ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.  

ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್
ಸುಕೇಶ್-ಜಾಕ್ವೆಲಿನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 13, 2023 | 11:20 AM

200 ಕೋಟಿ ರೂಪಾಯಿ ಹಗರಣದ ಮುಖ್ಯ ರುವಾರಿ ಸುಕೇಶ್ ಚಂದ್ರಶೇಖರ್ (Sukesh Chandrashekhar)​ ​ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಆತ ಪದೇ ಪದೇ ಜಾಕ್ವೆಲಿನ್ ಅವರನ್ನು ಕಾಡುತ್ತಿದ್ದಾರೆ. ಈಗ ಅವರು ಮತ್ತೆ ಜಾಕ್ವೆಲಿನ್ ಫರ್ನಾಂಡಿಸ್​ಗೆ ಪತ್ರ ಬರೆದಿದ್ದಾನೆ. ಕ್ರಿಸ್​ಮಸ್ ಸಂದರ್ಭದಲ್ಲಿ ನಟಿಗೆ ಪ್ರೀತಿಯ ಕರೆಯೋಲೆ ಕಳುಹಿಸಿದ್ದಾನೆ. ಇದರಲ್ಲಿ ಅವರು ‘ಲವ್​’, ‘ಬೇಬಿ’ ಎಂದೆಲ್ಲ ಬರೆದುಕೊಂಡಿದ್ದಾರೆ. ಸದ್ಯ ಈ ಲೆಟರ್ ವೈರಲ್ ಆಗುತ್ತಿದೆ.

‘ಬೇಬಿ ನನಗೆ ನಿನ್ನ ಬಗ್ಗೆ ಖುಷಿ ಇದೆ. ನೀನು ಚಿತ್ರರಂಗಕ್ಕೆ ನೀಡಿದ ಕೊಡುಗೆ ಆಧರಿಸಿ DIAFA ಅವಾರ್ಡ್ ನೀಡಲಾಗಿದೆ. ಇದಕ್ಕೆ ನಿನಗೆ ಅಭಿನಂದನೆ. ನನಗೆ ಎಷ್ಟು ಖುಷಿ ಆಗಿದೆ ಎಂದು ಹೇಳಲು ಸಾಧ್ಯವೇ ಇಲ್ಲ. ನೀನು ನಿಜವಾಗಲೂ ಗ್ರೇಟ್ ಪರ್ಫಾರ್ಮರ್. ನೀನು ಬಿಳಿ ಗೌನ್​ನಲ್ಲಿ ಅದ್ಭುತವಾಗಿ ಕಾಣಿಸುತ್ತೀಯ’ ಎಂದು ಸುಕೇಶ್ ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

‘ರೆಡ್ ಅರೇಬಿಕ್ ಡ್ರೆಸ್ ಹಾಗೂ ಪಿಂಕ್ ಬಣ್ಣದ ಸೀರೆಯಲ್ಲಿ ನೀನು ಸಖತ್ ಆಗಿ ಕಾಣಿಸುತ್ತೀಯ. ನೀನು ನನ್ನ ಹಾರ್ಟ್ ಕದ್ದಿದ್ದೀಯಾ. ಈ ಜಗತ್ತಿನಲ್ಲಿರುವ ಏಕೈಕ ಜೀವಂತ ಏಂಜಲ್ ನೀನು. ಸೋ ಬ್ಯೂಟಿಫುಲ್ ಸೋ ಸ್ಟನ್ನಿಂಗ್. ಜಸ್ಟ್ ಲುಕಿಂಗ್ ಲೈಕ್ ಎ ವಾವ್’ ಎಂದು ಆತ ಬರೆದಿದ್ದಾನೆ

ಸುಕೇಶ್ ಚಂದ್ರಶೇಖರ್ ಹಲವು ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತ ಜಾಕ್ವೆಲಿನ್ ಜೊತೆ ರಿಲೇಶನ್​ಶಿಪ್​ನಲ್ಲಿ ಇದ್ದನು. ಈ ಕಾರಣಕ್ಕೆ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆಗೆ ಒಳಗಾದರು.

ಇದನ್ನೂ ಓದಿ: Jacqueline Fernandez: ವಿವಾದಗಳನ್ನು ಮರೆತು ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್​ ಅವರಿಗೆ ಈ ಪ್ರಕರಣದಿಂದ ಸಾಕಷ್ಟು ಹಿನ್ನಡೆ ಆಗಿದೆ. ಅವರಿಗೆ ವಿದೇಶಕ್ಕೆ ತೆರಳುವುದರ ಮೇಲೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ, ಅವರು ಹಲವು ಸಮಯ ವಿದೇಶಕ್ಕೆ ತೆರಳಲು ಸಾಧ್ಯವಾಗಿಲ್ಲ. ಆ ಬಳಿಕ ಅವರು ಕೋರ್ಟ್​ನಿಂದ ಒಪ್ಪಿಗೆ ಪಡೆದು ವಿದೇಶಕ್ಕೆ ಹೋದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್