ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ

200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮುಂದುವರಿದಿದೆ. ದೆಹಲಿ ನ್ಯಾಯಾಲಯವು ಜಾಕ್ವೆಲಿನ್ ಮತ್ತು ಸುಕೇಶ್ ಚಂದ್ರಶೇಖರ್ ಸೇರಿದಂತೆ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. 'ತಾನು ಬಲಿಪಶು' ಎಂಬ ನಟಿಯ ವಾದವನ್ನು ಕೋರ್ಟ್ ತಿರಸ್ಕರಿಸಿದೆ.

ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ
ಜಾಕ್ವೆಲಿನ್

Updated on: Jun 01, 2026 | 2:55 PM

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ. ಮೇ 30ರಂದು ದೆಹಲಿ ನ್ಯಾಯಾಲಯವು ಜಾಕ್ವೆಲಿನ್, ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಇತರ 15 ಜನರ ವಿರುದ್ಧ ಕ್ರಿಮಿನಲ್ ಆರೋಪಗಳನ್ನು ಹೊರಿಸಲು ಆದೇಶಿಸಿದೆ. ಇದರೊಂದಿಗೆ ನಟಿ ಕೂಡ ವಿಚಾರಣೆಗೆ ಹಾಜರಾಬೇಕಾಗದ ಪರಿಸ್ಥಿತಿ ಎದುರಾಗಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಶಾಂತ್ ಶರ್ಮಾ ಅವರು, ‘ಎಲ್ಲಾ ಆರೋಪಿಗಳ ವಿರುದ್ಧ ಬಲವಾದ ಅನುಮಾನ ಮೂಡುವಂತಹ ಸಾಕ್ಷಿಗಳು ತನಿಖಾ ವರದಿಯಲ್ಲಿ ಲಭ್ಯವಿವೆ’ ಎಂದು ತಿಳಿಸಿದ್ದು, ಜೂನ್ 3 ರಂದು ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದ್ದಾರೆ.

‘ನಾನು ಬಲಿಪಶು’ ಎಂದಿದ್ದ ಜಾಕ್ವೆಲಿನ್; ವಾದ ತಳ್ಳಿಹಾಕಿದ ಕೋರ್ಟ್

ತಾನು ಯಾವುದೇ ತಪ್ಪು ಮಾಡಿಲ್ಲ, ಈ ಪ್ರಕರಣದಲ್ಲಿ ತನ್ನನ್ನು ಬಲಿಪಶು ಮಾಡಲಾಗುತ್ತಿದೆ ಎಂಬ ಜಾಕ್ವೆಲಿನ್ ಅವರ ಮುಖ್ಯ ವಾದವನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ವಿಚಾರಣೆ ನಡೆಸಬಾರದು ಎಂಬ ಜಾಕ್ವೆಲಿನ್ ಕೋರಿಕೆಯನ್ನು ಕೋರ್ಟ್ ಒಪ್ಪಿಲ್ಲ.

ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ನಿರಂತರ ಸಂಪರ್ಕದಲ್ಲಿದ್ದರು. ಸುಕೇಶ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಸಂಪೂರ್ಣ ಮಾಹಿತಿ ಇದ್ದರೂ ಜಾಕ್ವೆಲಿನ್ ಆತನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಐಷಾರಾಮಿ ಗಿಫ್ಟ್‌ಗಳನ್ನು ಪಡೆದಿದ್ದಾರೆ ಎನ್ನಲಾಗಿದೆ. ಸುಕೇಶ್‌ನಿಂದ ತಮ್ಮ ಸಹೋದರನಿಗೆ ದೊಡ್ಡ ಮೊತ್ತದ ಹಣಕಾಸಿನ ನೆರವು ಮತ್ತು ಪೋಷಕರಿಗೆ ಐಷಾರಾಮಿ ಕಾರನ್ನು ಉಡುಗರೆಯಾಗಿ ಪಡೆದಿದ್ದರು. ‘ಅಪರಾಧದ ಮೂಲಕ ಗಳಿಸಿದ ಹಣದ ನೇರ ಲಾಭವನ್ನು ಜಾಕ್ವೆಲಿನ್ ಪಡೆದುಕೊಂಡಿರುವುದು ಸ್ಪಷ್ಟವಾಗಿದೆ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರಕರಣದಲ್ಲಿ ತಾವು ಅಪ್ರೂವರ್ ಆಗೋದಾಗಿ ಏಪ್ರಿಲ್ 16ರಂದು ಜಾಕ್ವೆಲಿನ್ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಕೋರ್ಟ್ ಅನುಮತಿ ನೀಡಿದೆ. ಜಾರಿ ನಿರ್ದೇಶನಾಲಯ (ED) ಈ ಅರ್ಜಿಯನ್ನು ತೀವ್ರವಾಗಿ ವಿರೋಧಿಸಿತ್ತು. ಮುಖ್ಯ ಆರೋಪಿಯೊಂದಿಗೆ ನೇರ ಸಂಪರ್ಕದಲ್ಲಿದ್ದ ಜಾಕ್ವೆಲಿನ್‌ಗೆ ಇಂತಹ ಅವಕಾಶ ನೀಡಬಾರದು ಎಂದು ಇಡಿ ವಾದಿಸಿತ್ತು.

ಇದನ್ನೂ ಓದಿ: ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ; ಅಪ್ರೂವರ್ ಆಗುವ ಮನವಿಗೆ ಇಡಿ ತೀವ್ರ ವಿರೋಧ

ಈ ಹಗರಣದ ಸೂತ್ರಧಾರ ಸುಕೇಶ್ ಚಂದ್ರಶೇಖರ್‌. ಈತನ್ನು ದೆಹಲಿ ಪೊಲೀಸರು 2017 ರಲ್ಲಿ ಮತ್ತು ಇಡಿ 2021 ರಲ್ಲಿ ಬಂಧಿಸಿದ್ದರು. ಸುಕೇಶ್ ಜೈಲಿನಲ್ಲಿದ್ದೂಕೊಂಡೇ ತಂತ್ರಜ್ಞಾನದ ಸಹಾಯದಿಂದ ಪ್ರಧಾನಿ ಕಚೇರಿ , ಗೃಹ ಸಚಿವಾಲಯ ಹಾಗೂ ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಕರೆಗಳನ್ನು ಮಾಡಿದ್ದನು. ಈ ಮೂಲಕ ಉದ್ಯಮಿ ಪತ್ನಿ ಅದಿತಿ ಸಿಂಗ್ ಎಂಬುವವರನ್ನು ಹೆದರಿಸಿ ಸುಮಾರು 200 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಸುಲಿಗೆ ಮಾಡಿದ್ದನು. ಇದೇ ಹಣದಲ್ಲಿ ಕೋಟ್ಯಂತರ ರೂಪಾಯಿಯನ್ನು ಜಾಕ್ವೆಲಿನ್ ಮತ್ತು ಅವರ ಕುಟುಂಬದವರ ಮೇಲೆ ಖರ್ಚು ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:53 pm, Mon, 1 June 26

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us