AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jai Shri Ram song: ‘ಜೈ ಶ್ರೀರಾಮ್​..’ ಹಾಡಿನಿಂದ ರಾಮ ಭಕ್ತರ ಮನಗೆದ್ದ ‘ಆದಿಪುರುಷ್​’ ಚಿತ್ರತಂಡ

ಆರಂಭದಿಂದಲೂ ‘ಆದಿಪುರುಷ್​’ ಸಿನಿಮಾ ಟ್ರೋಲ್​ಗೆ ಒಳಗಾಗುತ್ತಿತ್ತು. ಆದರೆ ಈಗ ‘ಜೈ ಶ್ರೀರಾಮ್​..’ ಹಾಡಿಗೆ ಮೆಚ್ಚುಗೆ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

Jai Shri Ram song: ‘ಜೈ ಶ್ರೀರಾಮ್​..’ ಹಾಡಿನಿಂದ ರಾಮ ಭಕ್ತರ ಮನಗೆದ್ದ ‘ಆದಿಪುರುಷ್​’ ಚಿತ್ರತಂಡ
ಪ್ರಭಾಸ್
ಮದನ್​ ಕುಮಾರ್​
|

Updated on: May 21, 2023 | 7:20 AM

Share

ಪ್ರಭಾಸ್​ ಅಭಿನಯದ ‘ಆದಿಪುರುಷ್​’ ಸಿನಿಮಾ (Adipurush Movie) ಬಿಡುಗಡೆಗೆ ಸಜ್ಜಾಗಿದೆ. ಜೂನ್ 16ರಂದು ಈ ಚಿತ್ರ ಅದ್ದೂರಿಯಾಗಿ ತೆರೆಕಾಣಲಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಶನಿವಾರ (ಮೇ 20) ಹೊಸ ಹಾಡು ಬಿಡುಗಡೆ ಮಾಡಲಾಗಿದೆ. ‘ಜೈ ಶ್ರೀರಾಮ್​..’ ಎಂಬ ಈ ಗೀತೆಗೆ ಅಭಿಮಾನಿಗಳಿಂದ ಮೆಚ್ಚುಗೆ ಸಿಗುತ್ತಿದೆ. ಅದರಲ್ಲೂ ರಾಮ ಭಕ್ತರ ಮನಗೆದ್ದಿದೆ. ರಾಮನನ್ನು (Shri Ram) ಸ್ಮರಿಸುವಂತಹ ಈ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಾಣುತ್ತಿದೆ. ತೆಲುಗು, ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಯಲ್ಲಿ ಈ ಹಾಡನ್ನು ರಿಲೀಸ್​ ಮಾಡಲಾಗಿದೆ. ಖ್ಯಾತ ಸಂಗೀತ ನಿರ್ದೇಶಕರಾದ ಅಜಯ್​-ಅತುಲ್​ ಅವರು ‘ಜೈ ಶ್ರೀರಾಮ್​..’ (Jai Shri Ram) ಗೀತೆಗೆ ಸಂಗೀತ ನೀಡಿದ್ದಾರೆ. ಪ್ರಭಾಸ್​ ಅಭಿಮಾನಿಗಳು ಈ ಹಾಡಿಗೆ ಮೆಚ್ಚುಗೆ ಸೂಚಿಸಿದ್ದಾರೆ.

ಆರಂಭದಿಂದಲೂ ‘ಆದಿಪುರುಷ್​’ ಸಿನಿಮಾ ಟ್ರೋಲ್​ಗೆ ಒಳಗಾಗುತ್ತಿತ್ತು. ಟೀಸರ್​ ಬಿಡುಗಡೆ ಆದಾಗ ಹಿಗ್ಗಾಮುಗ್ಗಾ ಟ್ರೋಲ್​ ಮಾಡಲಾಗಿತ್ತು. ನಂತರ ಹೊರಬಂದ ಪೋಸ್ಟರ್​ಗಳಲ್ಲೂ ನೆಟ್ಟಿಗರು ತಪ್ಪು ಹುಡುಕಿದರು. ಹಾಗಾಗಿ ಚಿತ್ರತಂಡಕ್ಕೆ ಟ್ರೋಲ್​ ಎಂಬುದು ದೊಡ್ಡ ಸವಾಲಾಗಿತ್ತು. ಈಗ ಹಾಡಿಗೆ ಮೆಚ್ಚುಗೆ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

ಬಹುಕೋಟಿ ರೂಪಾಯಿ ವೆಚ್ಚದಲ್ಲಿ ‘ಆದಿಪುರುಷ್​’ ಚಿತ್ರ ನಿರ್ಮಾಣ ಆಗಿದೆ. ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸುತ್ತಿದೆ. ದೊಡ್ಡ ಪರದೆಯಲ್ಲಿ ‘ಆದಿಪುರುಷ್​’ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ಪ್ರದರ್ಶನ ಆಗಲಿರುವುದು ವಿಶೇಷ.

ಇದನ್ನೂ ಓದಿ: Prabhas: ಹೇಗಿರಲಿದೆ ‘ಸಲಾರ್​’ ಸಿನಿಮಾ ಇಂಟರ್​ವಲ್​ ದೃಶ್ಯ? ಪ್ರಭಾಸ್​ ಅಭಿಮಾನಿಗಳಿಗೆ ಸಿಗಲಿದೆ ಭರ್ಜರಿ ಟ್ರೀಟ್​

ಪ್ರಭಾಸ್​ ಅವರು ‘ಆದಿಪುರುಷ್​’ ಸಿನಿಮಾ ಮೂಲಕ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಯಾಕೆಂದರೆ ‘ಬಾಹುಬಲಿ 2’ ಬಳಿಕ ಅವರು ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಹಾಗಾಗಿ ‘ಆದಿಪುರುಷ್​’ ಚಿತ್ರ ಗೆಲ್ಲಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದಲ್ಲದೇ ‘ಸಲಾರ್​’, ‘ಪ್ರಾಜೆಕ್ಟ್​ ಕೆ’ ಸಿನಿಮಾದ ಕೆಲಸದಲ್ಲೂ ಪ್ರಭಾಸ್​ ಬ್ಯುಸಿ ಆಗಿದ್ದಾರೆ.

ರಾಮಾಯಣವನ್ನು ಆಧರಿಸಿ ‘ಆದಿಪುರುಷ್​’ ಸಿನಿಮಾ ತಯಾರಾಗಿದೆ. ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ. ರಾಮನಾಗಿ ಪ್ರಭಾಸ್, ಸೀತೆಯಾಗಿ ಕೃತಿ ಸನೋನ್​, ರಾವಣನಾಗಿ ಸೈಫ್​ ಅಲಿ ಖಾನ್​, ಆಂಜನೇಯನಾಗಿ ದೇವದತ್ತ​ ನಾಗೆ, ಲಕ್ಷ್ಮಣನಾಗಿ ಸನ್ನಿ ಸಿಂಗ್​ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..