AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲಾಪ್ ಚಿತ್ರಕ್ಕೆ ಸೀಕ್ವೆಲ್ ಮಾಡಲು ಕಮಲ್ ಹಾಸನ್ ಉತ್ಸಾಹ; ಹಿಂದೆ ಸರಿದ ನಿರ್ಮಾಣ ಸಂಸ್ಥೆ

ಕಮಲ್ ಹಾಸನ್ ಹಾಗೂ ನಿರ್ದೇಶಕ ಶಂಕರ್ 'ಇಂಡಿಯನ್ 2' ಸೋಲಿನ ಹೊರತಾಗಿಯೂ 'ಇಂಡಿಯನ್ 3' ಸೀಕ್ವೆಲ್ ಮಾಡಲು ಉತ್ಸುಕರಾಗಿದ್ದಾರೆ. ಆದರೆ, ಭಾರೀ ನಷ್ಟ ಅನುಭವಿಸಿದ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್, ಮತ್ತೊಂದು ಸೀಕ್ವೆಲ್‌ಗೆ ಆಸಕ್ತಿ ತೋರಿಸುತ್ತಿಲ್ಲ. ಇದರಿಂದ ಯೋಜನೆ ವಿಳಂಬವಾಗಿದ್ದು, ಶಂಕರ್ ಅಸಮಾಧಾನಗೊಂಡಿದ್ದಾರೆ.

ಫ್ಲಾಪ್ ಚಿತ್ರಕ್ಕೆ ಸೀಕ್ವೆಲ್ ಮಾಡಲು ಕಮಲ್ ಹಾಸನ್ ಉತ್ಸಾಹ; ಹಿಂದೆ ಸರಿದ ನಿರ್ಮಾಣ ಸಂಸ್ಥೆ
ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
|

Updated on: Mar 09, 2026 | 9:53 AM

Share

ಯಾವುದೇ ಸಿನಿಮಾ ಫ್ಲಾಪ್ ಆದರೆ, ಅದಕ್ಕೆ ಸೀಕ್ವೆಲ್ ಮಾಡಲು ಯಾವ ನಿರ್ಮಾಪಕರೂ ಮುಂದಕ್ಕೆ ಬರೋದಿಲ್ಲ. ಮೊದಲ ಚಿತ್ರದಿಂದ ಆದ ನಷ್ಟವನ್ನೇ ನಿರ್ಮಾಪಕರು ಚೇತರಿಸಿಕೊಳ್ಳಲು ಸಾಧ್ಯವಾಗದೆ ಒದ್ದಾಡುವಾಗ ಮತ್ತೆ ಅದಕ್ಕೆ ಸೀಕ್ವೆಲ್ ಮಾಡುವ ಸಾಹಸ ಮಾಡಿದರೆ ಹೇಗೆ? ಈಗ ಇದೇ ಸಾಹಸವನ್ನು ಕಮಲ್ ಹಾಸನ್ (ಕಮಲ್ ಹಾಸನ್) ಹಾಗೂ ನಿರ್ದೇಶಕ ಶಂಕರ್ ಮಾಡಲು ಮುಂದಾಗಿದ್ದರು. ಆದರೆ, ಇದಕ್ಕೆ ನಿರ್ಮಾಣ ಸಂಸ್ಥೆ ಆಸಕ್ತಿ ತೋರಿಸುತ್ತಿಲ್ಲ ಎಂದು ವರದಿ ಆಗಿದೆ.

‘ಇಂಡಿಯನ್’ ಸಿನಿಮಾ 1996ರಲ್ಲಿ ರಿಲೀಸ್ ಆಯಿತು. 30 ವರ್ಷಗಳ ಹಿಂದೆ ಬಂದ ಈ ಚಿತ್ರಕ್ಕೆ 2024ರಲ್ಲಿ ಸೀಕ್ವೆಲ್ ಬಂತು. ಈ ಚಿತ್ರ ಮೆಚ್ಚುಗೆ ಪಡೆಯಲು ವಿಫಲವಾಯಿತು. ಸಿನಿಮಾ ಹೀನಾಯವಾಗಿ ನಷ್ಟ ಕಂಡಿತು. ಈ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದ್ದು, ನಿರ್ಮಾಣ ಸಂಸ್ಥೆಗೆ ಭಾರೀ ನಷ್ಟ ಆಗಿದೆ. ಆದಾಗ್ಯೂ ಸಿನಿಮಾದ ಮೂರನೇ ಪಾರ್ಟ್ ತರಲು ನಿರ್ದೇಶಕರು ಹಾಗೂ ಕಮಲ್ ಹಾಸನ್ ಉತ್ಸಾಹ ತೋರಿಸಿದ್ದರು ಎನ್ನಲಾಗಿದೆ. ಆದರೆ, ನಿರ್ಮಾಣ ಸಂಸ್ಥೆ ಈ ಬಗ್ಗೆ ಇನ್ನೂ ಮೀನಾಮೇಷ ಎಣಿಸುತ್ತಿದೆ.

ಇದರಿಂದ ಶಂಕರ್ ಕೂಡ ಅಸಮಾಧಾನಗೊಂಡಿದ್ದಾರಂತೆ. ಅವರು ತಮ್ಮ ಮುಂದಿನ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕಿದೆ. ಆದರೆ, ನಿರ್ಮಾಣ ಸಂಸ್ಥೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬೀಳದೆ ಇರುವುದರಿಂದ ಅವರು ಈ ಯೋಜನೆ ಕೈ ಬಿಡಲು ನಿರ್ಧರಿಸಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ:  ಸ್ಟಾರ್ ನಿರ್ದೇಶಕನ ಜೊತೆ ಕೈ ಜೋಡಿಸಲಿರುವ ಕಮಲ್ ಹಾಸನ್

ನಿರ್ಮಾಣ ಸಂಸ್ಥೆಗೆ ‘ಇಂಡಿಯನ್ 3’ ಮಾಡಲು ಯಾವುದೇ ಆಸಕ್ತಿ ಇಲ್ಲ. ಈ ಚಿತ್ರವನ್ನು ನೇರವಾಗಿ ನೆಟ್​ಫ್ಲಿಕ್ಸ್​​ಗೆ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಆದರೆ, ಇದಕ್ಕೆ ಶಂಕರ್ ರೆಡಿ ಇಲ್ಲ. ಥಿಯೇಟರ್​​​ನಲ್ಲಿ ರಿಲೀಸ್ ಮಾಡುವುದು ಅವರ ಗುರಿ. ಈ ತಿಕ್ಕಾಟದಿಂದ ಯೋಜನೆ ವಿಳಂಬ ಆಗುತ್ತಿತ್ತು. ಈಗ ನಿರ್ಮಣ ಸಂಸ್ಥೆ ಜೊತೆ ಶಂಕರ್ ಕೂಡ ಯೋಜನೆಯಿಂದ ಹೊರ ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ