AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಪ್ರಶ್ನೆ ಪದೇಪದೇ ಕೇಳಿದ್ರೆ ಸಿನಿಮಾ ಮಾಡೋದನ್ನೇ ನಿಲ್ಲಿಸ್ತೀನಿ’; ಫ್ಯಾನ್ಸ್​ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಕೆಲ ಮಾಧ್ಯಮದವರು ಕೂಡ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಜೂನಿಯರ್ ಎನ್​ಟಿಆರ್​ ಸಿಟ್ಟಾಗಿದ್ದಾರೆ.

‘ಆ ಪ್ರಶ್ನೆ ಪದೇಪದೇ ಕೇಳಿದ್ರೆ ಸಿನಿಮಾ ಮಾಡೋದನ್ನೇ ನಿಲ್ಲಿಸ್ತೀನಿ’; ಫ್ಯಾನ್ಸ್​ಗೆ ಜೂನಿಯರ್ ಎನ್​ಟಿಆರ್ ಎಚ್ಚರಿಕೆ
ಜೂನಿಯರ್ ಎನ್​ಟಿಆರ್​
ರಾಜೇಶ್ ದುಗ್ಗುಮನೆ
|

Updated on:Mar 18, 2023 | 10:01 AM

Share

ಜೂನಿಯರ್ ಎನ್​ಟಿಆರ್ (JR NTR) ಅವರು ಸದ್ಯ ಸಖತ್ ಖುಷಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದ್ದು. ಈ ಚಿತ್ರದಿಂದ ನಟರಾದ ರಾಮ್ ಚರಣ್, ಜೂನಿಯರ್ ಎನ್​ಟಿಆರ್, ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ (MM Kiravani) ಹಾಗೂ ಮೊದಲಾದವರ ಜನಪ್ರಿಯತೆ ಹೆಚ್ಚಿದೆ. ಈ ಮಧ್ಯೆ ಜೂನಿಯರ್ ಎನ್​ಟಿಆರ್​ ಮುಂದಿನ ಚಿತ್ರ ಯಾವುದು ಎನ್ನುವ ಪ್ರಶ್ನೆ ಆಗಾಗ ಕೇಳಿ ಬರುತ್ತಲೇ ಇರುತ್ತದೆ. ಇದಕ್ಕೆ ಅವರು​ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ ಫ್ಯಾನ್ಸ್​ಗೆ ಈ ವಿಚಾರದಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮರಳಿ ಈ ಬಗ್ಗೆ ಪ್ರಶ್ನೆ ಮಾಡದಂತೆ ಅವರು ಖಡಕ್ ಸೂಚನೆ ನೀಡಿದ್ದಾರೆ.

ಜೂನಿಯರ್ ಎನ್​ಟಿಆರ್ ಸಿಟ್ಟಾಗಿದ್ದೇಕೆ?

ಜೂನಿಯರ್ ಎನ್​ಟಿಆರ್ ಅವರು ‘ಆರ್​ಆರ್​ಆರ್​’ ಚಿತ್ರದ ಬಳಿಕ ತಮ್ಮ 30ನೇ ಸಿನಿಮಾ ಘೋಷಿಸಿದರು. ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರ ಘೋಷಣೆ ಆಗಿದ್ದಷ್ಟೇ, ಈವರೆಗೆ ಚಿತ್ರದ ಶೂಟಿಂಗ್ ಆರಂಭ ಆಗಿಲ್ಲ ಎನ್ನಲಾಗಿದೆ. ಒಂದು ವರ್ಷ ಕಾದರೂ ಸಿನಿಮಾ ಚಿತ್ರೀಕರಣದ ಬಗ್ಗೆ ಯಾವುದೇ ಅಪ್​ಡೇಟ್ ಸಿಗದಿದ್ದಕ್ಕೆ ಸಹಜವಾಗಿಯೇ ಅವರ ಫ್ಯಾನ್ಸ್ ಚಿಂತೆಗೆ ಒಳಗಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ಕೆಲ ಮಾಧ್ಯಮದವರು ಕೂಡ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕೆ ಜೂನಿಯರ್ ಎನ್​ಟಿಆರ್​ ಸಿಟ್ಟಾಗಿದ್ದಾರೆ.

ಇದನ್ನೂ ಓದಿ: NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​

ವೇದಿಕೆಯಿಂದಲೇ ಎಚ್ಚರಿಕೆ ನೀಡಿದ ನಟ

ವಿಶ್ವಕ್ ಸೇನ್ ಅವರ ನಟನೆಯ ‘ಧಮ್ಕಿ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದೆ. ಇದರಲ್ಲಿ ಜೂ.ಎನ್​ಟಿಆರ್​ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ಮುಂದಿನ ಸಿನಿಮಾ ಬಗ್ಗೆ ಮಾಹಿತಿ ನೀಡುವಂತೆ ಫ್ಯಾನ್ಸ್ ಕಡೆಯಿಂದ ಒತ್ತಾಯ ಬಂದಿದೆ. ಇದು ಅವರಿಗೆ ಸಿಟ್ಟು ತರಿಸಿದೆ. ‘ನೀವು ನನ್ನನ್ನು ಮತ್ತೊಮ್ಮೆ ಅಪ್‌ಡೇಟ್‌ಗಾಗಿ ಕೇಳಿದರೆ ನಾನು ಆ ಸಿನಿಮಾನ ಮಾಡುತ್ತಿಲ್ಲ ಎಂದು ಹೇಳುತ್ತೇನೆ. ನೀವು ಮತ್ತೆ ಮತ್ತೆ ಅದನ್ನೇ ಪ್ರಶ್ನಿಸಿದರೆ ನಾನು ಸಿನಿಮಾ ಮಾಡುವುದನ್ನೇ ನಿಲ್ಲಿಸುತ್ತೇನೆ’ ಎಂದು ಏರು ಧ್ವನಿಯಲ್ಲೇ ಹೇಳಿದ್ದಾರೆ.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಧರಿಸಿದ ಈ ವಾಚ್​ನ ಬೆಲೆ ಎಷ್ಟು ಕೋಟಿ ರೂಪಾಯಿ?

‘ನಾನು ಸಿನಿಮಾ ಮಾಡುವುದನ್ನು ನಿಲ್ಲಿಸುವುದಿಲ್ಲ ಅನ್ನೋದು ನನಗೂ ಗೊತ್ತು. ಹಾಗೆ ಆಗುವುದಕ್ಕೆ ನೀವು ಬಿಡುವುದೂ ಇಲ್ಲ. ಪದೇಪದೇ ಅಪ್​ಡೇಟ್ ಕೇಳಬೇಡಿ. ಶೀಘ್ರದಲ್ಲೇ ಶೂಟಿಂಗ್ ಶುರುವಾಗುತ್ತದೆ’ ಎಂದು ಅವರು ಹೇಳಿದ್ದಾರೆ.  ಜೂನಿಯರ್ ಎನ್​ಟಿಆರ್ ಅವರು ಕಳೆದ ಒಂದು ವರ್ಷದಿಂದ ‘ಆರ್​ಆರ್​ಆರ್​’ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಆಸ್ಕರ್ ಅವಾರ್ಡ್ ಸೇರಿ ಅನೇಕ ಪ್ರತಿಷ್ಠಿತ ಅವಾರ್ಡ್ ಫಂಕ್ಷನ್​ನಲ್ಲಿ ಅವರು ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:57 am, Sat, 18 March 23

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್