AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯನ್ ಐಡಲ್​ ಸ್ಕ್ರಿಪ್ಟೆಡ್​ ಎನ್ನುವ ಆರೋಪದ ಮಧ್ಯೆಯೇ ಮಹತ್ವದ ನಿರ್ಧಾರ ತೆಗೆದುಕೊಂಡ ಆಶಾ ಭೋಸ್ಲೆ

Indian Idol 12: ಇಂಡಿಯನ್​ ಐಡಲ್​ ಯಶಸ್ವಿಯಾಗಿ 11 ಸೀಸನ್​​ ಪೂರ್ಣಗೊಳಿಸಿದೆ. ಈಗ 12ನೇ ಸೀಸನ್​ ನಡೆಯುತ್ತಿದೆ. ಮುಂಬರುವ ವಿಶೇಷ ಎಪಿಸೋಡ್​ನಲ್ಲಿ ಆಶಾ ಭೋಸ್ಲೆ ಜಡ್ಜ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಇಂಡಿಯನ್ ಐಡಲ್​ ಸ್ಕ್ರಿಪ್ಟೆಡ್​ ಎನ್ನುವ ಆರೋಪದ ಮಧ್ಯೆಯೇ ಮಹತ್ವದ ನಿರ್ಧಾರ ತೆಗೆದುಕೊಂಡ ಆಶಾ ಭೋಸ್ಲೆ
ಆಶಾ ಭೋಸ್ಲೆ
TV9 Web
| Edited By: |

Updated on:Jul 08, 2021 | 7:48 PM

Share

ಇಂಡಿಯನ್​ ಐಡಲ್​ ಬಗ್ಗೆ ಇತ್ತೀಚೆಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದೆ. ಬಡತನ, ಫೇಕ್​ ಲವ್​ ಸ್ಟೋರಿಗಳೇ ರಿಯಾಲಿಟಿ ಶೋಗಳ ಬಂಡವಾಳ ಎಂದು ಸ್ವತಃ ಇಂಡಿಯನ್​ ಐಡಲ್​ ವಿನ್ನರ್​ ಆರೋಪಿಸಿದ್ದರು. ಈ ಬೆನ್ನಲ್ಲೇ ಗಾಯಕಿ ಆಶಾ ಭೋಸ್ಲೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂಡಿಯನ್​ ಐಡಲ್​ 12ರಲ್ಲಿ ವಿಶೇಷ ಜಡ್ಜ್​ ಆಗಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಇಂಡಿಯನ್​ ಐಡಲ್​ ಯಶಸ್ವಿಯಾಗಿ 11 ಸೀಸನ್​​ ಪೂರ್ಣಗೊಳಿಸಿದೆ. ಈಗ 12ನೇ ಸೀಸನ್​ ನಡೆಯುತ್ತಿದೆ. ಮುಂಬರುವ ವಿಶೇಷ ಎಪಿಸೋಡ್​ನಲ್ಲಿ ಆಶಾ ಭೋಸ್ಲೆ ಜಡ್ಜ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಸೋನಿ ಟಿವಿ ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಇನ್ನು ಜಡ್ಜ್​ ಆದಿತ್ಯ ನಾರಾಯಣ್​ ಅವರು ಈ ಎಪಿಸೋಡ್​ ವಿಶೇಷವಾಗಿ ನಡೆಸಿಕೊಡುತ್ತಿದ್ದಾರೆ.

ಆಶಾ ಅವರು ವೇದಿಕೆ ಮೇಲೆ ಬರುತ್ತಿದ್ದಂತೆ ಸ್ಪರ್ಧಿ ಪವನ್​ದೀಪ್​ ರಾಜನ್​ ಅವರು ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿದ್ದಾರೆ. ಸದ್ಯದಲ್ಲೇ ಇಂಡಿಯನ್ ಐಡಲ್​ 12ರ ಫಿನಾಲೆ ನಡೆಯುತ್ತಿದ್ದು, ಅದಕ್ಕೂ ಮೊದಲೇ ಈ ಶೋನ ರಂಗು ಹೆಚ್ಚಿಸಲಾಗುತ್ತಿದೆ.

ಕಿರುತೆರೆ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ಮನರಂಜನಾ ವಾಹಿನಿಗಳು ಎಲ್ಲಿಲ್ಲದ ಕಸರತ್ತು ನಡೆಸುತ್ತವೆ. ಅದರಲ್ಲೂ ರಿಯಾಲಿಟಿ ಶೋಗಳ ಮೂಲಕ ಜನರನ್ನು ಮೋಡಿ ಮಾಡಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ರಿಯಾಲಿಟಿ ಶೋಗಳ ಬಗ್ಗೆ ಪರ-ವಿರೋಧದ ಅನೇಕ ಚರ್ಚೆಗಳು ಸೋಶಿಯಲ್​ ಮೀಡಿಯಾದಲ್ಲಿ ನಡೆದಿದೆ. ಹಿಂದಿಯ ‘ಇಂಡಿಯನ್​ ಐಡಲ್​ 12’ ಸಿಂಗಿಂಗ್​ ರಿಯಾಲಿಟಿ ಶೋ ಬಗ್ಗೆ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸ್ಪರ್ಧಿಗಳನ್ನು, ನಿರೂಪಕರನ್ನು ಹಾಗೂ ಜಡ್ಜ್​ಗಳನ್ನು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗುತ್ತಿದೆ.

ಇಂಡಿಯನ್​ ಐಡಲ್​ ಐದು ಹಾಗೂ ಆರನೇ ಸೀಸನ್​ ಜಡ್ಜ್​ ಆಗಿದ್ದ ಸುನಿಧಿ ಚೌಹಾಣ್​ ಈ ಶೋನಿಂದ ಹೊರ ಬಂದಿದ್ದರು. ಅಲ್ಲದೆ, ಈ ಶೋ ಸ್ಕ್ರಿಪ್ಟೆಡ್​ ರೂಪದಲ್ಲಿ ನಡೆಯುತ್ತಿದೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ‘

ಇದನ್ನೂ ಒದಿ: ಕೆಟ್ಟ ಗಾಯನ ಕೇಳಿ ಇಂಡಿಯನ್​ ಐಡಲ್​ ಶೋನಲ್ಲಿ ಕೆನ್ನೆಗೆ ಹೊಡೆದುಕೊಂಡಿದ್ದ ಜಡ್ಜ್​

Published On - 7:46 pm, Thu, 8 July 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!