AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರೆಮೇಲೆ ಮತ್ತೆ ಒಂದಾದ ಜಗ್ಗೇಶ್-ಕೋಮಲ್ ಕುಮಾರ್; ‘ಕಾಲಾಯ ನಮಃ’ದಲ್ಲಿ ಒಟ್ಟಿಗೆ ನಟನೆ

‘ಕಾಲಾಯ ನಮಃ’ ಚಿತ್ರಕ್ಕೆ ಮತಿವಣನ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಸಾಂಗ್ ಒಂದರ ಶೂಟಿಂಗ್ ಬೆಂಗಳೂರಿನ ಹೊರ ವಲಯದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಈ ಕುರಿತು ಇತ್ತೀಚೆಗೆ ಸುದ್ದಿಗೋಷ್ಠಿ ನಡೆದಿದೆ. ತೆರೆಮೇಲೆ ಜಗ್ಗೇಶ್ ಹಾಗೂ ಕೋಮಲ್ ಮತ್ತೊಮ್ಮೆ ಒಟ್ಟಿಗೆ ಅಭಿನಯಿಸುತ್ತಿದ್ದಾರೆ ಅನ್ನೋದು ವಿಶೇಷ.

ತೆರೆಮೇಲೆ ಮತ್ತೆ ಒಂದಾದ ಜಗ್ಗೇಶ್-ಕೋಮಲ್ ಕುಮಾರ್; ‘ಕಾಲಾಯ ನಮಃ’ದಲ್ಲಿ ಒಟ್ಟಿಗೆ ನಟನೆ
ಕೋಮಲ್ ಕುಮಾರ್-ಜಗ್ಗೇಶ್
ರಾಜೇಶ್ ದುಗ್ಗುಮನೆ
|

Updated on: Aug 30, 2023 | 12:48 PM

Share

ಕೆಲ ವರ್ಷಗಳ ಕಾಲ ಚಿತ್ರರಂಗದಿಂದ ದೂರವೇ ಇದ್ದ ನಟ ಕೋಮಲ್ ಕುಮಾರ್ ಅವರು ಈಗ ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಅವರ ನಟನೆಯ ‘ನಮೋ ಭೂತಾತ್ಮ 2’ ಸಿನಿಮಾ (Namo Bhoothathma 2) ಇತ್ತೀಚೆಗೆ ರಿಲೀಸ್ ಆಗಿದೆ. ಈಗ ಅವರ ನಟನೆಯ ‘ಕಾಲಾಯ ನಮಃ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಒಂದು ವಿಶೇಷತೆ ಇದೆ. ಕೋಮಲ್ ಕುಮಾರ್ ಹಾಗೂ ಜಗ್ಗೇಶ್ ಅವರು ಒಟ್ಟಿಗೆ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅನಸೂಯ ಕೋಮಲ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಜಗ್ಗೇಶ್ (Jaggesh) ಮಗ ಯತಿರಾಜ್​ ಕೂಡ ಬಣ್ಣ ಹಚ್ಚಿದ್ದಾರೆ.

‘ಕಾಲಾಯ ನಮಃ’ ಚಿತ್ರಕ್ಕೆ ಮತಿವಣನ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಸಾಂಗ್ ಒಂದರ ಶೂಟಿಂಗ್ ಬೆಂಗಳೂರಿನ ಹೊರ ವಲಯದಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಈ ಕುರಿತು ಇತ್ತೀಚೆಗೆ ಸುದ್ದಿಗೋಷ್ಠಿ ನಡೆದಿದೆ. ತೆರೆಮೇಲೆ ಜಗ್ಗೇಶ್ ಹಾಗೂ ಕೋಮಲ್ ಮತ್ತೊಮ್ಮೆ ಒಟ್ಟಿಗೆ ಅಭಿನಯಿಸುತ್ತಿದ್ದಾರೆ ಅನ್ನೋದು ವಿಶೇಷ.

‘ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ನಾನು ಅಭಿನಯಿಸುತ್ತಿದ್ದೇನೆ. ನನ್ನ ತಮ್ಮ ಕೋಮಲ್ ಒಳ್ಳೆಯ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕೋಮಲ್ ಅದ್ಭುತ ಕಲಾವಿದ ಎಂದು ನಾನು ಮೊದಲಿನಿಂದಲೂ ಹೇಳುತ್ತಾ ಬರುತ್ತಿದ್ದೇನೆ. ಈ ಚಿತ್ರದಲ್ಲಿ ನಾನು, ಕೋಮಲ್ ಹಾಗೂ ನನ್ನ ಮಗ ಯತಿರಾಜ್ ಒಟ್ಟಿಗೆ ನಟಿಸಿದ್ದೇವೆ. ಇತ್ತೀಚೆಗೆ ರಿಲೀಸ್ ಆದ ಹಲವು ಸಿನಿಮಾಗಳು ಯಶಸ್ಸು ಕಾಣುತ್ತಿವೆ. ‘ಕಾಲಾಯ ನಮಃ’ ಕೂಡ ಯಶಸ್ಸು ಕಾಣಲಿ’ ಎಂದು ಜಗ್ಗೇಶ್ ಶುಭಹಾರೈಸಿದರು.

ಈ ಚಿತ್ರವನ್ನು ಕೋಮಲ್ ಕುಮಾರ್ ಪತ್ನಿ ನಿರ್ಮಾಣ ಮಾಡುತ್ತಿದ್ದಾರೆ. ಹೀಗಾಗಿ ಕೋಮಲ್​ಗೆ ಮತ್ತಷ್ಟು ಖುಷಿ ಇದೆ. ‘ಕಾಲಾಯ ನಮಃ ಸಿನಿಮಾ ಶೂಟಿಂಗ್ ಕೊನೆಯ ಹಂತ ತಲುಪಿದೆ. ಸದ್ಯ ಹಾಡಿನ ಶೂಟಿಂಗ್ ನಡೆಯುತ್ತಿದೆ. ಈ ಹಾಡನ್ನು ಯೋಗರಾಜ್ ಭಟ್ ಬರೆದಿದ್ದಾರೆ. ಎಮಿಲ್ ಸಂಗೀತ ನೀಡಿದ್ದಾರೆ. ನೃತ್ಯ ಸಂಯೋಜನೆಯನ್ನು ಭೂಷಣ್ ಮಾಸ್ಟರ್ ಮಾಡುತ್ತಿದ್ದಾರೆ. ಆಸಿಯಾ ಫಿರ್ದೋಸ್ ನಾಯಕಿಯಾಗಿ ನಟಿಸಿದ್ದಾರೆ’ ಎಂದರು ಕೋಮಲ್ ಕುಮಾರ್.

ಇದನ್ನೂ ಓದಿ: ‘ರೊಲೆಕ್ಸ್​’ ಚಿತ್ರಕ್ಕಾಗಿ ಫೋಟೋಶೂಟ್ ಮಾಡಿಸಿದ ನಟ ಕೋಮಲ್ ಕುಮಾರ್

ಈ ಚಿತ್ರದಲ್ಲಿ ಕೋಮಲ್, ಜಗ್ಗೇಶ್, ಯತಿರಾಜ್ ಜೊತೆ ಪ್ರಕಾಶ್ ರಾಜ್, ಸುಚೇಂದ್ರ ಪ್ರಸಾದ್, ಶೈನ್ ಶೆಟ್ಟಿ ಮೊದಲಾದವರು ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಅಕ್ಟೋಬರ್ ಅಥವಾ ನವೆಂಬರ್​​ನಲ್ಲಿ ‘ಕಾಲಾಯ ನಮಃ’ ಸಿನಿಮಾ ರಿಲೀಸ್ ಆಗಲಿದೆ. ‘ಮೇಕಪ್’, ‘ಬೇಡ ಕೃಷ್ಣ ರಂಗಿನಾಟ’, ‘ಕಾಸು ಇದ್ದೋನೆ ಬಾಸು’, ‘ಹನಿಮೂನ್ ಎಕ್ಸ್​ಪ್ರೆಸ್​, ‘ಮನ್ಮಥ’ ಮೊದಲಾದ ಸಿನಿಮಾಗಳಲ್ಲಿ ಜಗ್ಗೇಶ್ ಹಾಗೂ ಕೋಮಲ್ ಒಟ್ಟಾಗಿ ನಟಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!