ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?

ಮೊದಲು ಹೀರೋ ಆಗಿದ್ದ ಜಗಪತಿ ಬಾಬು 2014ರಲ್ಲಿ ತೆರೆಕಂಡ ‘ಲೆಜೆಂಡ್​’ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಪಾತ್ರ ಸಾಕಷ್ಟು ಮೆಚ್ಚುಗೆ ಗಳಿಸಿಕೊಂಡಿತು. ಆ ನಂತರ ಅವರು ಹಿಂದಿರುಗಿ ನೋಡಿದ್ದೇ ಇಲ್ಲ.

ಬಾಲಿವುಡ್​ಗೆ ವಿಲನ್​ ಆಗಿ ಎಂಟ್ರಿ ಕೊಡೋಕೆ ರೆಡಿ ಆದ ಜಗಪತಿ ಬಾಬು; ಯಾರು ಹೀರೋ?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 21, 2021 | 3:47 PM

ಜಗಪತಿ ಬಾಬು ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದರೆ ಆ ಸಿನಿಮಾಗೆ ಮೈಲೇಜ್​ ಸಿಗೋದರಲ್ಲಿ ಅನುಮಾನವೇ ಬೇಡ. ಅವರಿಗೆ ಸಿಗುವ ಪಾತ್ರ ಎಷ್ಟೇ ಖಡಕ್​ ಆಗಿರಲಿ ಅದನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ವೀಕ್ಷಕರಿಂದ ಭೇಷ್​ ಎನಿಸಿಕೊಳ್ಳುತ್ತಾರೆ. ಅಷ್ಟೇ ಅಲ್ಲ, ಹೀರೋಗೆ ಸರಿಸಾಟಿಯಾಗಿ ವಿಲನ್​ ರೋಲ್​ ನಿರ್ವಹಿಸುತ್ತಾರೆ. ಅವರ ವಿಲನ್​ ಮ್ಯಾನರಿಸಂ ಎಲ್ಲರಿಗೂ ಇಷ್ಟವಾಗುತ್ತದೆ. ಈಗ ಅವರು ಬಾಲಿವುಡ್​ಗೂ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ.

ಮೊದಲು ಹೀರೋ ಆಗಿದ್ದ ಜಗಪತಿ ಬಾಬು 2014ರಲ್ಲಿ ತೆರೆಕಂಡ ‘ಲೆಜೆಂಡ್​’ ಸಿನಿಮಾದಲ್ಲಿ ವಿಲನ್​ ಪಾತ್ರದಲ್ಲಿ ಕಾಣಿಸಿಕೊಂಡರು. ಈ ಪಾತ್ರ ಸಾಕಷ್ಟು ಮೆಚ್ಚುಗೆ ಗಳಿಸಿಕೊಂಡಿತು. ಆ ನಂತರ ಅವರು ಹಿಂದಿರುಗಿ ನೋಡಿದ್ದೇ ಇಲ್ಲ. ಅಲ್ಲಿಂದ ಇಲ್ಲಿವರೆಗೆ ಸಾಕಷ್ಟು ಸ್ಟಾರ್​ ಸಿನಿಮಾಗಳಿಗೆ ಅವರು ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಪೈಕಿ ಹಲವು ಸಿನಿಮಾಗಳು ಹಿಟ್​ ಆಗಿವೆ. ತೆಲುಗು ಮಾತ್ರವಲ್ಲದೆ, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲೂ ನಟಿಸಿದ್ದಾರೆ ಅವರು. ಈಗ ಜಗಪತಿ ಬಾಬು ಬಾಲಿವುಡ್​ಗೆ ಎಂಟ್ರಿ ಕೊಡೋಕೆ ರೆಡಿ ಆಗಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಹಾಗಾದರೆ, ಯಾವುದು ಆ ಸಿನಿಮಾ? ಅದಕ್ಕೆ ಹೀರೋ ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಪುಕಾರ್​’ ಸಿನಿಮಾದಲ್ಲಿ ಜಗಪತಿ ಬಾಬು ವಿಲನ್​ ಪಾತ್ರ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಚಿತ್ರತಂಡ ಅವರನ್ನು ಸಂಪರ್ಕಿಸಿದ್ದು, ಕಥೆ ಇಷ್ಟಪಟ್ಟಿದ್ದಾರೆ. ಅಲ್ಲದೆ, ಸಿನಿಮಾ ಮಾಡೋಕೂ ಓಕೆ ಎಂದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

‘ಲಗಾನ್​’ ಖ್ಯಾತಿಯ ಅಶುತೋಷ್​ ಗೋವಾರಿಕರ್​ ಅವರು ‘ಪುಕಾರ್​’ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಫರ್ಹಾನ್​ ಅಖ್ತರ್​ ನಾಯಕ. ಈ ಚಿತ್ರಕ್ಕೆ ಜಗಪತಿ ಬಾಬು ವಿಲನ್​. ಫರ್ಹಾನ್​ ತಂದೆ ಜಾವೇದ್​ ಅಖ್ತರ್​ ಈ ಸಿನಿಮಾಗೆ ಚಿತ್ರಕಥೆ ಬರೆಯುತ್ತಿದ್ದಾರೆ. ರಾಕುಲ್ ಪ್ರೀತ್​ ಸಿಂಗ್​​ ಚಿತ್ರದ ನಾಯಕಿ. ಫಾರೆಸ್ಟ್​ ರೇಂಜರ್​ ಆಗಿ ಫರ್ಹಾನ್​ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Kabzaa: ಬಹುನಿರೀಕ್ಷಿತ ‘ಕಬ್ಜ’ ಚಿತ್ರದ ಬಜೆಟ್ ಎಷ್ಟು?; ನಿರ್ದೇಶಕ ಆರ್.ಚಂದ್ರು ಹಂಚಿಕೊಂಡ್ರು ಮಾಹಿತಿ

Rajamanaar: ರಾಜಮನಾರ್​ ಪಾತ್ರ ಪರಿಚಯಿಸಿದ ಸಲಾರ್​; ಖಡಕ್​ ಲುಕ್​ನಲ್ಲಿ ಜಗಪತಿ ಬಾಬು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ