AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಟ್ಟೆ ತೊಳೆದ ಪ್ರಿಯಾಂಕಾ ಚೋಪ್ರಾ’, ‘ಕಸ ಗುಡಿಸಿದ ಜಗ್ಗೇಶ್’ ಒಂದೇ ಅಲ್ಲವೇನು?

Priyanka Chopra-Jaggesh: ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಅಮೃತಸರ ಗೋಲ್ಡನ್ ಟೆಂಪಲ್​​ನಲ್ಲಿ ಭಕ್ತರು ತಿಂದುಂಡ ತಟ್ಟೆ, ಲೋಟ ತೊಳೆದಿದ್ದು ದೊಡ್ಡ ಸುದ್ದಿಯಾಯ್ತು. ಇದೀಗ ಆ ಸುದ್ದಿಯನ್ನು ಕನ್ನಡದ ಜನಪ್ರಿಯ ನಟ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಪ್ರಶ್ನೆಯೊಂದನ್ನು ಎತ್ತಿದ್ದಾರೆ. ತಟ್ಟೆ ಲೋಟ ತೊಳೆದ ಪ್ರಿಯಾಂಕಾ ಚೋಪ್ರಾಗೆ ಭೇಷ್ ಎಂದ ರಾಯರ ಮಠದಲ್ಲಿ ಜನ ಕಸ ಗುಡಿಸಿದ ತಮ್ಮನ್ನು ಅಣಕಿಸಿದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡು ಅಪಘಾತದ ವಿಷಯವನ್ನೂ ಸಹ ಹಂಚಿಕೊಂಡಿದ್ದಾರೆ.

‘ತಟ್ಟೆ ತೊಳೆದ ಪ್ರಿಯಾಂಕಾ ಚೋಪ್ರಾ’, ‘ಕಸ ಗುಡಿಸಿದ ಜಗ್ಗೇಶ್’ ಒಂದೇ ಅಲ್ಲವೇನು?
Priyanka Jaggesh
ಮಂಜುನಾಥ ಸಿ.
|

Updated on: Apr 02, 2026 | 6:58 PM

Share

ಭಾರತ ಮೂಲದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಇತ್ತೀಚೆಗೆ ಅಮೃತಸರ ಗೋಲ್ಡನ್ ಟೆಂಪಲ್​​ನಲ್ಲಿ ಭಕ್ತರು ತಿಂದುಂಡ ತಟ್ಟೆ, ಲೋಟ ತೊಳೆದಿದ್ದು ದೊಡ್ಡ ಸುದ್ದಿಯಾಯ್ತು. ಇದೀಗ ಆ ಸುದ್ದಿಯನ್ನು ಕನ್ನಡದ ಜನಪ್ರಿಯ ನಟ ಮತ್ತು ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಪ್ರಶ್ನೆಯೊಂದನ್ನು ಎತ್ತಿದ್ದಾರೆ. ತಟ್ಟೆ ಲೋಟ ತೊಳೆದ ಪ್ರಿಯಾಂಕಾ ಚೋಪ್ರಾಗೆ ಭೇಷ್ ಎಂದ ರಾಯರ ಮಠದಲ್ಲಿ ಜನ ಕಸ ಗುಡಿಸಿದ ತಮ್ಮನ್ನು ಅಣಕಿಸಿದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡು ಅಪಘಾತದ ವಿಷಯವನ್ನೂ ಸಹ ಹಂಚಿಕೊಂಡಿದ್ದಾರೆ.

ರಾಯರ ಭಕ್ತರಾಗಿರುವ ಜಗ್ಗೇಶ್ ಅವರು ರಾಯರ ಮಠದಲ್ಲಿ ಕಸ ಗುಡಿಸುತ್ತಿರುವ ವಿಡಿಯೋಕ್ಕೆ ಸಾಕಷ್ಟು ಟೀಕೆ ಹಿಂದೆ ವ್ಯಕ್ತವಾಗಿತ್ತು, ಆದರೆ ಈಗ ಪ್ರಿಯಾಂಕಾ ಚೋಪ್ರಾ ತಟ್ಟೆ ತೊಳೆದಿದ್ದನ್ನು ಹೊಗಳಲಾಗುತ್ತಿದೆ ಎಂದಿರುವ ಜಗ್ಗೇಶ್ ಅವರು, ತಮಗೆ ಆದ ಎರಡು ಅಪಘಾತಗಳ ಮಾಹಿತಿಯನ್ನು ಹಂಚಿಕೊಂಡಿರುವ ಜೊತೆಗೆ ತಾವೇಕೆ ರಾಯರ ಮಠದಲ್ಲಿ ಕಸ ಗುಡಿಸಿದೆ ಎಂಬುದನ್ನು ಸಹ ಹೇಳಿದ್ದಾರೆ.

ಜ್ಯೋತಿಷ್ಯದಲ್ಲಿ ನಂಬಿಕೆ ಇರಿಸುವ ಜಗ್ಗೇಶ್ ಅವರು ಗ್ರಹಗಳ ಕಾರಣದಿಂದಾಗಿ ತಮಗೆ ಅಪಘಾತ ಸಂಭವಿಸಲಿದೆ ಎಂಬುದನ್ನು ಅರಿತು ದೋಷ ನಿವೃತ್ತಿಗೆ ಆಲಯ ಗುಡಿಸುವ ಸೇವೆ ಮಾಡಬೇಕೆಂದು, ಇದೇ ಶ್ರೇಷ್ಠ ಪರಿಹಾರ ಎಂದು ರಾಯರ ಮಠದ ಕಸಗುಡಿಸುವ ಸೇವೆ ಮಾಡಿದರಂತೆ. ಇದರಿಂದ ದೋಷಕ್ಕೆ ಪರಿಹಾರವಾಯ್ತು, ಅಪಘಾತ ಆದರೂ ತಮಗೆ ಏನೂ ಆಗಲಿಲ್ಲ ಎಂದು ಜಗ್ಗೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಭಕ್ತರು ತಿಂದುಂಡ ತಟ್ಟೆ-ಲೋಟ ತೊಳೆದ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ

ದೆಹಲಿಯಲ್ಲಿ ತಮ್ಮ ಕಾರಿಗೆ ಮುಂದೆ ಮತ್ತು ಹಿಂದೆಯಿಂದಲೂ ಕೆಲವು ಕಾರುಗಳ ಢಿಕ್ಕಿ ಆದವೆಂದು ಆದರೆ ತಮಗಾಗಲಿ, ಕಾರಿನಲ್ಲಿದ್ದ ತಮ್ಮ ಸಿಬ್ಬಂದಿಗಾಗಲಿ ಏನೂ ಅಪಾಯ ಆಗಲಿಲ್ಲ ಎಂದಿದ್ದಾರೆ ಜಗ್ಗೇಶ್. ಚಾಲಕನ ಅಚಾತುರ್ಯದಿಂದ ತಮ್ಮ ಕಾರು ಮರಕ್ಕೆ ಢಿಕ್ಕಿ ಆಗಿ ಅಪಘಾತವಾಯ್ತು, ಹಾಗೂ ಕಾರಿನ ರಿಪೇರಿಗೆ ಲಕ್ಷ ರೂಪಾಯಿಗಳು ಖರ್ಚಾದುವೆಂದು ಆದರೆ ತಮಗೆ ಏನೂ ಆಗಲಿಲ್ಲ ಎಂದು ಜಗ್ಗೇಶ್ ಮಾಹಿತಿ ಹಂಚಿಕೊಂಡಿದ್ದಾರೆ.

ಯಾರೇ ಆಗಲಿ ದೇವರ ನಂಬಿಕೆ ಇದ್ದವರ ಸೇವೆಯ ಕಾರಣ ಅರಿಯಬೇಕೆ ಹೊರತು, ಅವರ ಕಾರ್ಯ(ವಿಶೇಷವಾಗಿ ಸೆಲಿಬ್ರಿಟಿಗಳ ವೈಯಕ್ತಿಕ ವಿಷಯ) ಕದ್ದು ಚಿತ್ರೀಕರಿಸಿ ಜಾಲತಾಣಕ್ಕೆ ಹಾಕಿ ಬರುವ ಕೆಟ್ಟ ಸಂದೇಶ ನೋಡಿ ವಿಕೃತ ಆನಂದ ಚರ್ಚೆ ಮಾಡಬಾರದು. ಅಣಕ, ಅಪಹಾಸ್ಯ, ದೇವರ ಸೇವೆ ಮಾಡುವ ಮನುಷ್ಯನಿಗೆ ಮಾಡಿದಾಗ ಅವನ ದೋಷ ಅಣಕ ಮಾಡಿದವನಿಗೆ ಸುತ್ತಿಕೊಂಡು ಅವನ ಯಶಸ್ಸು ಕುಂಟಿತವಾಗುತ್ತದೆ ಎಂದು ಜಗ್ಗೇಶ್ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್