AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ಸ್ಪರ್ಧೆ: 57ನೇ ವಯಸ್ಸಿನಲ್ಲಿ ಬೆಳ್ಳಿ ಪದಕ ಗೆದ್ದ ಪರಿಮಳಾ ಜಗ್ಗೇಶ್

‘3ನೇ ನಾಗರಾಜ ರಾವ್ ಜಗದಾಳೆ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್‌ಶಿಪ್’ ಇತ್ತೀಚೆಗೆ ನಡೆಯಿತು. ಅದರಲ್ಲಿ ಪರಿಮಳಾ ಜಗ್ಗೇಶ್ ಅವರು ಪಾಲ್ಗೊಂಡಿದ್ದರು. 57ನೇ ವಯಸ್ಸಿನಲ್ಲಿ ಅವರು ಸ್ಪರ್ಧಿಸಿದ್ದು ವಿಶೇಷ. 10 ಮೀಟರ್ ಏರ್ ಪಿಸ್ತೂಲ್ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಅವರು ಸ್ಪರ್ಧಿಸಿ, ಬೆಳ್ಳಿ ಪದಕ ಗೆದ್ದರು.

ಶೂಟಿಂಗ್ ಸ್ಪರ್ಧೆ: 57ನೇ ವಯಸ್ಸಿನಲ್ಲಿ ಬೆಳ್ಳಿ ಪದಕ ಗೆದ್ದ ಪರಿಮಳಾ ಜಗ್ಗೇಶ್
Parimala Jaggesh
ಮದನ್​ ಕುಮಾರ್​
|

Updated on: Feb 04, 2026 | 6:13 PM

Share

ನಟ ಜಗ್ಗೇಶ್ (Jaggesh) ಅವರ ಪತ್ನಿ ಪರಿಮಳಾ ಹಲವು ಕ್ಷೇತ್ರಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಅವರಿಗೆ 57 ವರ್ಷ ವಯಸ್ಸು. ‘ವಯಸ್ಸು ಕೇವಲ ಮನುಷ್ಯನ ಮನಸ್ಸಿನ ಮಿತಿಯಷ್ಟೇ ಹೊರತು ಸಾಧನೆಯ ಹಾದಿಗಲ್ಲ’ ಎಂಬುದನ್ನು ಅವರೀಗ ಸಾಬೀತುಪಡಿಸಿದ್ದಾರೆ ಆಹಾರ ತಜ್ಞೆಯೂ ಆಗಿರುವ ಪರಿಮಳಾ ಜಗ್ಗೇಶ್ (Parimala Jaggesh) ಅವರು ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇತ್ತೀಚೆಗೆ ರಾಜ್ಯ ಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್‌ ನಡೆಯಿತು. ಅದರಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ (KSRA) ವತಿಯಿಂದ ಬೆಂಗಳೂರಿನ ‘ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ’ (SAI) ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘3ನೇ ನಾಗರಾಜ ರಾವ್ ಜಗದಾಳೆ ಶೂಟಿಂಗ್ ಸ್ಪರ್ಧೆ ಮತ್ತು ಚಾಂಪಿಯನ್‌ಶಿಪ್-2026’ರಲ್ಲಿ ಪರಿಮಳಾ ಜಗ್ಗೇಶ್ ಅವರು ಪಾಲ್ಗೊಂಡಿದ್ದರು. 10 ಮೀಟರ್ ಏರ್ ಪಿಸ್ತೂಲ್ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಅವರು ಸ್ಪರ್ಧಿಸಿದರು. ಮಾಸ್ಟರ್ ವಿಮೆನ್ ಇಂಡಿವಿಜುವಲ್ ವಿಭಾಗದಲ್ಲಿ 342-4x ಸ್ಕೋರ್ ಮಾಡುವ ಮೂಲಕ ಬೆಳ್ಳಿ ಪದಕ ಗೆದ್ದರು.

1994ರಿಂದಲೂ ಮಧುಮೇಹದಿಂದ (Type 2 Diabetes) ಪರಿಮಳಾ ಅವರು ಬಳಲುತ್ತಿದ್ದಾರೆ. ಅವರಿಗೆ ಕ್ರೀಡಾ ಕ್ಷೇತ್ರಕ್ಕೆ ಕಾಲಿಡುವುದು ಸುಲಭದ ಮಾತಾಗಿರಲಿಲ್ಲ. ಶೂಟಿಂಗ್ ಎನ್ನುವುದು ಏಕಾಗ್ರತೆ ಹಾಗೂ ದೈಹಿಕ ಸ್ಥಿರತೆ ಬೇಡುವ ಕ್ರೀಡೆ. ದೇಹದಲ್ಲಿ ಸಕ್ಕರೆ ಪ್ರಮಾಣ ಏರುಪೇರಾದಾಗ ಕೈಗಳು ನಡುಗುವ ಸಾಧ್ಯತೆ ಇರುತ್ತದೆ. ಇಂತಹ ದೈಹಿಕ ಸವಾಲನ್ನು ಗೆಲ್ಲಲು ಅವರು ಕಟ್ಟುನಿಟ್ಟಾದ ಆಹಾರ ಪದ್ಧತಿ ಹಾಗೂ ‘ರಿಕವರಿ ಪ್ಲಾನ್’ ರೂಪಿಸಿಕೊಂಡು ಅಭ್ಯಾಸ ಮಾಡಿದ್ದರು.

ಇದನ್ನೂ ಓದಿ: ಹಳೆಯ ದಿನಗಳ ನೆನೆಯುತ್ತಾ ಪತ್ನಿಯೊಟ್ಟಿಗೆ ರಾಯರ ದರ್ಶನಕ್ಕೆ ತೆರಳಿದ ಜಗ್ಗೇಶ್

ಪರಿಮಳಾ ಜಗ್ಗೇಶ್ ಅವರು ಈ ಸ್ಪರ್ಧೆಯಲ್ಲಿ ಗೆಲ್ಲಲು ಶಿಸ್ತಿನಿಂದ ತರಬೇತಿ ಪಡೆದುಕೊಂಡಿದ್ದರು. ಗೋಲ್ಡನ್ ಏಸ್ ಶೂಟಿಂಗ್ ಸ್ಪೋರ್ಟ್ಸ್ ಅಕಾಡೆಮಿಯ ಕೋಚ್ ಸಂತೋಷ್ ಬಿ.ಎನ್. ಅವರಿಂದ ಕೇವಲ ಕೆಲವೇ ತಿಂಗಳುಗಳ ಹಿಂದೆ ತರಬೇತಿ ಆರಂಭಿಸಿದ್ದರು. ಒಬ್ಬ ಉದ್ಯಮಿಯಾಗಿ ಸಂಸ್ಥೆಯ ಜವಾಬ್ದಾರಿ ಮತ್ತು ಕುಟುಂಬದ ನಿರ್ವಹಣೆಯ ನಡುವೆಯೂ, ಪ್ರತಿದಿನ ಬೆಳಗ್ಗೆ 4 ಗಂಟೆಗೆ ಎದ್ದು ಶೂಟಿಂಗ್ ರೇಂಜ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದರು. ಅವರ ಈ ನಿರಂತರ ಪರಿಶ್ರಮದಿಂದ ಬೆಳ್ಳಿ ಪದಕ ಗೆಲ್ಲುವಂತಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ