AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್ 2’ ಚಿತ್ರತಂಡಕ್ಕೆ ವಿದ್ಯಾ ಬಾಲನ್ ಎಂಟ್ರಿ; ಕಾಂತಾ ಪಾತ್ರದಲ್ಲಿ ನಟಿ

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರಕ್ಕೆ ಬಾಲಿವುಡ್ ನಟಿ ವಿದ್ಯಾ ಬಾಲನ್ ಎಂಟ್ರಿ ಕೊಟ್ಟಿದ್ದಾರೆ. ‘ಕಾಂತಾ’ ಪಾತ್ರದಲ್ಲಿ ಮಾಸ್ ಲುಕ್ ನೀಡಿದ್ದು, ಸನ್ ಪಿಕ್ಚರ್ಸ್ ಹಂಚಿಕೊಂಡ ವೀಡಿಯೋ ವೈರಲ್ ಆಗಿದೆ. ನೆಲ್ಸನ್ ನಿರ್ದೇಶನದ ಈ ಸಿನಿಮಾ ಅಕ್ಟೋಬರ್ 15ರಂದು ರಿಲೀಸ್ ಆಗಲಿದೆ.

‘ಜೈಲರ್ 2’ ಚಿತ್ರತಂಡಕ್ಕೆ ವಿದ್ಯಾ ಬಾಲನ್ ಎಂಟ್ರಿ; ಕಾಂತಾ ಪಾತ್ರದಲ್ಲಿ ನಟಿ
ಜೈಲರ್ 2
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 21, 2026 | 8:08 AM

Share

ಮುಖ್ಯಾಂಶಗಳು

  • 'ಜೈಲರ್ 2'ಗೆ ವಿದ್ಯಾ ಬಾಲನ್ ಎಂಟ್ರಿ 
  • ಸಿಗರೇಟ್ ಸೇದುತ್ತಾ ಮಾಸ್ ಲುಕ್ ಕೊಟ್ಟ ಬಾಲಿವುಡ್ ನಟಿ
  • ಅಕ್ಟೋಬರ್ 15ಕ್ಕೆ ರಜನಿಕಾಂತ್ 'ಜೈಲರ್ 2' ಗ್ರ್ಯಾಂಡ್ ರಿಲೀಸ್

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಬಿಗ್ ಬಜೆಟ್ ಚಿತ್ರದ ಪ್ರಚಾರ ಕಾರ್ಯವನ್ನು ಸನ್ ಪಿಕ್ಚರ್ಸ್ ಅದ್ದೂರಿಯಾಗಿ ಆರಂಭಿಸಿದೆ. ಒಂದೊಂದೇ ಪಾತ್ರಗಳ ಪೋಸ್ಟರ್ ಹಾಗೂ ವೀಡಿಯೋ ತುಣುಕುಗಳನ್ನು ಬಿಡುಗಡೆ ಮಾಡುತ್ತಾ ಪ್ರೇಕ್ಷಕರ ನಿರೀಕ್ಷೆಯನ್ನು ಹೆಚ್ಚಿಸಲಾಗುತ್ತಿದೆ. ಚಿತ್ರದಲ್ಲಿ ಸಾಲು ಸಾಲು ಸ್ಟಾರ್ ನಟರು ಕಾಣಿಸಿಕೊಳ್ಳುತ್ತಿದ್ದಾರೆ.

ಈಗ ಬಾಲಿವುಡ್ ನಟಿ ವಿದ್ಯಾ ಬಾಲನ್ ‘ಜೈಲರ್ 2’ ಸಿನಿಮಾಗೆ ಸೇರ್ಪಡೆಯಾಗಿದ್ದಾರೆ. ಸೆಪ್ಟೆಂಬರ್ 20ರಂದು ಸನ್ ಪಿಕ್ಚರ್ಸ್ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿದೆ. ವಿದ್ಯಾ ಬಾಲನ್ ಈ ಚಿತ್ರದಲ್ಲಿ ‘ಕಾಂತಾ’ ಎಂಬ ಶಕ್ತಿಯುತ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಟಿಯ ಮಾಸ್ ಎಂಟ್ರಿಯ ಸಣ್ಣ ವೀಡಿಯೋ ತುಣುಕನ್ನು ಚಿತ್ರತಂಡ ಹಂಚಿಕೊಂಡಿದೆ.

ಅನಿರುದ್ಧ್ ರವಿಚಂದರ್ ಅವರ ಹಿನ್ನೆಲೆ ಸಂಗೀತದೊಂದಿಗೆ ವಿದ್ಯಾ ಬಾಲನ್ ಎಂಟ್ರಿ ನೀಡುತ್ತಾರೆ. ಸಿಗರೇಟ್ ಸೇದುತ್ತಾ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಅವರ ಮ್ಯಾನರಿಸಂ ಅಭಿಮಾನಿಗಳಿಗೆ ಇಷ್ಟವಾಗಿದೆ. ‘ಇಲ್ಲಿಗೆ ಬಂದ ಮೇಲೆ ನಾವು ಹೇಳಿದ್ದನ್ನು ಕೇಳದೆ ಹೋಗಲು ಸಾಧ್ಯವಿಲ್ಲ’ ಎನ್ನುವ ಡೈಲಾಗ್ ಗಮನ ಸೆಳೆಯುತ್ತಿದೆ.

ಇತ್ತೀಚೆಗಷ್ಟೇ ಮಲಯಾಳಂ ನಟ ಸೂರಜ್ ವೆಂಜಾರಮೂಡು ‘ದಿಲೀಪ್’ ಪಾತ್ರದಲ್ಲಿ ಪರಿಚಯಗೊಂಡಿದ್ದರು. ಅವರ ಬೆದರಿಕೆ ಡೈಲಾಗ್ ಹಾಗೂ ಸ್ಟೈಲಿಶ್ ಎಂಟ್ರಿ ವೈರಲ್ ಆಗಿತ್ತು. ನಂತರ ಎಸ್‌ಜೆ ಸೂರ್ಯ ‘ಬೋಧಿ’ ಪಾತ್ರದ ಮೂಲಕ ಗತ್ತಿನ ಎಂಟ್ರಿ ಕೊಟ್ಟು ಗಮನ ಸೆಳೆದಿದ್ದರು. ಈ ಇಬ್ಬರು ನಟರ ಪಾತ್ರಗಳು ಕೂಡ ಸೌಂಡ್ ಮಾಡುತ್ತಿವೆ.

ಇದನ್ನೂ ಓದಿ: ‘ಜೈಲರ್ 2’ ಚಿತ್ರದ ಬಗ್ಗೆ ದೊಡ್ಡ ಅಪ್​ಡೇಟ್ ಕೊಟ್ಟ ರಜನಿಕಾಂತ್

ಮೊದಲ ಭಾಗದಲ್ಲಿದ್ದ ರಮ್ಯಾ ಕೃಷ್ಣನ್, ಯೋಗಿ ಬಾಬು ಹಾಗೂ ಮಿರ್ನಾ ಈ ಭಾಗದಲ್ಲೂ ಮುಂದುವರಿದಿದ್ದಾರೆ. ಬಹುನಿರೀಕ್ಷಿತ ‘ಜೈಲರ್ 2’ ಚಿತ್ರವು ಅಕ್ಟೋಬರ್ 15ರಂದು ಪ್ರಪಂಚದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸ್ಟಾರ್​​ಗಳ ದಂಡೇ ಇರುವ ಈ ಚಿತ್ರಕ್ಕಾಗಿ ಚಿತ್ರಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ