AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಬಟ್ಟೆಯನ್ನೇ ತೊಟ್ಟು ಫಿಲ್ಮ್​ ಫೇರ್​ ಸ್ವೀಕರಿಸಿದ ಇರ್ಫಾನ್​ ಖಾನ್​ ಪುತ್ರ

ಇರ್ಫಾನ್​ ಖಾನ್​ ಅವರ ಮಗ ಬಾಬಿಲ್​ ತಂದೆ ಬದಲಿಗೆ ಈ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದರು. ಈ ವೇಳೆ ಅವರು ಧರಿಸಿದ್ದ ಬಟ್ಟೆ ಎಲ್ಲರ ಗಮನ ಸೆಳೆದಿತ್ತು.

ತಂದೆಯ ಬಟ್ಟೆಯನ್ನೇ ತೊಟ್ಟು ಫಿಲ್ಮ್​ ಫೇರ್​ ಸ್ವೀಕರಿಸಿದ ಇರ್ಫಾನ್​ ಖಾನ್​ ಪುತ್ರ
ಇರ್ಫಾನ್​ ಖಾನ್​ ಮಗ ಬಾಬಿಲ್​
ರಾಜೇಶ್ ದುಗ್ಗುಮನೆ
|

Updated on:Mar 28, 2021 | 7:56 PM

Share

ಮಾರ್ಚ್​ 27ರ ಶನಿವಾರ ರಾತ್ರಿ ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ 66ನೇ ಸಾಲಿನ ಫಿಲ್ಮ್​ ಫೇರ್​ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮಕ್ಕೆ ಅನೇಕ ಬಾಲಿವುಡ್​ ಸ್ಟಾರ್​ ನಟರು ಆಗಮಿಸಿದ್ದರು. ಈ ವೇಳೆ ಭಾವುಕ ಘಟನೆಯೊಂದು ನಡೆದಿದೆ. ಇರ್ಫಾನ್​ ಖಾನ್​ಗೆ ಸಿಕ್ಕ ಫಿಲ್ಮ್​ ಫೇರ್​ ಪ್ರಶಸ್ತಿ ಸ್ವೀಕರಿಸಲು ಅವರ ಮಗ ಬಾಬಿಲ್​ ತಂದೆಯ ಬಟ್ಟೆಯನ್ನೇ ತೊಟ್ಟು ಬಂದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ‘ಅಂಗ್ರೇಜಿ ಮೀಡಿಯಂ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಇರ್ಫಾನ್​ ಖಾನ್​ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ನೀಡಲಾಗಿದೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಇರ್ಫಾನ್​ ಖಾನ್​ ಅವರು ಕಳೆದ ಏಪ್ರಿಲ್​ 29ರಂದು ನಿಧನರಾಗಿದ್ದರು. ಮರಣೋತ್ತರವಾಗಿ ಅವರಿಗೆ ಈಗ ಅತ್ಯುತ್ತಮ ನಟ ಫಿಲ್ಮ್​ ಫೇರ್​ ಪ್ರಶಸ್ತಿ ಸಿಕ್ಕಿದೆ. ಅಲ್ಲದೆ, 2021ನೇ ಸಾಲಿನ ಜೀವಮಾನ ಸಾಧಕ ಪ್ರಶಸ್ತಿ ಕೂಡ ಇರ್ಫಾನ್​ ಖಾನ್​ ಅವರಿಗೆ ದೊರೆತಿದೆ.

ಇರ್ಫಾನ್​ ಖಾನ್​ ಅವರ ಮಗ ಬಾಬಿಲ್​ ತಂದೆ ಬದಲಿಗೆ ಈ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದರು. ಈ ವೇಳೆ ಅವರು ಧರಿಸಿದ್ದ ಬಟ್ಟೆ ಎಲ್ಲರ ಗಮನ ಸೆಳೆದಿತ್ತು. ನೀಲಿ ಬಣ್ಣದ ಈ ಬಟ್ಟೆ ಬಾಬಿಲ್​ಗೆ ಸ್ವಲ್ಪ ದೊಡ್ಡದಾದಂತೆ ಕಂಡಿತ್ತು. ಇದು ಏಕೆ ಎನ್ನುವ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.

View this post on Instagram

A post shared by Babil (@babil.i.k)

ಇರ್ಫಾನ್​ ಖಾನ್​ ಫೆವರಿಟ್​ ಬಟ್ಟೆಯನ್ನು ಬಾಬಿಲ್​ ಧರಿಸಿ ಬಂದಿದ್ದರಂತೆ. ಈ ಮೂಲಕ ಅವರು ತಂದೆಗೆ ಗೌರವ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಬಾಬಿಲ್​ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

View this post on Instagram

A post shared by Babil (@babil.i.k)

ತಾಪ್ಸಿ ಪನ್ನು ನಟನೆಯ ತಪ್ಪಡ್​ ಸಿನಿಮಾಗೆ ‘ಅತ್ಯುತ್ತಮ ಚಿತ್ರ’ ಹಾಗೂ ಅತ್ಯುತ್ತಮ ಕಥೆ ಪ್ರಶಸ್ತಿಗಳು ಸಿಕ್ಕಿವೆ. ವಿಮರ್ಶಕರ ಆಯ್ಕೆ ವಿಭಾಗದಲ್ಲಿ ಅಮಿತಾಭ್​ ಬಚ್ಚನ್​ ಅತ್ಯುತ್ತಮ ನಟ (ಗುಲಾಬೋ ಸಿತಾಬೋ) ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘ಸರ್’​ ಸಿನಿಮಾದಲ್ಲಿನ ನಟನೆಗಾಗಿ ತಿಲೋತ್ತಮಾ ಅವರು ಅತ್ಯುತ್ತಮ ನಟಿ ಎನಿಸಿಕೊಂಡಿದ್ದಾರೆ. ವಿಮರ್ಶಕರ ಆಯ್ಕೆಯ ಅತ್ಯುತ್ತಮ ಸಿನಿಮಾ ಮನ್ನಣೆಗೆ ‘ಈಬ್​ ಅಲೆ ಊ’ ಚಿತ್ರ ಪಾತ್ರವಾಗಿದೆ. ದೆಹಲಿಯಲ್ಲಿ ಮಂಗಗಳ ಕಾಟ ತಪ್ಪಿಸಲು ಹೆಣಗಾಡುವ ವ್ಯವಸ್ಥೆಯ ಕಥೆಯನ್ನು ಈ ಸಿನಿಮಾ ಹೊಂದಿದೆ.

ಇದನ್ನೂ ಓದಿ: Taapsee Pannu: 66ನೇ ಫಿಲ್ಮ್​ ಫೇರ್​ ಪ್ರಶಸ್ತಿ; ಇರ್ಫಾನ್​ ಖಾನ್-ತಾಪ್ಸಿ ಪನ್ನು​ ಅತ್ಯುತ್ತಮ ನಟ-ನಟಿ!

Published On - 7:52 pm, Sun, 28 March 21

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ