AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Koli Death: ಆಸ್ಕರ್​ಗೆ ಭಾರತದಿಂದ ಆಯ್ಕೆ ಆದ ‘ಚೆಲ್ಲೋ ಶೋ’ ಚಿತ್ರದ ಬಾಲ ನಟ ಕ್ಯಾನ್ಸರ್​ನಿಂದ ನಿಧನ

Chhello Show Child Actor Death: ‘ಚೆಲ್ಲೋ ಶೋ’ ಚಿತ್ರದಲ್ಲಿ ರಾಹುಲ್​ ಕೊಲಿ ನಟಿಸಿದ್ದ. ಆದರೆ ಆ ಸಿನಿಮಾ ರಿಲೀಸ್​ ಆಗುವುದಕ್ಕೂ ಮುನ್ನವೇ ಆತ ಇಹಲೋಕ ತ್ಯಜಿಸಿರುವುದು ತೀವ್ರ ನೋವಿನ ಸಂಗತಿ.

Rahul Koli Death: ಆಸ್ಕರ್​ಗೆ ಭಾರತದಿಂದ ಆಯ್ಕೆ ಆದ ‘ಚೆಲ್ಲೋ ಶೋ’ ಚಿತ್ರದ ಬಾಲ ನಟ ಕ್ಯಾನ್ಸರ್​ನಿಂದ ನಿಧನ
‘ಚೆಲ್ಲೋ ಶೋ’ ಚಿತ್ರದ ಪೋಸ್ಟರ್​
TV9 Web
| Edited By: |

Updated on:Oct 11, 2022 | 11:01 AM

Share

ಚಿತ್ರರಂಗದಲ್ಲಿ ಬೆಳೆಯಬೇಕಿದ್ದ ಬಾಲ ನಟ ರಾಹುಲ್​ ಕೊಲಿ (Rahul Koli) ಬದುಕು ಅಂತ್ಯವಾಗಿದೆ. ಕ್ಯಾನ್ಸರ್​ನಿಂದ ಆತ ಮೃತಪಟ್ಟಿದ್ದಾನೆ. ಈ ನೋವಿನ ಸುದ್ದಿ ತಿಳಿದು ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಭಾರತದಿಂದ ಈ ವರ್ಷ ಆಸ್ಕರ್ (Oscar)​ ಪ್ರಶಸ್ತಿ ಸ್ಪರ್ಧೆಗೆ ಆಯ್ಕೆ ಆಗಿರುವ ಚೆಲ್ಲೋ ಶೋ’ (Chhello Show) ಸಿನಿಮಾದಲ್ಲಿ ರಾಹುಲ್​ ಕೊಲಿ ನಟಿಸಿದ್ದ. ಆದರೆ ಆ ಚಿತ್ರ ಬಿಡುಗಡೆ ಆಗಲು ಇನ್ನು ಕೆಲವೇ ದಿನಗಳ ಇರುವಾಗ ಆತ ಇಹಲೋಕ ತ್ಯಜಿಸಿದ್ದಾನೆ. ಆತನ ನಿಧನಕ್ಕೆ ಚಿತ್ರತಂಡದವರು ಸಂತಾಪ ಸೂಚಿಸಿದ್ದಾರೆ. ಮೂಲಗಳ ಪ್ರಕಾರ, ಅ.2ರಂದು ರಾಹುಲ್​ ಕೊಲಿ ರಕ್ತ ವಾಂತಿ ಮಾಡಿಕೊಂಡಿದ್ದ. ನಂತರ ಜ್ವರ ಕೂಡ ಬಂದಿತ್ತು. ಬಳಿಕ ಆತ ಕೊನೆಯುಸಿರೆಳೆದ. ಆತನ ನಿಧನದಿಂದ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಅ.14ರಂದು ‘ಚೆಲ್ಲೋ ಶೋ’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನವೇ ರಾಹುಲ್​ ಕೊಲಿ ನಿಧನ ಹೊಂದಿದ್ದಾನೆ.

ಮಗನನ್ನು ಕಳೆದುಕೊಂಡ ನೋವಿನಲ್ಲೇ ರಾಹುಲ್​ ಕೊಲಿ ಕುಟುಂಬದವರು ಅ.14ರಂದು ‘ಚೆಲ್ಲೋ ಶೋ’ ಚಿತ್ರ ನೋಡುವುದಾಗಿ ತಿಳಿಸಿದ್ದಾರೆ. ರಾಹುಲ್​ ತಂದೆ ಆಟೋ ಓಡಿಸಿ ಜೀವನ ಸಾಗಿಸುತ್ತಿದ್ದಾರೆ. ‘ಈ ಸಿನಿಮಾ ರಿಲೀಸ್​ ಆದ ಬಳಿಕ ನಮ್ಮ ಬದುಕು ಬದಲಾಗುತ್ತದೆ’ ಎಂದು ಮಗ ಹೇಳಿದ್ದ ಮಾತನ್ನು ನೆನಪಿಸಿಕೊಂಡು ಈಗ ತಂದೆ ಕಣ್ಣೀರು ಹಾಕುತ್ತಿದ್ದಾರೆ.

‘ಚೆಲ್ಲೋ ಶೋ’ ಸಿನಿಮಾ ಕುರಿತು:

ಇದನ್ನೂ ಓದಿ
Image
ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​

ಪ್ಯಾನ್​ ನಳಿನ್​ ಅವರು ‘ಚೆಲ್ಲೋ ಶೋ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಕೊನೆಯ ಸಿನಿಮಾ ಶೋ’ ಎಂಬುದು ಈ ಶೀರ್ಷಿಕೆಯ ಅರ್ಥ. ನಿರ್ದೇಶಕರ ಬಾಲ್ಯದ ಅನುಭವಗಳನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ ಎಂಬುದು ವಿಶೇಷ. ಸಿನಿಮಾ ಬಗ್ಗೆ ಅಪಾರ ಆಸಕ್ತಿ ಹೊಂದಿರುವ 9ರ ಪ್ರಾಯದ ಬಾಲಕನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗಾಗಲೇ ಅನೇಕ ಚಿತ್ರೋತ್ಸವಗಳಲ್ಲಿ ‘ಚೆಲ್ಲೋ ಶೋ’ ಸಿನಿಮಾ ಪ್ರದರ್ಶನ ಕಂಡಿದೆ. ಆ ಮೂಲಕ ಹಲವರ ಗಮನ ಸೆಳೆದಿದೆ.

ಡಿಫರೆಂಟ್​ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ಪ್ಯಾನ್​ ನಳಿನ್​ ಅವರಿಂದ ‘ಚೆಲ್ಲೋ ಶೋ’ ಚಿತ್ರ ಮೂಡಿಬಂದಿದೆ. ಹಳ್ಳಿ ಮತ್ತು ರೈಲ್ವೇ ಜಂಕ್ಷನ್​ನಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಸ್ಥಳೀಯ ಬಾಲಕರೇ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. 2020ರಲ್ಲಿ ಲಾಕ್​ಡೌನ್​ ಶುರುವಾಗುವುದಕ್ಕೂ ಮುನ್ನ ‘ಚೆಲ್ಲೋ ಶೋ’ ಶೂಟಿಂಗ್​ ಪೂರ್ಣಗೊಂಡಿತ್ತು. ಲಾಕ್​ ಡೌನ್​ ಸಮಯದಲ್ಲಿ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳನ್ನು ಮಾಡಲಾಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:44 am, Tue, 11 October 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ