AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾ ಬೇಬಿ ಬಂಪ್​ ಫೋಟೋ ವೈರಲ್​; ಆದರೆ ಇದರ ಅಸಲಿಯತ್ತು ಬೇರೆ

ಈ ಫೋಟೋದಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಯ್ಲಿ ಅವರು ಖುಷಿ ಖುಷಿಯಾಗಿ ಪೋಸ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ಇದು ಹೊಸ ಫೋಟೋ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಈ ಫೋಟೋ ಹಿಂದಿನ ಅಸಲಿ ಕಹಾನಿ ಬೇರೆಯೇ ಇದೆ.

ಅನುಷ್ಕಾ ಶರ್ಮಾ ಬೇಬಿ ಬಂಪ್​ ಫೋಟೋ ವೈರಲ್​; ಆದರೆ ಇದರ ಅಸಲಿಯತ್ತು ಬೇರೆ
ಅನುಷ್ಕಾ ಶರ್ಮಾ, ವಿರಾಟ್​ ಕೊಯ್ಲಿ
ಮದನ್​ ಕುಮಾರ್​
|

Updated on: Dec 15, 2023 | 2:30 PM

Share

ನಟಿ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟರ್​ ವಿರಾಟ್​ ಕೊಹ್ಲಿ (Virat Kohli) ಅವರು ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ ಎಂದು ಕೆಲವು ದಿನಗಳಿಂದ ಸುದ್ದಿ ಕೇಳಿಬರುತ್ತಲೇ ಇದೆ. ಆದರೆ ಈ ವಿಚಾರವನ್ನು ಅನುಷ್ಕಾ  ಶರ್ಮಾ (Anushka Sharma) ಅವರಾಗಲೀ, ವಿರಾಟ್​ ಅವರಾಗಲೀ ಸ್ಪಷ್ಟಪಡಿಸಿಲ್ಲ. ಹಾಗಿದ್ದರೂ ಕೂಡ ಗಾಸಿಪ್​ ಜೋರಾಗಿದೆ. ಅದರ ಜೊತೆಗೆ ಕೆಲವು ಫೋಟೋಗಳು ಕೂಡ ವೈರಲ್​ ಆಗಿವೆ. ಸೋಶಿಯಲ್​ ಮೀಡಿಯಾದಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್​ (Baby Bump) ಫೋಟೋ ಹರಿದಾಡುತ್ತಿದೆ. ಅದನ್ನು ಕೆಲವರು ನಿಜವೆಂದು ನಂಬಿದ್ದಾರೆ.

ಅನುಷ್ಕಾ ಶರ್ಮಾ ಎರಡನೇ ಬಾರಿ ಪ್ರೆಗ್ನೆಂಟ್​ ಆಗಿದ್ದಾರೆ ಎಂಬ ಗಾಸಿಪ್​ ಹಬ್ಬಲು ಅನೇಕ ಕಾರಣಗಳು ಇವೆ. ‘ಜೀರೋ’ ಸಿನಿಮಾ ತೆರೆಕಂಡ ಬಳಿಕ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಈಗಾಗಲೇ ಒಪ್ಪಿಕೊಂಡ ‘ಚಕ್ದಾ ಎಕ್ಸ್​ಪ್ರೆಸ್​’ ಸಿನಿಮಾದ ಬಿಡುಗಡೆ ತಡವಾಗುತ್ತಿದೆ. ಎರಡನೇ ಮಗು ಪಡೆಯುವ ಉದ್ದೇಶದಿಂದಲೇ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ ಎಂಬುದು ಹಲವರ ಊಹೆ.

ಈ ಫೋಟೋದಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಖುಷಿ ಖುಷಿಯಾಗಿ ಪೋಸ್​ ನೀಡಿದ್ದಾರೆ. ಆದರೆ ಇದು ಹೊಸ ಫೋಟೋ ಅಲ್ಲ ಎಂಬುದು ಅಷ್ಟೇ ಸ್ಪಷ್ಟ. 2018ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕ್ಲಿಕ್ಕಿಸಿದ ಫೋಟೋ ಇದು. ಅದನ್ನೇ ಈಗ ತಿರುಚಿದ ರೀತಿಯಲ್ಲಿ ಎಡಿಟ್​ ಮಾಡಿ ಮತ್ತೊಮ್ಮೆ ವೈರಲ್​ ಮಾಡುವ ಮೂಲಕ ಗಾಸಿಪ್​ ಹಬ್ಬಿಸಲಾಗಿದೆ. ಅನೇಕರು ಅದನ್ನು ನಿಜ ಎಂದು ನಂಬಿಕೊಂಡಿದ್ದಾರೆ.

ಇದನ್ನೂ ಓದಿ: 2ನೇ ಮಗು ಆದ ಬಳಿಕ ನಟನೆಗೆ ಗುಡ್​ಬೈ ಹೇಳ್ತಾರಾ ಅನುಷ್ಕಾ ಶರ್ಮಾ? ಗುಮಾನಿಗೆ ಕಾರಣ ಆಗಿದೆ ಈ ವಿಡಿಯೋ

ಮದುವೆ ಬಳಿಕ ಕೆಲವು ನಟಿಯರು ಸಿನಿಮಾಗಳಿಂದ ದೂರ ಉಳಿದುಕೊಳ್ಳುತ್ತಾರೆ. ಮಗು ಪಡೆದ ನಂತರ ಸಿನಿಮಾ ಕೆಲಸಗಳಿಗೆ ಸಮಯ ನೀಡಲು ಕಷ್ಟವಾಗುತ್ತದೆ. ಅನುಷ್ಕಾ ಶರ್ಮಾ ಅವರು 2021ರ ಜನವರಿಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಮಗಳ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಹಾಗಾಗಿ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಅವರ ಕಡೆಯಿಂದ ಆದಷ್ಟು ಬೇಗ ಗುಡ್​ನ್ಯೂಸ್​ ಸಿಗಲಿ ಎಂದು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ