AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ 2’ ಚಿತ್ರಕ್ಕಾಗಿ ಇನ್ನೂ ಆರು ತಿಂಗಳು ಶೂಟ್ ಮಾಡೋಕೆ ರೆಡಿ ಇದ್ದಾರೆ ಅಲ್ಲು ಅರ್ಜುನ್
ಅಲ್ಲು ಅರ್ಜುನ್-ಸುಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 20, 2024 | 8:46 AM

Share

ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ ಮಧ್ಯೆ ಕಿರಿಕ್ ಆಗಿದೆ ಎನ್ನುವ ಮಾತು ಎಲ್ಲ ಕಡೆಗಳಲ್ಲಿ ಹರಿದಾಡಿದೆ. ಈ ಕಾರಣಕ್ಕೆ ಅಲ್ಲು ಅರ್ಜುನ್ ಅವರು ‘ಪುಷ್ಪ 2’ ಚಿತ್ರದ ಲುಕ್​ಗೆ ಬ್ರೇಕ್ ಹಾಕಿ ವಿದೇಶಕ್ಕೆ ಹಾರಿದ್ದಾರೆ ಎಂದು ವರದಿ ಆಗಿತ್ತು. ಆದರೆ, ಇದರಲ್ಲಿ ನಿಜವಿಲ್ಲ ಎಂದು ತಂಡದ ಮೂಲಗಳು ಹೇಳಿದ್ದವು. ಈಗ ಅಲ್ಲು ಅರ್ಜುನ್ ಅವರ ಆಪ್ತ ಗೆಳೆಯ ಹಾಗೂ ಗೀತಾ ಆರ್ಟ್ಸ್​ನ ನಿರ್ಮಾಪಕರಲ್ಲಿ ಒಬ್ಬರಾದ ಬನ್ನಿ ವಾಸು ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪುಷ್ಪ 2’ ಸಿನಿಮಾದ ಕೆಲಸಗಳು ವಿಳಂಬ ಆಗುತ್ತಿರುವುದಕ್ಕೂ ಇದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಪುಷ್ಪ 2’ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ತಂಡದವರು ಸಿನಿಮಾದ ಬಿಡುಗಡೆ ದಿನಾಂಕವನ್ನು ಡಿಸೆಂಬರ್​ಗೆ ಮುಂದೂಡಿದರು. ಹೀಗೆಕೆ ಎನ್ನುವ ಪ್ರಶ್ನೆ ಮೂಡಿತ್ತು. ಈ ಮಧ್ಯೆ ಅಲ್ಲು ಅರ್ಜುನ್ ಅವರು ಯುರೋಪ್ ಪ್ರವಾಸ ತೆರಳಿದರೆ, ಸುಕುಮಾರ್ ಅಮೆರಿಕಕ್ಕೆ ಹಾರಿದರು. ಈ ಎಲ್ಲಾ ಕಾರಣದಿಂದ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆದರೆ, ಇದರಲ್ಲಿ ಸತ್ಯ ಇಲ್ಲ ಎನ್ನುವ ಸ್ಪಷ್ಟನೆ ಸಿಕ್ಕಿದೆ.

ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ್ದ ಬನ್ನಿ ವಾಸು ಅವರು, ‘ನಾವು ಈ ರೀತಿಯ ವದಂತಿಗಳನ್ನು ಕೇಳಿ ನಕ್ಕಿದ್ದೇವೆ. ಎಲ್ಲರೂ ತಮಗೆ ಬೇಕಾದ ರೀತಿಯಲ್ಲಿ ಬರೆದುಕೊಳ್ಳುತ್ತಿದ್ದಾರೆ. ನಡೆದ ಘಟನೆಯನ್ನು ಸಂಪೂರ್ಣವಾಗಿ ನೆಗೆಟಿವ್ ರೀತಿಯಲ್ಲಿ ಬಿಂಬಿಸಲಾಗಿದೆ’ ಎಂದು ಬನ್ನಿ ವಾಸು ಹೇಳಿದ್ದಾರೆ. ಈ ಮೂಲಕ ವಿವಾದಗಳಿಗೆ ತೆರೆ ಎಳೆದಿದ್ದಾರೆ.

‘ಪುಷ್ಪ 2 ಸಿನಿಮಾದ 15 ದಿನಗಳ ಕೆಲಸ ಮಾತ್ರ ಬಾಕಿ ಇದೆ. ಅದರಲ್ಲಿ ಕ್ಲೈಮ್ಯಾಕ್ಸ್ ಹಾಗೂ ಸಾಂಗ್ ಇದೆ. ಸಿನಿಮಾ ಶೂಟಿಂಗ್ ಪೂರ್ಣಗೊಳಿಸಲು ಫಹಾದ್ ಫಾಸಿಲ್ ಡೇಟ್ಸ್​ನ ಅಗತ್ಯ ಇದೆ’ ಎಂದು ಅವರು ಹೇಳಿದ್ದಾರೆ. ಈ ಮೂಲಕ ಸಿನಿಮಾ ವಿಳಂಬಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಬಿಡುಗಡೆ ಸಂದರ್ಭದಲ್ಲೇ ಬರಲಿದೆ ‘ಗೇಮ್ ಚೇಂಜರ್’; ರಾಮ್​-ಅಲ್ಲು ಮುಖಾಮುಖಿ?

‘ಸುಕುಮಾರ್ ಅವರು ಈ ಚಿತ್ರದ ಶೂಟಿಂಗ್ ಇನ್ನೂ ಆರು ತಿಂಗಳು ಶೂಟ್ ಮಾಡಬೇಕು ಎಂದರೆ ಅಲ್ಲು ಅರ್ಜುನ್ ಇದಕ್ಕೆ ಒಪ್ಪಿಕೊಳ್ಳುತ್ತಾರೆ. ಇಬ್ಬರ ಮಧ್ಯೆ ಅಷ್ಟು ಒಳ್ಳೆಯ ಬಾಂಡಿಗೆ ಇದೆ. ಅದನ್ನು ಈಗ ಪ್ರಶ್ನೆ ಮಾಡಬೇಡಿ’ ಎಂದಿದ್ದಾರೆ ವಾಸು. ಈ ಮೂಲಕ ಎಲ್ಲಾ ವಿವಾದಗಳಿಗೆ ತೆರೆ ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Sat, 20 July 24

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್