AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್

‘ಜೈಲರ್ 2’ ಸಿನಿಮಾದಲ್ಲಿ ಒಂದು ಪ್ರಮುಖವಾದ ಅತಿಥಿ ಪಾತ್ರವನ್ನು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಈಗ ಆ ಪ್ಲ್ಯಾನ್ ಕೈ ಬಿಡಲಾಗಿದೆ. ಶಾರುಖ್ ಖಾನ್, ಹೃತಿಕ್ ರೋಷನ್ ಮುಂತಾದವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಚಿತ್ರದ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಆಗಿದೆ.

ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್
Shah Rukh Khan, Rajinikanth
ಮದನ್​ ಕುಮಾರ್​
|

Updated on: Jun 07, 2026 | 2:56 PM

Share

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ, 2026ರ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ಜೈಲರ್ 2’ (Jailer 2) ಸದ್ಯ ಭಾರಿ ಚರ್ಚೆಯಲ್ಲಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಸೀಕ್ವೆಲ್‌ನಲ್ಲಿ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಬಳಿಕ ಕೇಳಿಬಂದ ಮಾಹಿತಿ ಪ್ರಕಾರ, ಶಾರುಖ್ ಅವರು ಈ ಆಫರ್ ನಿರಾಕರಿಸಿದರು. ಬಳಿಕ ಬೇರೆ ನಟರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ಈಗ ಆ ಪಾತ್ರವನ್ನೇ ಚಿತ್ರದಿಂದ ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ವರದಿಗಳ ಪ್ರಕಾರ, ಶಾರುಖ್ ಖಾನ್ ಅವರಿಗಾಗಿ ಸೃಷ್ಟಿಸಲಾಗಿದ್ದ ಇಡೀ ಪಾತ್ರವನ್ನು ಸ್ಕ್ರಿಪ್ಟ್‌ನಿಂದ ತೆಗೆದುಹಾಕಲು ‘ಜೈಲರ್ 2’ ತಂಡ ಮುಂದಾಗಿದೆ. ರಜನಿಕಾಂತ್ ಅವರು ಸದ್ಯ ಪ್ರವಾಸ ಮುಗಿಸಿ ಹಿಂತಿರುಗಲಿದ್ದು, ಜೂನ್ 8 ಅಥವಾ 9ರಂದು ಅವರೊಂದಿಗೆ ಒಂದು ಸಣ್ಣ ಪ್ಯಾಚ್‌ವರ್ಕ್ ಶೂಟಿಂಗ್ ನಡೆಸಲು ಚಿತ್ರತಂಡ ಯೋಜಿಸಿದೆ. ಆದರೆ, ಈ ಬಗ್ಗೆ ಚಿತ್ರದ ನಿರ್ಮಾಪಕರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮೊದಲಿಗೆ ಶಾರುಖ್ ಖಾನ್ ಮತ್ತು ರಜನಿಕಾಂತ್ ಇಬ್ಬರೂ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಭಾರಿ ರೋಮಾಂಚನ ಉಂಟುಮಾಡಿತ್ತು. ಆದರೆ ಶಾರುಖ್ ಅವರು ತಮ್ಮ ಮುಂಬರುವ ‘ಕಿಂಗ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿಯಾಗಿರುವುದರಿಂದ ಈ ಅವಕಾಶವನ್ನು ಕೈಬಿಟ್ಟಿದ್ದಾರೆ ಎನ್ನಲಾಗಿದೆ. ಶಾರುಖ್ ನಂತರ ಆ ಪಾತ್ರಕ್ಕೆ ಬಾಲಿವುಡ್ ನಟ ಹೃತಿಕ್ ರೋಷನ್ ಅವರನ್ನು ಪರಿಗಣಿಸಲಾಗುತ್ತಿದೆ ಎಂಬ ವದಂತಿಗಳು ಕೇಳಿಬಂದಿದ್ದರೂ, ಅದಕ್ಕೂ ಯಾವುದೇ ಗಟ್ಟಿ ಪುರಾವೆ ಸಿಕ್ಕಿಲ್ಲ.

‘ಜೈಲರ್ 2’ ಚಿತ್ರದಲ್ಲಿ ರಜನಿಕಾಂತ್ ಮತ್ತೆ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಈ ಬಾರಿ ಚಿತ್ರದಲ್ಲಿ ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ಎಸ್.ಜೆ. ಸೂರ್ಯ ಮತ್ತು ಸೂರಜ್ ವೆಂಜಾರಮೂಡು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇವರ ಜೊತೆಗೆ ಮೊದಲ ಭಾಗದಲ್ಲಿದ್ದ ಮೋಹನ್‌ಲಾಲ್ ಮತ್ತು ಶಿವರಾಜ್‌ಕುಮಾರ್ ಕೂಡ ಸೀಕ್ವೆಲ್‌ನಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್

ಚಿತ್ರತಂಡ ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಘೋಷಿಸದಿದ್ದರೂ, ಮೂಲಗಳ ಪ್ರಕಾರ ಸಿನಿಮಾ ಸೆಪ್ಟೆಂಬರ್ 11ರಂದು ವಿಶ್ವದಾದ್ಯಂತ ತೆರೆಕಾಣುವ ಸಾಧ್ಯತೆ ಇದೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಆಗಾಗ ಸುದ್ದಿ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More