ನಾನಲ್ಲ, ಕೊರೊನಾ ಬಳಲುತ್ತಿದೆ; ಅಚ್ಚರಿಯ ಟ್ವೀಟ್​ ಮಾಡಿದ ಸೋನು ಸೂದ್

ಇದಾದ ಬೆನ್ನಲ್ಲೇ ಅನೇಕರು ಸೋನು ಸೂದ್​ ಆರೋಗ್ಯ ಹೇಗಿದೆ ಎಂದು ಅನೇಕರು ಕೇಳಿದ್ದರು. ಸಾಕಷ್ಟು ಜನರು ಕಾಳಜಿ ತೋರಿದ್ದರು. ಈ ಬಗ್ಗೆ ಸೂನು ಸೂದು ಟ್ವೀಟ್​ ಮಾಡಿದ್ದಾರೆ.

ನಾನಲ್ಲ, ಕೊರೊನಾ ಬಳಲುತ್ತಿದೆ; ಅಚ್ಚರಿಯ ಟ್ವೀಟ್​ ಮಾಡಿದ ಸೋನು ಸೂದ್
ನಟ ಸೋನು ಸೂದ್

Updated on: Apr 19, 2021 | 6:07 PM

ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಅನೇಕರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದ ನಟ ಸೋನು ಸೂದ್​ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಟ್ವೀಟ್​ ನೋಡಿದ ಅನೇಕರು ಸೋನು ಸೂದ್ ಬಗ್ಗೆ​ ಕಳವಳ ವ್ಯಕ್ತಪಡಿಸಿದ್ದರು. ಈಗ ಸೋನು ಸೂದ್ ಅಚ್ಚರಿಯ ಟ್ವೀಟ್​ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಅವರ ಪಾಸಿಟಿವಿಟಿ ನೋಡಿ ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊವಿಡ್​ ಪಾಸಿಟಿವ್​ ಆಗಿದೆ. ಆದರೆ ಮನಸ್ಸು ಮತ್ತು ಉತ್ಸಾಹ ಸೂಪರ್​ ಪಾಸಿಟಿವ್​ ಆಗಿದೆ. ಎಲ್ಲರಿಗೂ ಹಾಯ್​. ಇಂದು ಬೆಳಗ್ಗೆ ನನಗೆ ಕೊವಿಡ್​-19 ಪಾಸಿಟಿವ್​ ಆಗಿದೆ ಎಂಬುದನ್ನು ತಿಳಿಸುತ್ತಿದ್ದೇನೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ಕ್ವಾರಂಟೈನ್​ ಆಗಿದ್ದೇನೆ. ಹೆಚ್ಚಿನ ಕಾಳಜಿ ವಹಿಸುತ್ತಿದ್ದೇನೆ. ಆದರೆ ಚಿಂತೆ ಮಾಡುವುದು ಬೇಡ. ನಿಮ್ಮೆಲ್ಲರ ಸಮಸ್ಯೆಯನ್ನು ಪರಿಹರಿಸಲು ನನಗೆ ಇದರಿಂದ ಹೆಚ್ಚಿನ ಸಮಯ ಸಿಗಲಿದೆ. ನಿಮಗಾಗಿ ನಾನು ಸದಾ ಇರುತ್ತೇನೆ ಎಂಬುದನ್ನು ನೆನಪಿಡಿ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸೋನು ಸೂದ್​​ ಬರೆದುಕೊಂಡಿದ್ದರು.

ಇದಾದ ಬೆನ್ನಲ್ಲೇ  ಆರೋಗ್ಯ ಹೇಗಿದೆ ಎಂದು ಅಭಿಮಾನಿಗಳು ಟ್ವೀಟ್​ ಮಾಡಿ ಕೇಳಿದ್ದರು. ಸಾಕಷ್ಟು ಜನರು ಕಾಳಜಿ ತೋರಿದ್ದರು.ಇದಕ್ಕೆ ಸೋನು ಸೂದ್​ ಉತ್ತರಿಸಿದ್ದಾರೆ. ಜನರು ನೀವು ಹೇಗಿದ್ದೀರಿ ಎಂದು ಕೇಳುತ್ತಾರೆ. ಇದಕ್ಕೆ ನಾನು ಹೇಳೋದು, ನಾನು ಆರಾಮಾಗಿದ್ದೇನೆ. ಕೊರೊನಾ ಬಳಲುತ್ತಿದೆ ಎಂದು ಬರೆದುಕೊಂಡಿದ್ದಾರೆ.

2020ರಲ್ಲಿ ಕಠಿಣ ಲಾಕ್​ಡೌನ್​ ಜಾರಿಯಾಗಿದ್ದಾಗ ಸಾವಿರಾರು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಕಷ್ಟಪಡುತ್ತಿದ್ದರು. ಎಷ್ಟೋ ಜನರು ಕಾಲ್ನಡಿಗೆಯಲ್ಲೇ ನೂರಾರು ಕಿಲೋ ಮೀಟರ್​ ಪ್ರಯಾಣ ಮಾಡಿದರು. ಆ ವೇಳೆ ಸೋನು ಸೂದ್​ ರಿಯಲ್​ ಹೀರೋ ರೀತಿಯಲ್ಲಿ ಬಡಜನರ ಸಹಾಯಕ್ಕೆ ಧಾವಿಸಿದ್ದರು. ವಿದೇಶದಲ್ಲಿ ಸಿಲುಕಿಕೊಂಡಿದ್ದವರನ್ನು ಭಾರತಕ್ಕೆ ಕರೆತರಲು ಸೋನು ಸೂದ್​ ಶ್ರಮಿಸಿದ್ದರು. ಕಾರ್ಮಿಕರನ್ನು ವಿಮಾನದ ಮೂಲಕ ಅವರವರ ಊರುಗಳಿಗೆ ತಲುಪಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸೋನು ಸೂದ್​ ಗಮನ ಸೆಳೆದಿದ್ದರು.

ಇದನ್ನೂ ಓದಿ: Sonu Sood Corona Positive: ಸೋನು ಸೂದ್​ಗೆ ಕೊರೊನಾ ಪಾಸಿಟಿವ್​; ಬಡವರ ಪಾಲಿನ ರಿಯಲ್​ ಹೀರೋಗೆ ಈಗ ಕಷ್ಟಕಾಲ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us