ಹೊಸ ದಾಖಲೆ ಬರೆದ ‘ಜೈ ಭೀಮ್’​; ಹಾಲಿವುಡ್​ ಚಿತ್ರವನ್ನೂ ಹಿಂದಿಕ್ಕಿದ ಸೂರ್ಯ ನಟನೆಯ ಸಿನಿಮಾ

ಇತ್ತೀಚೆಗೆ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದಾರೆ.

ಹೊಸ ದಾಖಲೆ ಬರೆದ ‘ಜೈ ಭೀಮ್’​; ಹಾಲಿವುಡ್​ ಚಿತ್ರವನ್ನೂ ಹಿಂದಿಕ್ಕಿದ ಸೂರ್ಯ ನಟನೆಯ ಸಿನಿಮಾ
‘ಜೈ ಭೀಮ್​’
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 18, 2021 | 8:45 PM

ಸೂರ್ಯ (Suriya) ನಟನೆಯ ‘ಜೈ ಭೀಮ್​’ (Jai Bhim) ಚಿತ್ರ ಒಂದಾದ ಮೇಲೆ ಒಂದರಂತೆ ವಿವಾದ ಸೃಷ್ಟಿ ಮಾಡುತ್ತಲೇ ಇದೆ. ಸಿನಿಮಾ ವಿರುದ್ಧ ಸಾಕಷ್ಟು ಮಂದಿ ತಿರುಗಿ ಬಿದ್ದಿದ್ದಾರೆ. ಇನ್ನೂ ಕೆಲವರು ಸಿನಿಮಾ ಬ್ಯಾನ್​ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಮಧ್ಯೆ ನಟ ಸೂರ್ಯಗೆ ಪ್ರಾಣ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅವರ ಮನೆಗೆ ಪೊಲೀಸ್​ ಭದ್ರತೆ ಒದಗಿಸಲಾಗಿದೆ. ಈ ಎಲ್ಲಾ ಬೆಳವಣಿಗೆ ಮಧ್ಯೆ ಚಿತ್ರತಂಡ ಹೊಸ ದಾಖಲೆ ಒಂದನ್ನು ಬರೆದಿದೆ. ಈ ವಿಚಾರ ಚಿತ್ರತಂಡ ಹಾಗೂ ಸೂರ್ಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಹಾಗಾದರೆ ‘ಜೈ ಭೀಮ್’​ ಮಾಡಿದ ದಾಖಲೆ ಏನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇತ್ತೀಚೆಗೆ ‘ಜೈ ಭೀಮ್​’ ಸಿನಿಮಾ ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದಾರೆ. ಈಗ ಈ ಚಿತ್ರ ಐಎಂಡಿಬಿ ರೇಟಿಂಗ್​ನಲ್ಲಿ ದಾಖಲೆ ಬರೆದಿದೆ. ಈ ಸಿನಿಮಾಗೆ ಐಎಂಡಿಬಿಯಲ್ಲಿ 10ಕ್ಕೆ 9.6 ಅಂಕ ನೀಡಲಾಗಿದೆ. ಈ ಮೂಲಕ ಸಿನಿಮಾ ಹಾಲಿವುಡ್​ನ ನ ‘ದಿ ಗಾಡ್​ ಫಾದರ್’, ‘ದಿ ಗಾಡ್​ ಫಾದರ್​: ಪಾರ್ಟ್​ II’ ಹಾಗೂ ‘ದಿ ಡಾರ್ಕ್​ ನೈಟ್​’ನಂಥ ಚಿತ್ರಗಳನ್ನು ಹಿಂದಿಕ್ಕಿದೆ. ‘ದಿ ಗಾಡ್​ ಫಾದರ್​’ 9.2 ರೇಟಿಂಗ್​,  ‘ದಿ ಗಾಡ್​ ಫಾದರ್​: ಪಾರ್ಟ್​ II’ 9.0 ರೇಟಿಂಗ್​ ಪಡೆದುಕೊಂಡಿದೆ.

ಇತ್ತೀಚೆಗೆ ಜೈ ಭೀಮ್​ ಸಿನಿಮಾ ವಿವಾದ ಹುಟ್ಟು ಹಾಕಿತ್ತು. ವನ್ನಿಯಾರ್ ಸಮುದಾಯದ ಅಧ್ಯಕ್ಷ ಪು ಥಾ ಅರುಳ್ಮೋಳಿ ಅವರು ಸಿನಿಮಾದಲ್ಲಿ ಬರುವ ಕೆಲ ದೃಶ್ಯಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಈ ದೃಶ್ಯಗಳು ವನ್ನಿಯಾರ್ ಸಮುದಾಯಕ್ಕೆ ಅವಮಾನ ಮಾಡುವ ರೀತಿಯಲ್ಲಿದೆ. ಈ ಕಾರಣಕ್ಕೆ ಅವುಗಳನ್ನು ತೆಗೆದು ಹಾಕಬೇಕು ಎಂದು ನೋಟಿಸ್ ನೀಡಲಾಗಿದೆ. ಸಿನಿಮಾದಲ್ಲಿ ಬರುವ ಕ್ಯಾಲೆಂಡರ್​ ಒಂದರಲ್ಲಿ ಅಗ್ನಿ ಕುಂಡದ ಫೋಟೋ ಇದೆ. ಅಗ್ನಿ ಕುಂಡವು ವನ್ನಿಯಾರ್ ಸಮುದಾಯದ ಚಿಹ್ನೆ. ದುರುದ್ದೇಶ ಪೂರ್ವಕವಾಗಿ ಅಲ್ಲಿ ಅಗ್ನಿ ಕುಂಡದ ಚಿತ್ರವನ್ನು ಇರಿಸಲಾಗಿದೆ. ಸಿನಿಮಾದಲ್ಲಿ ಬರುವ ಸಬ್​ ಇನ್​ಸ್ಪೆಕ್ಟರ್​ಗೆ ಗುರುಮೂರ್ತಿ ಎಂದು ಹೆಸರು ಇಡಲಾಗಿದೆ. ಈ ಸಬ್​-ಇನ್​ಸ್ಪೆಕ್ಟರ್​ ಸಿನಿಮಾದ ಪ್ರಮುಖ ಖಳ. ಗುರುಮೂರ್ತಿ ಎಂಬುದು ಪಿಎಂಕೆಯ ಪ್ರಮುಖ ನಾಯಕ ಕಾಡುವೆಟ್ಟಿ ಜೆ ಗುರುವನ್ನು ಪ್ರತಿನಿಧಿಸುತ್ತದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ‘ಜೈ ಭೀಮ್​’ ಟೀಸರ್​ನಲ್ಲಿ ದಲಿತರ ಪರ ಧ್ವನಿ ಎತ್ತಿದ ಸೂರ್ಯ; ಸಿನಿಪ್ರಿಯರಿಂದ ಸಖತ್​ ರೆಸ್ಪಾನ್ಸ್​

ಕಪಾಳಮೋಕ್ಷ ಕಾಂಟ್ರವರ್ಸಿ: ಟೀಕೆ ಮಾಡಿದವರಿಗೆ ‘ಜೈ ಭೀಮ್​’ ನಟ ಪ್ರಕಾಶ್​ ರಾಜ್​ ಖಡಕ್​ ತಿರುಗೇಟು

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ