ಒಳಾಂಗಣ ಚಿತ್ರೀಕರಣಕ್ಕೂ ಇಲ್ಲ ಅವಕಾಶ; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್​ ಸ್ಪಷ್ಟನೆ

ಕಳೆದ ಬಾರಿ ಕೊರೊನಾ ಕರ್ಫ್ಯೂ ವೇಳೆ ಬೆಳಗ್ಗೆ 6-12 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿತ್ತು. ಅಲ್ಲದೆ, ಜನರ ಓಡಾಟಕ್ಕೂ ಅಷ್ಟಾಗಿ ಕಠಿಣ ನಿರ್ಬಂಧ ಇರಲಿಲ್ಲ.

ಒಳಾಂಗಣ ಚಿತ್ರೀಕರಣಕ್ಕೂ ಇಲ್ಲ ಅವಕಾಶ; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್​ ಸ್ಪಷ್ಟನೆ
ಸಾಂರ್ಭಿಕ ಚಿತ್ರ

Updated on: May 07, 2021 | 8:24 PM

ಕರ್ನಾಟಕದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಹೀಗಾಗಿ 14 ದಿನಗಳ ಕಾಲ ಕರ್ನಾಟಕ ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಮೇ 10ರಿಂದ ಲಾಕ್​ಡೌನ್​ ನಿಯಮ ಜಾರಿಗೆ ಬರಲಿದೆ. ಈ ಲಾಕ್​ಡೌನ್​ ವೇಳೆ ಧಾರಾವಾಹಿ ಹಾಗೂ ಸಿನಿಮಾ ಶೂಟಿಂಗ್​ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ.

ಕಳೆದ ಬಾರಿ ಕೊರೊನಾ ಕರ್ಫ್ಯೂ ವೇಳೆ ಬೆಳಗ್ಗೆ 6-12 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಿತ್ತು. ಅಲ್ಲದೆ, ಜನರ ಓಡಾಟಕ್ಕೂ ಅಷ್ಟಾಗಿ ಕಠಿಣ ನಿರ್ಬಂಧ ಇರಲಿಲ್ಲ. ಹೀಗಾಗಿ, ಧಾರಾವಾಹಿಗಳನ್ನು ಒಳಾಂಗಣದಲ್ಲಿ ಶೂಟಿಂಗ್​ ನಡೆಸುತ್ತಿದ್ದವು. ಆದರೆ, ಈ ಬಾರಿ ಸರ್ಕಾರ ಅದನ್ನು ಹಿಂಪಡೆದಿದೆ.

ರಿಯಾಲಿಟಿ ಶೋಗಳು ಹಾಗೂ ಧಾರಾವಾಹಿಗಳು ಇಂಡೋರ್​ ಶೂಟಿಂಗ್​ ಮಾಡುತ್ತಿವೆ. ಇದಕ್ಕೆ ಏನಾದರೂ ನಿರ್ಬಂಧ ಇದೆಯೇ ಎನ್ನುವ ಪ್ರಶ್ನೆಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಕೇಳಲಾಯಿತು. ಈ ಬಗ್ಗೆ ಉತ್ತರಿಸಿದ ಅವರು, ಈ ಬಾರಿ ಒಳಾಂಗಣ ಶೂಟಿಂಗ್​ಗೆ ಯಾವುದೇ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದರಿಂದ ಒಳಾಂಗಣದಲ್ಲಿ ಶೂಟಿಂಗ್​ ಮಾಡುತ್ತಿರುವವರು ಈಗಲೇ ಶೂಟಿಂಗ್​ ನಿಲ್ಲಿಸಬೇಕಾಗಬಹುದು.

ಈ ಬಾರಿ ಹಾಲಿನ ಬೂತ್‌ ತೆರೆಯಲು ಸಂಜೆವರೆಗೂ ಅವಕಾಶ ನೀಡಲಾಗಿದೆ. ಸರ್ಕಾರಿ ಕಚೇರಿ ಭಾಗಶಃ ಕೆಲಸ ನಿರ್ವಹಿಸುತ್ತವೆ. ಕಟ್ಟಡ ಕಾಮಗಾರಿಗೆ ಯಾವುದೇ ಅಡ್ಡಿ.ಇಲ್ಲ ಅಗತ್ಯ ವಸ್ತು ಸಾಗಿಸುವ ವಾಹನಗಳಿಗೆ ಅಡ್ಡಿ ಇಲ್ಲ. ಕೂಲಿ ಕಾರ್ಮಿಕರು ಬೆಂಗಳೂರು ಬಿಟ್ಟು ಹೋಗಬಾರದು. ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕಾಮಗಾರಿಗಳು ನಡೆಯಬಹುದು. ತಳ್ಳುವ ಗಾಡಿ, ತರಕಾರಿ ಮಾರಲು ಅವಕಾಶ ನೀಡಲಾಗಿದೆ. ಜಿಲ್ಲೆಯಿಂದ ಜಿಲ್ಲೆಗೆ ಓಡಾಟಕ್ಕೆ ಅವಕಾಶ ಇಲ್ಲ.

ಇದನ್ನೂ ಓದಿ: Karnataka Lockdown: ಕರ್ನಾಟಕ ಲಾಕ್​ಡೌನ್​; ಕೊರೊನಾ ತಡೆಗೆ ಮೇ 10ರಿಂದ 24ರ ವರೆಗೆ ಸಂಪೂರ್ಣ ರಾಜ್ಯ ಸ್ತಬ್ಧ

Karnataka Lockdown: ಕರ್ನಾಟಕ ಲಾಕ್​ಡೌನ್​ ಅವಧಿಯಲ್ಲಿ ಯಾವೆಲ್ಲಾ ಸೇವೆ ಲಭ್ಯವಿರಲಿದೆ, ಯಾವುದು ಇಲ್ಲ? ಇಲ್ಲಿದೆ ಮಾಹಿತಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us