AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಉಗ್ರ ನೆಲೆಗಳ ಮೇಲೆ ಭಾರತದ ಸರ್ಜಿಕಲ್ ಸ್ಟ್ರೈಕ್; ಉಘೇ ಎಂದ ಬಾಲಿವುಡ್

ಭಾರತೀಯ ಸೇನೆಯು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ "ಆಪರೇಷನ್ ಸಿಂಧೂರ್" ಎಂಬ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ ಹಲವು ಉಗ್ರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬಾಲಿವುಡ್ ಸೇರಿದಂತೆ ಅನೇಕರು ಈ ದಾಳಿಯನ್ನು ಮೆಚ್ಚಿಕೊಂಡಿದ್ದಾರೆ. ಇತ್ತೀಚಿನ ಕಾಶ್ಮೀರ ದಾಳಿಯ ನಂತರ ಭಾರತ ಸೇನೆಯ ಪ್ರತೀಕಾರ ಇದಾಗಿದೆ.

ಪಾಕ್ ಉಗ್ರ ನೆಲೆಗಳ ಮೇಲೆ ಭಾರತದ ಸರ್ಜಿಕಲ್ ಸ್ಟ್ರೈಕ್; ಉಘೇ ಎಂದ ಬಾಲಿವುಡ್
ಆಪರೇಷನ್ ಸಿಂಧೂರ್
ರಾಜೇಶ್ ದುಗ್ಗುಮನೆ
|

Updated on:May 07, 2025 | 8:18 AM

Share

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) ನೆಲೆಸಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನುಗ್ಗಿ ಹೊಡೆದಿದೆ. ಇದಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರು ಇಡಲಾಗಿದೆ. ಈ ದಾಳಿಯನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಬಾಲಿವುಡ್ ಸೇರಿದಂತೆ ವಿವಿಧ ಚಿತ್ರರಂಗದವರು ಈ ದಾಳಿಯ ಬಗ್ಗೆ ಮೆಚ್ಚುಗೆ ಸೂಚಿಸಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ರಿತೇಷ್ ದೇಶ್​ಮುಖ್ ಸೇರಿದಂತೆ ಅನೇಕರು ಈ ದಾಳಿಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಜೈ ಹಿಂದ್’ ಎಂದು ಸೋಶಿಯಲ್ ಮೀಡಿಯಾ ಮೂಲಕ ಬರೆದುಕೊಳ್ಳಲಾಗುತ್ತಿದೆ.

ಇತ್ತೀಚೆಗೆ ಕಾಶ್ಮೀರದ ಪಹಲ್ಗಾಮ್​ನಲ್ಲಿ ದಾಳಿ ನಡೆಯಿತು. ಗನ್ ಹಿಡಿದು ಬಂದ ಉಗ್ರರು 26 ಮಂದಿ ಪ್ರವಾಸಿಗರನ್ನು ಹತ್ಯೆ ಮಾಡಿದರು. ಈ ಬೆನ್ನಲ್ಲೇ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತೀಕಾರದ ಎಚ್ಚರಿಕೆ ನೀಡಿದ್ದರು. ಭಾರತೀಯ ಸೇನೆ ಪ್ರತೀಕಾರಕ್ಕಾಗಿ ನೋಡುತ್ತಾ ಇತ್ತು. ಇಂದು (ಮೇ 7) ಮುಂಜಾನೆ 3 ಗಂಟೆ ಸುಮಾರಿಗೆ ಈ ದಾಳಿ ನಡೆದಿದೆ.

ಇದನ್ನೂ ಓದಿ
Image
ಜೀವನದಲ್ಲಿ ಇರೋ ಕೊನೆಯ ಆಸೆಯನ್ನು ಈಡೇರಿಸಿಕೊಂಡ ರಶ್ಮಿಕಾ ಮಂದಣ್ಣ
Image
ಮೆಟ್ ಗಾಲಾ ರೆಡ್ ಕಾರ್ಪೆಟ್​ನಲ್ಲಿ ಶಾರುಖ್ ಖಾನ್ ಐಕಾನಿಕ್ ಪೋಸ್
Image
ರಣಬೀರ್-ರಣವೀರ್​ನ ತಂದೆ ತಾಯಿಗೆ ಹೋಲಿಸಿದ್ದ ದೀಪಿಕಾ ಪಡುಕೋಣೆ
Image
ಖ್ಯಾತ ನಿರ್ಮಾಪಕನ ಜೊತೆ ಪೋಸ್ ಕೊಟ್ಟ ಶ್ರೀಲೀಲಾ; ಕೇಳಿಬಂತು ಹೊಸ ಗಾಸಿಪ್

ಇದನ್ನೂ ಓದಿ: ಆಪರೇಷನ್ ಸಿಂಧೂರ್, ಪಿಒಕೆ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರದ ದಾಳಿ

ಭಾರತದ ಭದ್ರತಾ ಸಚಿವಾಲಯವು ದಾಳಿಯನ್ನು ಖಚಿತಪಡಿಸಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆ ಮೇಲೆ ದಾಳಿ ನಡೆದಿದೆ ಎಂದು ಭಾರತೀಯ ಸೇನೆ ಹೇಳಿಕೊಂಡಿದೆ. ಈ ಬೆನ್ನಲ್ಲೆ ಬಾಲಿವುಡ್ ಅನೇಕರು ಈ ದಾಳಿಯನ್ನು ಪ್ರಶಂಸಿಸಿದ್ದಾರೆ. ‘ಸೇನೆಗೆ ಜೈ ಹಿಂದ್’ ಎಂದು ರಿತೇಷ್ ದೇಶ್​ಮುಖ್ ಅವರು ಬರೆದುಕೊಂಡಿದ್ದಾರೆ.

ಈ ದಾಳಿ ವೇಳೆ ಕನಿಷ್ಠ 17 ಉಗ್ರರು ಮೃತಪಟ್ಟ ಬಗ್ಗೆ ವರದಿ ಆಗಿದೆ. 60ಕ್ಕೂ ಅಧಿಕ ಉಗ್ರರು ಗಾಯಗೊಂಡಿದ್ದಾರೆ.  ಈ ದಾಳಿಯಿಂದ ಇನ್ನೂ ಸಾಕಷ್ಟು ನಷ್ಟ ಉಂಟಾಗಿರುವ ಸಾಧ್ಯತೆ ಇದ್ದು, ಆ ಬಗ್ಗೆ ಶೀಘ್ರವೇ ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Wed, 7 May 25