AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR ಚಿತ್ರಕ್ಕೆ ಆಸ್ಕರ್​ ಸಿಕ್ಕರೆ ಏನಾಗುತ್ತದೆ? ಅಭಿಪ್ರಾಯ ತಿಳಿಸಿದ ನಿರ್ದೇಶಕ ರಾಜಮೌಳಿ

‘ಆರ್​ಆರ್​ಆರ್​’ ಸಿನಿಮಾ ನೋಡಿ ಭಾರತೀಯ ಪ್ರೇಕ್ಷಕರು ಫಿದಾ ಆಗಿದ್ದಾರೆ. ವಿದೇಶದ ಮಂದಿ ಕೂಡ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಬರುವ ಎರಡು ಪಾತ್ರಗಳನ್ನು ಇಟ್ಟುಕೊಂಡು ರಾಜಮೌಳಿ ಅವರು ಈ ಕಥೆ ಹೆಣೆದಿದ್ದಾರೆ.

RRR ಚಿತ್ರಕ್ಕೆ ಆಸ್ಕರ್​ ಸಿಕ್ಕರೆ ಏನಾಗುತ್ತದೆ? ಅಭಿಪ್ರಾಯ ತಿಳಿಸಿದ ನಿರ್ದೇಶಕ ರಾಜಮೌಳಿ
ರಾಜಮೌಳಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 18, 2022 | 12:44 PM

Share

ಭಾರತದ ಯಾವ ಸಿನಿಮಾಗೂ ಆಸ್ಕರ್ ಪ್ರಶಸ್ತಿ ಅಥವಾ ಅಕಾಡೆಮಿ ಅವಾರ್ಡ್ (Academy Awards) ಸಿಕ್ಕಿಲ್ಲ. ಇದನ್ನು ಪಡೆಯಬೇಕು ಎಂದು ಅನೇಕ ನಿರ್ದೇಶಕರು ಪ್ರಯತ್ನಿಸಿದ್ದಾರೆ. ಆದರೆ, ಅದು ಯಶಸ್ವಿ ಆಗಿಲ್ಲ. ‘ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ’ ವಿಭಾಗದಲ್ಲಿ ಬೇರೆ ಭಾಷೆಯ ಚಿತ್ರಗಳಿಗೆ ಆಸ್ಕರ್​ ಪ್ರಶಸ್ತಿ ನೀಡಲಾಗುತ್ತದೆ. ಈ ವಿಭಾಗಕ್ಕೆ ಭಾರತದ ಸಿನಿಮಾ ನಾಮಿನೇಟ್ ಆಗಿದ್ದು 21 ವರ್ಷಗಳ ಹಿಂದೆ. ಅಲ್ಲಿಂದ ಇಲ್ಲಿಯವರೆಗೆ ಯಾವುದೇ ಸಿನಿಮಾ ಕೂಡ ಆಸ್ಕರ್​ಗೆ ನಾಮಿನೇಟ್ ಆಗಿಲ್ಲ. ಈ ಬಾರಿ ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್​’ ಚಿತ್ರ (RRR Movie) ಈ ವಿಭಾಗಕ್ಕೆ ನಾಮನಿರ್ದೇಶನಗೊಳ್ಳುವ ಸಾಧ್ಯತೆ ಇದೆ. ರಾಜಮೌಳಿ ಹೋದಲ್ಲಿ ಬಂದಲ್ಲಿ ಆಸ್ಕರ್​ಗಾಗಿ ಪ್ರಚಾರ ಮಾಡುತ್ತಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ನೋಡಿ ಭಾರತೀಯ ಪ್ರೇಕ್ಷಕರು ಫಿದಾ ಆಗಿದ್ದಾರೆ. ವಿದೇಶದ ಮಂದಿ ಕೂಡ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಬರುವ ಎರಡು ಪಾತ್ರಗಳನ್ನು ಇಟ್ಟುಕೊಂಡು ರಾಜಮೌಳಿ ಅವರು ಈ ಕಥೆ ಹೆಣೆದಿದ್ದಾರೆ. ಈ ಸಿನಿಮಾ ವಿಶ್ವ ಬಾಕ್ಸ್​ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿದೆ. ಈ ಸಿನಿಮಾ ಆಸ್ಕರ್​​ಗೆ ನಾಮನಿರ್ದೇಶನಗೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿ ಎಲ್ಲ ಕಡೆಗಳಲ್ಲಿ ಹರಿದಾಡುತ್ತಿದೆ. ಹೀಗಿರುವಾಗಲೇ ರಾಜಮೌಳಿ ಅವರು ಈ ಚಿತ್ರಕ್ಕೆ ಆಸ್ಕರ್ ಸಿಗಲೇಬೇಕು ಎಂದು ಪ್ರಚಾರ ಆರಂಭಿಸಿದ್ದಾರೆ.

ಕೆಲವು ದಿನಗಳ ಹಿಂದೆ ರಾಜಮೌಳಿ ಅವರು ಟೊರೊಂಟೊ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿ ಆಗಿದ್ದರು. ಈ ವೇಳೆ ಅವರು ‘ಆರ್​ಆರ್​ಆರ್​’ ಚಿತ್ರಕ್ಕೆ ಆಸ್ಕರ್​ ಸಿಗಬೇಕು ಎಂದು ಪ್ರತಿಪಾದಿಸಿದ್ದಾರೆ. ‘ಆಸ್ಕರ್ ಗೆದ್ದರೆ ಆರ್​ಆರ್​ಆರ್ ತಂಡಕ್ಕೆ ಹಾಗೂ ನಮ್ಮ ಭಾರತದ ಸಿನಿಮಾ ಇಂಡಸ್ಟ್ರಿಗೆ ದೊಡ್ಡ ಬೂಸ್ಟ್ ಸಿಗಲಿದೆ. ಆಸ್ಕರ್ ಗೆಲ್ಲಲಿ ಅಥವಾ ಬಿಡಲಿ ಅದು ನನ್ನ ಮುಂದಿನ ಸಿನಿಮಾ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ನಾನು ಹೇಗೆ ಸಿನಿಮಾ ಮಾಡಬೇಕು ಎಂದುಕೊಂಡಿದ್ದೀನೋ ಹಾಗೆಯೇ ಮಾಡುತ್ತೇನೆ’ ಎಂದಿದ್ದಾರೆ ರಾಜಮೌಳಿ.

ಇದನ್ನೂ ಓದಿ
Image
RRR OTT Release: ‘ಆರ್​ಆರ್​ಆರ್​’ ಚಿತ್ರ ಒಟಿಟಿಯಲ್ಲಿ ಪ್ರಸಾರ ಆಗೋದು ಯಾವಾಗ? ಆ ದಿನಾಂಕಕ್ಕಾಗಿ ಕಾದಿರುವ ಫ್ಯಾನ್ಸ್​
Image
RRR 2: ಆರ್​ಆರ್​ಆರ್​ ಸೀಕ್ವೆಲ್​ ಮಾಡಲು ಉತ್ಸಾಹ ತೋರಿದ ರಾಜಮೌಳಿ, ರಾಮ್​ ಚರಣ್​, ಜ್ಯೂ. ಎನ್​ಟಿಆರ್​
Image
‘RRR’ ಯಶಸ್ಸು; ಚಿತ್ರತಂಡಕ್ಕೆ 18 ಲಕ್ಷ ಮೌಲ್ಯದ ಚಿನ್ನದ ನಾಣ್ಯ ಉಡುಗೊರೆ ನೀಡಿದ ನಟ ರಾಮ್ ಚರಣ್
Image
RRR Twitter Review: ನಿದ್ದೆ ಬಿಟ್ಟು ‘ಆರ್​ಆರ್​ಆರ್​’ ಸಿನಿಮಾ ನೋಡಿ ಬಂದ ಪ್ರೇಕ್ಷಕರು ಏನಂದ್ರು?

ಇದನ್ನೂ ಓದಿ: ನಿಂತೇ ಹೋಯ್ತು ರಾಮ್ ಚರಣ್ ಹೊಸ ಸಿನಿಮಾ?; ರಾಜಮೌಳಿ ಎಫೆಕ್ಟ್​ ಎಂದು ದೂಷಿಸಿದ ಫ್ಯಾನ್ಸ್

ರಾಜಮೌಳಿ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ಅವರ ನಿರ್ದೇಶನದ ‘ಬಾಹುಬಲಿ’, ‘ಬಾಹುಬಲಿ 2’, ‘ಆರ್​ಆರ್​ಆರ್​’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ. ‘ಆರ್​ಆರ್​ಆರ್’ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಈ ಚಿತ್ರ ಆಸ್ಕರ್ ಕೂಡ ಗೆಲ್ಲಲಿ ಎಂಬುದು ಅನೇಕರ ಆಶಯ. ಒಂದೊಮ್ಮೆ ಈ ಸಿನಿಮಾ ಅಕಾಡೆಮಿ ಅವಾರ್ಡ್ಸ್​ ಗೆದ್ದರೆ ಹೊಸ ದಾಖಲೆ ಸೃಷ್ಟಿ ಆಗಲಿದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ