ಹೊಸ ರಿಲೀಸ್ ದಿನಾಂಕದ ಬಗ್ಗೆ ಆಲೋಚಿಸಿದ ‘ಕಲ್ಕಿ 2898 ಎಡಿ’ ಚಿತ್ರತಂಡ?
‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆ ಕಮಲ್ ಹಾಸನ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಟಾನಿ ಮುಂತಾದ ಪ್ರತಿಭಾನ್ವಿತ ಕಲಾವಿದರ ಸಂಗಮ ಆಗಿದೆ. ಪುರಾಣದ ಕಹಾನಿಯ ಜೊತೆ ಸೈನ್ಸ್ ಫಿಕ್ಷನ್ ಕೂಡ ಅಳವಡಿಸಿ ಈ ಸಿನಿಮಾ ಮಾಡಲಾಗುತ್ತಿದೆ ಎಂಬುದು ವಿಶೇಷ. ಈ ಎಲ್ಲ ಕಾರಣದಿಂದಾಗಿ ‘ಕಲ್ಕಿ 2898 ಎಡಿ’ ಚಿತ್ರದ ಮೇಲಿನ ಕ್ರೇಜ್ ಹೆಚ್ಚಾಗಿದೆ.
ಟಾಲಿವುಡ್ ನಟ ಪ್ರಭಾಸ್ (Prabhas) ಅವರು ‘ಕಲ್ಕಿ 2898 ಎಡಿ’ ಸಿನಿಮಾದ ಮೇಲೆ ಸಂಪೂರ್ಣ ಗಮನ ಹರಿಸಿದ್ದಾರೆ. ಈ ಸಿನಿಮಾಗೆ ‘ಮಹಾನಟಿ’ ಖ್ಯಾತಿಯ ಖ್ಯಾತ ನಿರ್ದೇಶಕ ನಾಗ್ ಅಶ್ವಿನ್ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಮೇ 9ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಬೇಕು ಎಂಬುದು ಈ ಸಿನಿಮಾ ತಂಡದ ಪ್ಲ್ಯಾನ್ ಆಗಿತ್ತು. ಆದರೆ ಈಗಿನ ಬೆಳವಣಿಗೆಗಳ ಅನುಸಾರ ಬಿಡುಗಡೆ ದಿನಾಂಕವನ್ನು (Kalki 2898 AD Release Date) ಮುಂದೂಡಲು ನಿರ್ಮಾಪಕರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ‘ಪಿಂಕ್ ವಿಲ್ಲಾ’ ವರದಿ ಪ್ರಕಾರ, ಜೂನ್ 20ಕ್ಕೆ ಬಿಡುಗಡೆ ದಿನಾಂಕ ಮುಂದೂಡಿಕೆ ಆಗಿರುವ ಸಾಧ್ಯತೆ ಇದೆ. ಮುಂಬರುವ ಲೋಕಸಭಾ ಚುನಾವಣೆಯ ಕಾರಣದಿಂದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರದ ಬಿಡುಗಡೆ ದಿನಾಂಕದಲ್ಲಿ ಗೊಂದಲ ಉಂಟಾಗಿದೆ. ನಿರ್ಮಾಪಕರು ರಿಲೀಸ್ ಡೇಟ್ ಬದಲಾವಣೆ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡುವುದು ಇನ್ನೂ ಬಾಕಿ ಇದೆ.
‘ಕಲ್ಕಿ 2898 ಎಡಿ’ ಸಿನಿಮಾ ಬಗ್ಗೆ ಕೇಳಿಬರುತ್ತಿರುವ ಗಾಸಿಪ್ ಒಂದೆರಡಲ್ಲ. ಮೇ 9ರ ಬದಲಿಗೆ ಮೇ 30ಕ್ಕೆ ಸಿನಿಮಾ ರಿಲೀಸ್ ಮಾಡಲು ನಿರ್ಧರಿಸಲಾಗಿದೆ ಎಂದು ಕೂಡ ಕೆಲವು ಕಡೆಗಳಲ್ಲಿ ಸುದ್ದಿ ಹಬ್ಬಿತ್ತು. ಆದರೆ ಸಿನಿಮಾದ ನಿರ್ಮಾಪಕರು ಈಗ ಬಿಡುಗಡೆ ದಿನಾಂಕದ ಬಗ್ಗೆ ಪುನಃ ಆಲೋಚಿಸಿದಂತಿದೆ. ಜೂನ್ 20 ಸೂಕ್ತ ಎಂದು ಚಿತ್ರತಂಡದಲ್ಲಿನ ಕೆಲವು ಅಭಿಪ್ರಾಯ ತಿಳಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಒಂದು ಸ್ಪಷ್ಟನೆ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.
ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ಕಮಲ್ ಹಾಸನ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ದಿಶಾ ಪಟಾನಿ ಮುಂತಾದ ಪ್ರತಿಭಾನ್ವಿತ ಕಲಾವಿದರ ಸಂಗಮ ಆಗಿದೆ. ಪುರಾಣದ ಕಥೆಯ ಜೊತೆಗೆ ಸೈನ್ಸ್ ಫಿಕ್ಷನ್ ಅಂಶಗಳನ್ನು ಅಳವಡಿಸಿ ಈ ಸಿನಿಮಾ ಮಾಡಲಾಗುತ್ತಿದೆ. ಈ ಎಲ್ಲ ಕಾರಣದಿಂದಾಗಿ ‘ಕಲ್ಕಿ 2898 ಎಡಿ’ ಸಿನಿಮಾ ಮೇಲಿನ ಕ್ರೇಜ್ ಜಾಸ್ತಿ ಆಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಪ್ರಭಾಸ್ ಫ್ಯಾನ್ಗೆ ಅಲ್ಲು ಅರ್ಜುನ್ ಅಭಿಮಾನಿಗಳಿಂದ ಥಳಿತ
‘ಕಲ್ಕಿ 2898 ಎಡಿ’ ಸಿನಿಮಾವನ್ನು ತೆಲುಗು ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಚಿತ್ರೀಕರಿಸಲಾಗಿದೆ. ಪ್ರಭಾಸ್ ಅವರ ವೃತ್ತಿ ಜೀವನದ ದುಬಾರಿ ಸಿನಿಮಾಗಳಲ್ಲಿ ಈ ಚಿತ್ರ ಕೂಡ ಸ್ಥಾನ ಪಡೆದುಕೊಳ್ಳುತ್ತಿದೆ. ಇದಲ್ಲದೇ ‘ದಿ ರಾಜಾ ಸಾಬ್’ ಸಿನಿಮಾದಲ್ಲೂ ಪ್ರಭಾಸ್ ನಟಿಸುತ್ತಿದ್ದಾರೆ. ಆ ಬಳಿಕ ಅವರು ಸಂದೀಪ್ ರೆಡ್ಡಿ ವಂಗಾ ಜೊತೆಗಿನ ‘ಸ್ಪಿರಿಟ್’ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.