AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಪೈರಸಿ ತಡೆಯಲು ಹೊಸ ಪ್ಲ್ಯಾನ್​​ನೊಂದಿಗೆ ಬಂದ ಕೇಂದ್ರ ಸರ್ಕಾರ

ಚಿತ್ರರಂಗಕ್ಕೆ ಮಾರಕವಾಗಿರುವ ಸಿನಿಮಾ ಪೈರಸಿ ತಡೆಗೆ ಭಾರತ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಸಾವಿರಾರು ಪೈರಸಿ ಲಿಂಕ್ ಹಾಗೂ ವೆಬ್‌ಸೈಟ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ದೂರು ದಾಖಲಿಸಲು ಪ್ರತ್ಯೇಕ ಪೋರ್ಟಲ್ ಆರಂಭಿಸುತ್ತಿದ್ದು, ಇತ್ತೀಚೆಗೆ 'ಐಬೊಮ್ಮ' ರವಿ ಬಂಧನ ಕೂಡ ಈ ನಿಟ್ಟಿನಲ್ಲಿ ದೊಡ್ಡ ಯಶಸ್ಸಾಗಿದೆ.

ಸಿನಿಮಾ ಪೈರಸಿ ತಡೆಯಲು ಹೊಸ ಪ್ಲ್ಯಾನ್​​ನೊಂದಿಗೆ ಬಂದ ಕೇಂದ್ರ ಸರ್ಕಾರ
ಅಶ್ವಿನ್ ವೈಷ್ಣವ್
ರಾಜೇಶ್ ದುಗ್ಗುಮನೆ
|

Updated on: Jul 28, 2026 | 12:58 PM

Share

ಮುಖ್ಯಾಂಶಗಳು

  • ಚಿತ್ರರಂಗದ ಶಾಪ 'ಪೈರಸಿ'ಗೆ ಬೀಳಲಿದೆ ಬಿಗ್ ಲಾಕ್
  • ಸಾವಿರಾರು ವೆಬ್‌ಸೈಟ್, ಟೆಲಿಗ್ರಾಂ ಲಿಂಕ್‌ಗಳು ಬ್ಲಾಕ್
  • ಕೇಂದ್ರ ಸರ್ಕಾರದ ಬಿಗಿ ಕ್ರಮಕ್ಕೆ ಮೆಚ್ಚುಗೆ

ಕನ್ನಡ, ಬಾಲಿವುಡ್ ಸೇರಿದಂತೆ ಎಲ್ಲಾ ಚಿತ್ರರಂಗಕ್ಕೂ ಪೈರಸಿ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ನಿರ್ಮಾಪಕರು ಮತ್ತು ಆ್ಯಂಟಿ ಪೈರಸಿ ತಂಡಗಳು ಎಷ್ಟೇ ಪ್ರಯತ್ನಿಸಿದರೂ ಸಿನಿಮಾಗಳು ಆನ್​​ಲೈನ್​ ಅಲ್ಲಿ ಲೀಕ್ ಆಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಈಗ ಹೊಸ ಅಸ್ತ್ರದೊಂದಿಗೆ ಬರಲು ರೆಡಿ ಆಗಿದೆ. ಪೈರಸಿ ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಬಗ್ಗೆ ದೊಡ್ಡ ಸೂಚನೆ ನೀಡಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರವು ಪೈರಸಿಗೆ ಸಂಬಂಧಿಸಿದ 7,393 ಲಿಂಕ್‌ಗಳನ್ನು ನಿಷ್ಕ್ರಿಯಗೊಳಿಸಿದೆ. ಇದರಲ್ಲಿ 1,263 ವೆಬ್‌ಸೈಟ್‌ಗಳು ಹಾಗೂ 4,996 ಟೆಲಿಗ್ರಾಂ ಚಾನಲ್‌ಗಳು ಸೇರಿವೆ. ದೂರುಗಳನ್ನು ದಾಖಲಿಸಲು ಕೇಂದ್ರ ಸರ್ಕಾರವು ಪ್ರತ್ಯೇಕ ಆ್ಯಂಟಿ-ಪೈರಸಿ ಪೋರ್ಟಲ್ ಅನ್ನು ಸಿದ್ಧಪಡಿಸುತ್ತಿದೆ. ಇದರಿಂದಾಗಿ ಕಾನೂನು ಜಾರಿ ಪ್ರಕ್ರಿಯೆ ಇನ್ನುಮುಂದೆ ವೇಗವಾಗಿ ನಡೆಯಲಿದೆ.

ಸರ್ಕಾರದ ಕ್ರಮ ಚಿತ್ರರಂಗಕ್ಕೆ ದೊಡ್ಡ ಆನೆಬಲ ತಂದಿದೆ. ಇತ್ತೀಚೆಗಷ್ಟೇ ಪೊಲೀಸರು ‘ಐಬೊಮ್ಮ’ ರವಿಯನ್ನು ಬಂಧಿಸಿರುವುದು ಇದಕ್ಕೆ ಉತ್ತಮ ಉದಾಹರಣೆ. ದೇಶೀಯ ಪೊಲೀಸ್ ಇಲಾಖೆಯೂ ಈ ನಿಟ್ಟಿನಲ್ಲಿ ಚುರುಕಾಗಿ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ‘ಜನ ನಾಯಗನ್’ ಪೈರಸಿ ಕಾಪಿ ಡೌನ್​ಲೋಡ್ ಮಾಡಿದವರಿಗೂ ಎದುರಾಗಲಿದೆ ಸಂಕಷ್ಟ

ಗಲ್ಫ್ ದೇಶಗಳಲ್ಲಿ ಪ್ರದರ್ಶನಗೊಳ್ಳುವ ಪ್ರಿಂಟ್‌ಗಳಿಂದ ಪೈರಸಿ ಆಗುತ್ತಿದೆ ಎಂದು ಕೆಲವು ನಿರ್ಮಾಪಕರು ಅಭಿಪ್ರಾಯ ಹೊರಹಾಕಿದ್ದಾರೆಬ. ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರುವುದು ಕಡಿಮೆಯಾಗುತ್ತಿರುವ ಈ ಸಮಯದಲ್ಲಿ ಸರ್ಕಾರದ ಈ ನಡೆ ಚಿತ್ರರಂಗಕ್ಕೆ ಹೊಸ ಆಶಾಕಿರಣ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಇಂದೂ ಬೆಂಗಳೂರಿನಲ್ಲಿ ವರುಣನ ಆರ್ಭಟ; ಕೆರೆಯಂತಾದ ರಸ್ತೆಗಳು!
ಇಂದೂ ಬೆಂಗಳೂರಿನಲ್ಲಿ ವರುಣನ ಆರ್ಭಟ; ಕೆರೆಯಂತಾದ ರಸ್ತೆಗಳು!
ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ
ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ