ನಿರ್ಮಾಪಕ ದಿಲ್ ರಾಜು ಅವರು ಸದ್ಯ ಸೋಲಿನ ಸುಳಿಯಲ್ಲಿ ಇದ್ದಾರೆ. 450 ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣ ಮಾಡಿದ ರಾಮ‘ಗೇಮ್ ಚೇಂಜರ್’ ಸಿನಿಮಾ ನಷ್ಟ ಅನುಭವಿಸುತ್ತಿರುವಾಗಲೇ ತೆರಿಗೆ ಇಲಾಖೆ ತಂಡದವರು ದಿಲ್ ರಾಜು ಮನೆ, ಕಚೇರಿ ಹಾಗೂ ಅವರ ಕುಟುಂಬದ ಮೇಲೆ ದಾಳಿ ನಡೆಸಿದೆ. ಈ ದಾಳಿ ವೇಳೆ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ, ‘ಪುಷ್ಪ 2’ ನಿರ್ಮಾಪಕರ ಮನೆಯ ಮೇಲೂ ದಾಳಿ ಆಗಿದೆ.
ಐಟಿ ಇಲಾಖೆಯವರು ಬರೋಬ್ಬರಿ 65 ತಂಡಗಳಲ್ಲಿ ಬಂದಿದ್ದು, ದಿಲ್ ರಾಜುಗೆ ಸಂಬಂಧಿಸಿದ ಎಂಟು ಕಡೆಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿದ್ದಾರೆ. ಇದರಲ್ಲಿ ದಿಲ್ ರಾಜು ಅವರ ಮನೆ, ಕಚೇರಿ, ಅವರ ಸಹೋದರ ಸಿರೇಶ್ ಮಗಳು ಹನ್ಸಿತಾ ರೆಡ್ಡಿ ಮನೆಗಳು ಕೂಡ ಇವೆ. ‘ಸಂಕ್ರಾಂತಿಗೆ ವಸ್ತುನ್ನಾಮ್’ ಚಿತ್ರದ ನಿರ್ದೇಶಕ ಅನಿಲ್ ರಾವಿಪುಡಿ ಕಚೇರಿ ಮೇಲೂ ಐಟಿ ಇಲಾಖೆ ಪರಿಶೀಲನೆ ನಡೆಸಿದೆ. ಈ ದಾಳಿ ಹಿಂದಿನ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಎರಡೂ ಸಂಸ್ಥೆಗಳು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡುವುದರಲ್ಲಿ ಎತ್ತಿದ ಕೈ. ಈ ಸಂದರ್ಭದಲ್ಲಿ ಎಲ್ಲಾದರೂ ಅಕ್ರಮ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: ನನ್ನ ಬಗ್ಗೆ ತಪ್ಪಾಗಿ ಬರೆದರೆ ಬಾರಿಸಿಬಿಡ್ತೀನಿ: ನಿರ್ಮಾಪಕ ದಿಲ್ ರಾಜು
ಸಂಕ್ರಾಂತಿ ವೇಳೆ ದಿಲ್ ರಾಜು ನಿರ್ಮಾಣದ ‘ಗೇಮ್ ಚೇಂಜರ್’ ಹಾಗೂ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರಗಳು ರಿಲೀಸ್ ಆಗಿವೆ. ‘ಗೇಮ್ ಚೇಂಜರ್’ ಸೋಲನ್ನು ಉಣಿಸಿದರೆ, ‘ಸಂಕ್ರಾಂತಿಕಿ ವಸ್ತುನಾಮ್’ ಚಿತ್ರ ಸೂಪರ್ ಡೂಪರ್ ಹಿಟ್ ಎನಿಸಿಕೊಂಡಿದೆ.
IT officials conduct raids at the house and offices of prominent producer #DilRaju.
Simultaneous inspections carried out at 8 locations with 55 teams.
Raids also conducted at the residences of Dil Raju’s brother #Sirish and daughter #HanshithaReddy.#GameChanger… pic.twitter.com/V32VImov2f
— Milagro Movies (@MilagroMovies) January 21, 2025
‘ಪುಷ್ಪ 2’ ಚಿತ್ರ ನಿರ್ಮಾಣ ಸಂಸ್ಥೆ ಮೇಲೂ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನವೀನ್, ಸಿಇಒ ಚರ್ರಿ ಕಚೇರಿ ಹಾಗೂ ಆಪ್ತರ ಕಚೇರಿಗಳಲ್ಲೂ ಐಟಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಆಗಿದೆ. ವೆಂಕಟೇಶ್ವರ ಪ್ರೊಡಕ್ಷನ್ ಸಂಸ್ಥೆಯಲ್ಲೂ ಐಟಿ ತಂಡದವರು ದಾಖಲೆ ಪರಿಶೀಲನೆ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 9:45 am, Tue, 21 January 25