ಅವರು ‘ಕಾಂತಾರ: ಚಾಪ್ಟರ್ 1’ನಲ್ಲಿ ನಟಿಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಇದಕ್ಕೆ ಸಪ್ತಮಿ ಗೌಡ ಅವರೇ ಸ್ಪಷ್ಟನೆ ನೀಡಿದ್ದಾರೆ.

ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ ಅವರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ಸಪ್ತಮಿ ಗೌಡ ಅವರು ಮಾತಿಗೆ ಸಿಕ್ಕರು. ಈ ವೇಳೆ ತಾವು ‘ಕಾಂತಾರಾ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ.

‘ನಾನು ನಟಿಸುತ್ತಿಲ್ಲ. ಆ ಪಾತ್ರಕ್ಕೆ ಬೇರೆಯವರು ಬಂದಿದ್ದಾರೆ. ಈಗ ಸಿದ್ಧವಾಗುತ್ತಿರುವುದು ಪ್ರೀಕ್ವೆಲ್. ಆ ಪಾತ್ರವೇ ಇಲ್ಲ ಎಂದಾಗ ನಾನು ನಟಿಸೋದು ಹೇಗೆ’ ಎಂದು ಕೇಳಿದ್ದಾರೆ ಸಪ್ತಮಿ ಗೌಡ. ‘ನನಗೆ ಏನೇ ಸಿಕ್ಕಿದ್ದರೂ ಅದು ಕಾಂತಾರದಿಂದ. ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದರೂ ಈಗಲೂ ಅದರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆ ಸಿನಿಮಾದ ಶೂಟಿಂಗ್ ಇನ್ನೇನು ಶುರುವಾಗುತ್ತದೆ ಕಾಂತಾರ ಪ್ರೀಕ್ವೆಲ್ ನಿಮಗೆ ಇಷ್ಟ ಆಗುತ್ತದೆ’ ಎಂದಿದ್ದಾರೆ ಸಪ್ತಮಿ ಗೌಡ.

ಸಪ್ತಮಿ ಗೌಡ ಅವರು ‘ಕಾಂತಾರಾ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿಲ್ಲ. ಆದರೂ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ಬಗ್ಗೆ ಸಖತ್ ಎಗ್ಸೈಟ್ ಆಗಿದ್ದಾರೆ. ಅದು ನಮ್ಮ ತಂಡ ಎನ್ನುವ ಭಾವನೆ ಅವರಿಗೆ ಇದೆ.

ಇದನ್ನೂ ಓದಿ: ಕಿರುತೆರೆಗೆ ಪ್ರವೇಶಿಸಿದ ‘ಕಾಂತಾರ’ ಚೆಲುವೆ ಸಪ್ತಮಿ ಗೌಡ

ಸಪ್ತಮಿ ಅವರು ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ನಟಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಅವರು ವಿಜ್ಞಾನಿಯ ಪಾತ್ರ ಮಾಡಿದ್ದರು. ಈ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ದಕ್ಷಿಣ ಹಾಗೂ ಬಾಲಿವುಡ್ ಎನ್ನುವ ಚರ್ಚೆ ಮೊದಲಿನಿಂದಲೂ ಇದೆ. ಆದರೆ, ಅವರಿಗೆ ಯಾವುದೇ ವ್ಯತ್ಯಾಸ ಕಾಣಿಸಿಲ್ಲವಂತೆ. ಈ ಬಗ್ಗೆ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್ ಜೊತೆ ಕೆಲಸ ಮಾಡಿದ ಅನುಭವ ಹೋಲಿಸಿದರೆ ಎಲ್ಲದಕ್ಕೂ ಸಮ. ಬಾಲಿವುಡ್​ ಸ್ಟ್ಯಾಂಡರ್ಡ್​​ನಲ್ಲೇ ಅವರು ಕೆಲಸ ಮಾಡುತ್ತಾರೆ’ ಎಂದಿದ್ದಾರೆ ಸಪ್ತಮಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:26 am, Sun, 14 April 24

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ