AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಲ್ಲ, ಕೊರೊನಾ ಬಳಲುತ್ತಿದೆ; ಅಚ್ಚರಿಯ ಟ್ವೀಟ್​ ಮಾಡಿದ ಸೋನು ಸೂದ್

ಇದಾದ ಬೆನ್ನಲ್ಲೇ ಅನೇಕರು ಸೋನು ಸೂದ್​ ಆರೋಗ್ಯ ಹೇಗಿದೆ ಎಂದು ಅನೇಕರು ಕೇಳಿದ್ದರು. ಸಾಕಷ್ಟು ಜನರು ಕಾಳಜಿ ತೋರಿದ್ದರು. ಈ ಬಗ್ಗೆ ಸೂನು ಸೂದು ಟ್ವೀಟ್​ ಮಾಡಿದ್ದಾರೆ.

ನಾನಲ್ಲ, ಕೊರೊನಾ ಬಳಲುತ್ತಿದೆ; ಅಚ್ಚರಿಯ ಟ್ವೀಟ್​ ಮಾಡಿದ ಸೋನು ಸೂದ್
ನಟ ಸೋನು ಸೂದ್
ರಾಜೇಶ್ ದುಗ್ಗುಮನೆ
|

Updated on: Apr 19, 2021 | 6:07 PM

Share

ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಅನೇಕರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದ ನಟ ಸೋನು ಸೂದ್​ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಟ್ವೀಟ್​ ನೋಡಿದ ಅನೇಕರು ಸೋನು ಸೂದ್ ಬಗ್ಗೆ​ ಕಳವಳ ವ್ಯಕ್ತಪಡಿಸಿದ್ದರು. ಈಗ ಸೋನು ಸೂದ್ ಅಚ್ಚರಿಯ ಟ್ವೀಟ್​ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಅವರ ಪಾಸಿಟಿವಿಟಿ ನೋಡಿ ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್​ ಪಾಸಿಟಿವ್​ ಆಗಿದೆ. ಆದರೆ ಮನಸ್ಸು ಮತ್ತು ಉತ್ಸಾಹ ಸೂಪರ್​ ಪಾಸಿಟಿವ್​ ಆಗಿದೆ. ಎಲ್ಲರಿಗೂ ಹಾಯ್​. ಇಂದು ಬೆಳಗ್ಗೆ ನನಗೆ ಕೊವಿಡ್​-19 ಪಾಸಿಟಿವ್​ ಆಗಿದೆ ಎಂಬುದನ್ನು ತಿಳಿಸುತ್ತಿದ್ದೇನೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ಕ್ವಾರಂಟೈನ್​ ಆಗಿದ್ದೇನೆ. ಹೆಚ್ಚಿನ ಕಾಳಜಿ ವಹಿಸುತ್ತಿದ್ದೇನೆ. ಆದರೆ ಚಿಂತೆ ಮಾಡುವುದು ಬೇಡ. ನಿಮ್ಮೆಲ್ಲರ ಸಮಸ್ಯೆಯನ್ನು ಪರಿಹರಿಸಲು ನನಗೆ ಇದರಿಂದ ಹೆಚ್ಚಿನ ಸಮಯ ಸಿಗಲಿದೆ. ನಿಮಗಾಗಿ ನಾನು ಸದಾ ಇರುತ್ತೇನೆ ಎಂಬುದನ್ನು ನೆನಪಿಡಿ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸೋನು ಸೂದ್​​ ಬರೆದುಕೊಂಡಿದ್ದರು.

ಇದಾದ ಬೆನ್ನಲ್ಲೇ  ಆರೋಗ್ಯ ಹೇಗಿದೆ ಎಂದು ಅಭಿಮಾನಿಗಳು ಟ್ವೀಟ್​ ಮಾಡಿ ಕೇಳಿದ್ದರು. ಸಾಕಷ್ಟು ಜನರು ಕಾಳಜಿ ತೋರಿದ್ದರು.ಇದಕ್ಕೆ ಸೋನು ಸೂದ್​ ಉತ್ತರಿಸಿದ್ದಾರೆ. ಜನರು ನೀವು ಹೇಗಿದ್ದೀರಿ ಎಂದು ಕೇಳುತ್ತಾರೆ. ಇದಕ್ಕೆ ನಾನು ಹೇಳೋದು, ನಾನು ಆರಾಮಾಗಿದ್ದೇನೆ. ಕೊರೊನಾ ಬಳಲುತ್ತಿದೆ ಎಂದು ಬರೆದುಕೊಂಡಿದ್ದಾರೆ.

2020ರಲ್ಲಿ ಕಠಿಣ ಲಾಕ್​ಡೌನ್​ ಜಾರಿಯಾಗಿದ್ದಾಗ ಸಾವಿರಾರು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಕಷ್ಟಪಡುತ್ತಿದ್ದರು. ಎಷ್ಟೋ ಜನರು ಕಾಲ್ನಡಿಗೆಯಲ್ಲೇ ನೂರಾರು ಕಿಲೋ ಮೀಟರ್​ ಪ್ರಯಾಣ ಮಾಡಿದರು. ಆ ವೇಳೆ ಸೋನು ಸೂದ್​ ರಿಯಲ್​ ಹೀರೋ ರೀತಿಯಲ್ಲಿ ಬಡಜನರ ಸಹಾಯಕ್ಕೆ ಧಾವಿಸಿದ್ದರು. ವಿದೇಶದಲ್ಲಿ ಸಿಲುಕಿಕೊಂಡಿದ್ದವರನ್ನು ಭಾರತಕ್ಕೆ ಕರೆತರಲು ಸೋನು ಸೂದ್​ ಶ್ರಮಿಸಿದ್ದರು. ಕಾರ್ಮಿಕರನ್ನು ವಿಮಾನದ ಮೂಲಕ ಅವರವರ ಊರುಗಳಿಗೆ ತಲುಪಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸೋನು ಸೂದ್​ ಗಮನ ಸೆಳೆದಿದ್ದರು.

ಇದನ್ನೂ ಓದಿ: Sonu Sood Corona Positive: ಸೋನು ಸೂದ್​ಗೆ ಕೊರೊನಾ ಪಾಸಿಟಿವ್​; ಬಡವರ ಪಾಲಿನ ರಿಯಲ್​ ಹೀರೋಗೆ ಈಗ ಕಷ್ಟಕಾಲ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!