AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂ ಎನ್​ಟಿಆರ್ ಸಿನಿಮಾದಲ್ಲಿ ಸಾಯಿ ಪಲ್ಲವಿ? ಚಿತ್ರತಂಡ ಹೇಳಿದ್ದೇನು?

Sai Pallavi: ಜೂ ಎನ್​ಟಿಆರ್ ಅವರ ಹೊಸ ಸಿನಿಮಾನಲ್ಲಿ ಸಾಯಿ ಪಲ್ಲವಿ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಚಿತ್ರತಂಡ ಹೇಳಿರುವುದೇನು?

ಜೂ ಎನ್​ಟಿಆರ್ ಸಿನಿಮಾದಲ್ಲಿ ಸಾಯಿ ಪಲ್ಲವಿ? ಚಿತ್ರತಂಡ ಹೇಳಿದ್ದೇನು?
ಜೂ ಎನ್​ಟಿಆರ್-ಸಾಯಿ ಪಲ್ಲವಿ
ಮಂಜುನಾಥ ಸಿ.
| Edited By: |

Updated on: Jun 28, 2023 | 8:00 AM

Share

ಆರ್​ಆರ್​ಆರ್ (RRR) ಸಿನಿಮಾದ ಬಳಿಕ ಜೂ ಎನ್​ಟಿಆರ್ (Jr NTR) ಗ್ಲೋಬಲ್ ಸ್ಟಾರ್ ಆಗಿದ್ದಾರೆ. ಆರ್​ಆರ್​ಆರ್  ನಂತರ ಇದೀಗ ಹೊಸದೊಂದು ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸುತ್ತಿದ್ದು ಸಿನಿಮಾಕ್ಕೆ ದೇವರ ಎಂದು ಹೆಸರಿಡಲಾಗಿದೆ. ಸೈಫ್ ಅಲಿ ಖಾನ್ (Saif Ali Khan), ಜಾನ್ಹವಿ ಕಪೂರ್ ಅಂಥಹಾ ದೊಡ್ಡ ಬಾಲಿವುಡ್ ತಾರೆಯರು ಈ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆ ನಟಿಸುತ್ತಿದ್ದಾರೆ. ಆದರೆ ಇದೇ ಸಿನಿಮಾದಲ್ಲಿ ದಕ್ಷಿಣ ಭಾರತದ ಪ್ರತಿಭಾವಂತ ನಟಿ ಸಾಯಿ ಪಲ್ಲವಿ (Sai Pallavi) ಸಹ ಇರಲಿದ್ದಾರೆ ಎನ್ನಲಾಗುತ್ತಿದೆ.

ದೇವರ ಸಿನಿಮಾದಲ್ಲಿ ಜೂ ಎನ್​ಟಿಆರ್ ಜೊತೆಗೆ ಎರಡನೇ ನಾಯಕಿಯಾಗಿ ಸಾಯಿ ಪಲ್ಲವಿ ಸಹ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಿನಿಮಾದ ಫ್ಲಾಷ್​ಬ್ಯಾಕ್​ ಕತೆಗೆ ಸಾಯಿ ಪಲ್ಲವಿ ಜೂ ಎನ್​ಟಿಆರ್​ಗೆ ನಾಯಕಿ ಆಗಿರಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಸುದ್ದಿಗಳು, ಫೋಟೊಗಳು ವೈರಲ್ ಆಗುತ್ತಿವೆ.

ಆದರೆ ಈ ಬಗ್ಗೆ ದೇವರ ಸಿನಿಮಾದ ತಂಡ ಅಧಿಕೃತವಾಗಿ ಹೇಳಿಕೆ ನೀಡಿದೆ. ಸಿನಿಮಾದ ಅಧಿಕೃತ ಟ್ವಿಟ್ಟರ್ ಹ್ಯಾಂಡ್​ನಿಂದ ಈ ಬಗ್ಗೆ ಟ್ವೀಟ್ ಒಂದನ್ನು ಮಾಡಲಾಗಿದ್ದು, ದೇವರ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎಂಬ ಸುದ್ದಿ ಸುಳ್ಳು ಎಂದಿದೆ. ಆ ಮೂಲಕ ಹಲವು ಸಾಯಿ ಪಲ್ಲವಿ ಹಾಗೂ ಜೂ ಎನ್​ಟಿಆರ್ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ. ಸಾಯಿ ಪಲ್ಲವಿ ಸ್ವತಃ ಅದ್ಭುತ ನಟಿ ಹಾಗೂ ನೃತ್ಯಗಾರ್ತಿ. ಜೂ ಎನ್​ಟಿಆರ್ ಸಹ ಅದ್ಭುತವಾದ ಡ್ಯಾನ್ಸರ್. ಇಬ್ಬರೂ ಒಟ್ಟಿಗೆ ಡ್ಯಾನ್ಸ್ ಮಾಡುವುದನ್ನು ನೋಡುವ ಆಸೆಯಲ್ಲಿ ಇಬ್ಬರು ನಟರ ಅಭಿಮಾನಿಗಳಿದ್ದರು ಆದರೆ ಅದು ಸುಳ್ಳಾಗಿದೆ.

ಇದನ್ನೂ ಓದಿ:Sai Pallavi: ಕೆಲವೇ ವರ್ಷಗಳಲ್ಲಿ ಕೋಟ್ಯಧಿಪತಿ ಆದ ಸಾಯಿ ಪಲ್ಲವಿ; ಎಷ್ಟಿದೆ ನಟಿಯ ಆಸ್ತಿ?

ಸಾಯಿ ಪಲ್ಲವಿಗೆ ಹಲವು ಅವಕಾಶಗಳಿದ್ದರೂ ಸಹ ಉದ್ದೇಶಪೂರ್ವಕವಾಗಿ ಔಟ್ ಆಂಡ್ ಔಟ್ ಕಮರ್ಶಿಯಲ್ ಮಸಾಲಾ ಸಿನಿಮಾಗಳಿಂದ ದೂರ ಉಳಿದಿದ್ದಾರೆ. ತೆಲುಗಿನ ನಟ ಚಿರಂಜೀವಿ ಅವರ ಭೋಲಾ ಶಂಕರ್ ಸಿನಿಮಾದಲ್ಲಿ ನಟಿಸುವ ಅವಕಾಶವನ್ನು ಸಾಯಿ ಪಲ್ಲವಿ ನಿರಾಕರಿಸಿದ್ದಾರೆ. ಮಾತ್ರವಲ್ಲದೆ ಅಜಿತ್ ಹಾಗೂ ವಿಜಯ್​ರ ಸಿನಿಮಾಗಳ ಅವಕಾಶವನ್ನೂ ಸಹ ಸಾಯಿ ಪಲ್ಲವಿ ನಿರಾಕರಿಸಿದ್ದಾರೆ. ಸಾಯಿ ಪಲ್ಲವಿ ಕೇವಲ ಮಹಿಳಾ ಪ್ರಧಾನ ಹಾಗೂ ನಾಯಕಿ ಪಾತ್ರಕ್ಕೆ ಹೆಚ್ಚಿನ ಸ್ಕೋಪ್ ಇರುವ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಿದ್ದಾರೆ. ಹಾಗಾಗಿ ಅವರು ದೊಡ್ಡ ಸ್ಟಾರ್ ನಟರ ಸಿನಿಮಾಗಳನ್ನು ನಿರಾಕರಿಸುತ್ತಿದ್ದಾರೆ.

ಇನ್ನು ಜೂ ಎನ್​ಟಿಆರ್ ಅವರ ದೇವರ ಸಿನಿಮಾವನ್ನು ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದು, ಆರ್​ಆರ್​ಆರ್ ಮಾದರಿಯಲ್ಲಿಯೇ ಈ ಸಿನಿಮಾವನ್ನು ಸಹ ದೊಡ್ಡ ಸ್ಕೇಲ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸಿನಿಮಾಕ್ಕೆ ನಾಯಕಿಯಾಗಿ ಬಾಲಿವುಡ್ ಯುವನಟಿ ಜಾನ್ಹವಿ ಕಪೂರ್ ಅನ್ನು ಕರೆತರಲಾಗಿದೆ. ಸಿನಿಮಾದ ವಿಲನ್ ಪಾತ್ರಕ್ಕೆ ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅನ್ನು ಕರೆತರಲಾಗಿದೆ. ಇನ್ನು ಸಿನಿಮಾದ ಕೆಲವು ಆಕ್ಷನ್ ದೃಶ್ಯಗಳಿಗಾಗಿ ಹಾಲಿವುಡ್​ನ ಪ್ರಖ್ಯಾತ ಆಕ್ಷನ್ ನಿರ್ದೇಶಕರನ್ನು ಕರೆತರಲಾಗಿದೆ. ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು ಮುಂದಿನ ಸಂಕ್ರಾಂತಿಗೆ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ದೇವರ ಸಿನಿಮಾದ ಬಳಿಕ ಜೂ ಎನ್​ಟಿಆರ್, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲವಾದರೂ ಒಂದು ಪೋಸ್ಟರ್ ಅನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಪ್ರಶಾಂತ್ ನೀಲ್ ಜೊತೆಗಿನ ಸಿನಿಮಾದ ಬಳಿಕ ಮತ್ತೊಮ್ಮೆ ರಾಜಮೌಳಿಯ ಸಿನಿಮಾದಲ್ಲಿ ಜೂ ಎನ್​ಟಿಆರ್ ನಟಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು