Jacqueline Fernandez: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಆರೋಪಿ

Jacqueline Fernandez: ಸುಕೇಶ್ ಚಂದ್ರಶೇಖರ್ ಕೇವಲ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಮಾತ್ರವಲ್ಲದೇ, ಸಾರಾ ಅಲಿಖಾನ್, ಜಾಹ್ನವಿ ಕಪೂರ್ ಗೂ ಗಿಫ್ಟ್ ಗಳನ್ನು ನೀಡಿದ್ದಾನೆ.

Jacqueline Fernandez: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಆರೋಪಿ
Jacqueline Fernandez
Follow us
S Chandramohan
| Updated By: Digi Tech Desk

Updated on:Aug 17, 2022 | 5:22 PM

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ ಈಗ ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ, ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಇ.ಡಿ. ಅಧಿಕಾರಿಗಳು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ರನ್ನು ಆರೋಪಿಯನ್ನಾಗಿಸಿ ಇಂದು ದೆಹಲಿಯ ಇ.ಡಿ. ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಾರೆ. ವಂಚಕ ಸುಕೇಶ್ ಚಂದ್ರಶೇಖರ್ ಸ್ನೇಹ ಮಾಡಿದ ತಪ್ಪಿಗೆ ಬಾಲಿವುಡ್‌ ನಟಿಗೆ ಈಗ ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾದ ಸ್ಥಿತಿ ಎದುರಾಗಿದೆ. ಜಾಕ್ವೆಲಿನ್ ಫರ್ನಾಂಡೀಸ್‌ ಇತ್ತೀಚೆಗೆ ಬಿಡುಗಡೆಯಾದ ಕನ್ನಡದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಕೂಡ ನಟಿಸಿದ್ದರು. ಅಲ್ಲದೆ ರಾ ರಾ ರುಕ್ಕಮ್ಮ ಹಾಡಿಗೆ ಹೆಜ್ಜೆ ಹಾಕಿ ಮಿಂಚಿದ್ದರು.

ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ ಬರೋಬ್ಬರಿ 215 ಕೋಟಿ ರೂಪಾಯಿ ಹಣವನ್ನು ಜೈಲಿನಲ್ಲಿರುವ ಉದ್ಯಮಿ ಖೈದಿಯನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿ ಉದ್ಯಮಿ ಪತ್ನಿಯನ್ನು ನಂಬಿಸಿ ವಸೂಲಿ ಮಾಡಿದ್ದ. ಬಳಿಕ ಉದ್ಯಮಿ ಪತ್ನಿಗೆ ತಾನು ಮೋಸ ಹೋಗಿರುವುದು ಗೊತ್ತಾಯಿತು. ಈ 215 ಕೋಟಿ ರೂಪಾಯಿ ಹಣದಲ್ಲಿ ಹತ್ತು ಕೋಟಿ ರೂಪಾಯಿ ಹಣವನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಗಿಫ್ಟ್ ನೀಡಿದ್ದ.

ಈಗ ಜಾರಿ ನಿರ್ದೇಶನಾಲಯ ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಕೂಡ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದೆ. ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಕೇಶ್ ಚಂದ್ರಶೇಖರ್ ವಂಚನೆ ಮಾಡಿ ಹಣ ಗಳಿಸಿದ್ದಾನೆ ಎಂಬುದು ಗೊತ್ತಿತ್ತು ಎಂದು ಇ.ಡಿ. ಹೇಳಿದೆ. ಇದರಿಂದ ಸುಕೇಶ್ ಚಂದ್ರಶೇಖರ್ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಆರೋಪಿಯನ್ನಾಗಿ ಮಾಡಲು ಇ.ಡಿ. ನಿರ್ಧರಿಸಿದೆ.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಜಾಕ್ವೆಲಿನ್ ಫರ್ನಾಂಡೀಸ್‌ಗೆ ಲಕ್ಸುರಿ ಬಿಎಂಡಬ್ಲ್ಯು ಕಾರ್ ಅನ್ನು ಗಿಫ್ಟ್ ಆಗಿ ಸುಕೇಶ್ ಚಂದ್ರಶೇಖರ್ ನೀಡಿದ್ದ. ಡೈಮೆಂಡ್ ಬ್ರಾಸಲೆಟ್‌, ಫ್ರಾಂಕ್ ಮುಲ್ಲರ್ ಲಕ್ಸುರಿ ವಾಚ್‌, ದುಬಾರಿ ಬೆಲೆಬಾಳುವ ಗುಸ್ಸಿ, ಚಾನಲ್‌ಬ್ಯಾಗ್‌ಗಳನ್ನು ಗಿಫ್ಟ್​ಗಳನ್ನು ನೀಡಿದ್ದರು. ಜೊತೆಗೆ ಕುದುರೆಯೊಂದನ್ನು ಗಿಫ್ಟ್ ಆಗಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಖೇಶ್ ಚಂದ್ರಶೇಖರ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕೆಲ ತಿಂಗಳ ಹಿಂದೆ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಕೇಶ್ ಚಂದ್ರಶೇಖರ್ ಮುತ್ತು ಕೊಡುತ್ತಿರುವ ಪೋಟೋಗಳು ಲೀಕ್ ಆಗಿದ್ದವು. ಬಳಿಕ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೂ ನೋಟೀಸ್ ನೀಡಿ ವಿಚಾರಣೆಗೆ ಕರೆದು ವಿಚಾರಣೆ ನಡೆಸಿದ್ದರು. ಇ.ಡಿ. ವಿಚಾರಣೆ ವೇಳೆ, ಜಾಕ್ವೆಲಿನ್ ಫರ್ನಾಂಡೀಸ್‌, ಸುಕೇಶ್ ಚಂದ್ರಶೇಖರ್ ವಂಚನೆಗೂ ತನಗೂ ಸಂಬಂಧವಿಲ್ಲ. ಈತನಿಗೆ ವಂಚನೆಯ ಹಿನ್ನಲೆ ಇದೆ ಎಂಬುದೇ ಗೊತ್ತಿರಲಿಲ್ಲ ಎಂದು ಹೇಳಿಕೆ ನೀಡಿದ್ದಳು. ಸುಕೇಶ್ ಚಂದ್ರಶೇಖರ್ ಕೇವಲ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಮಾತ್ರವಲ್ಲದೇ, ಸಾರಾ ಅಲಿಖಾನ್, ಜಾಹ್ನವಿ ಕಪೂರ್ ಗೂ ಗಿಫ್ಟ್ ಗಳನ್ನು ನೀಡಿದ್ದಾನೆ.

ದೆಹಲಿಯ ತಿಹಾರ್ ಜೈಲಿನಲ್ಲಿದ್ದುಕೊಂಡೇ ವಂಚಕ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದ ಉದ್ಯಮಿ ಮಾನವೀಂದರ್ ಸಿಂಗ್ ಪತ್ನಿ ಆದಿತಿಗೆ ಪೋನ್ ಕಾಲ್ ಗಳನ್ನು ಮಾಡಿ ತನ್ನನ್ನು ತಾನು ಕೇಂದ್ರ ಗೃಹ ಇಲಾಖೆಯ ಅಧಿಕಾರಿ, ಕಾನೂನು ಇಲಾಖೆಯ ಅಧಿಕಾರಿ ಎಂದು ಹೇಳಿಕೊಂಡು ಪತಿಯನ್ನು ಜೈಲಿನಲ್ಲಿ ಬಿಡುಗಡೆ ಮಾಡಿಸಲು ಹಣ ನೀಡಬೇಕೆಂದು ಹೇಳಿದ್ದ.

ಜೈಲಿನ ಹೊರಗೆ ಇದ್ದ ಸುಕೇಶ್ ಚಂದ್ರಶೇಖರ್ ಸಹಚರರು ಆದಿತಿಯಿಂದ ಹಣ ಪಡೆದಿದ್ದರು. ಬಳಿಕ ಆದಿತಿಗೆ ತಾನು ಮೋಸ ಹೋಗಿರುವುದಾಗಿ ಗೊತ್ತಾಗಿತ್ತು. ಬಳಿಕ ದೆಹಲಿ ಪೊಲೀಸರಿಗೆ ವಂಚನೆಯ ದೂರು ನೀಡಿದ ಬಳಿಕ ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದರು. ಬರೋಬ್ಬರಿ 215 ಕೋಟಿ ರೂಪಾಯಿ ವಸೂಲಿ ಮಾಡಿರುವುದನ್ನು ತಿಳಿದು ದೆಹಲಿ ಪೊಲೀಸರು ದಂಗಾಗಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯಕ್ಕೆ ಹೆಚ್ಚಿನ ತನಿಖೆಗಾಗಿ ವರ್ಗಾಯಿಸಿದ್ದರು.

ಇದೀಗ ಈ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಕೇಶ್ ಜೊತೆಗೆ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಶಾಮೀಲಾಗಿರುವ ಕಾರಣ ಇಡಿ ಬಾಲಿವುಡ್ ನಟಿಯನ್ನು ಆರೋಪಿಯನ್ನಾಗಿಸಿದೆ.

Published On - 11:28 am, Wed, 17 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ