ಮೂರನೇ ಸೋಮವಾರಕ್ಕೆ ತಗ್ಗಿತು ‘ಜೈಲರ್’, ‘ಗದರ್ 2’ ಕಲೆಕ್ಷನ್; ಯಾವ ಚಿತ್ರದ ಗಳಿಕೆ ಎಷ್ಟು?

‘ಜೈಲರ್’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 319 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಮಟ್ಟದಲ್ಲಿ 558 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ಸೋಮವಾರ (ಆಗಸ್ಟ್ 18) ಚಿತ್ರದ ಗಳಿಕೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕಲೆಕ್ಷನ್ ಮತ್ತಷ್ಟು ತಗ್ಗಲಿದೆ.

ಮೂರನೇ ಸೋಮವಾರಕ್ಕೆ ತಗ್ಗಿತು ‘ಜೈಲರ್’, ‘ಗದರ್ 2’ ಕಲೆಕ್ಷನ್; ಯಾವ ಚಿತ್ರದ ಗಳಿಕೆ ಎಷ್ಟು?
ರಜನಿ-ಸನ್ನಿ ಡಿಯೋಲ್
Follow us
ರಾಜೇಶ್ ದುಗ್ಗುಮನೆ
|

Updated on: Aug 29, 2023 | 10:44 AM

ತಮಿಳಿನ ‘ಜೈಲರ್’ ಸಿನಿಮಾ ಹಾಗೂ ಹಿಂದಿಯ ‘ಗದರ್ 2’ (Gadar 2) ಚಿತ್ರಗಳು ಒಂದೇ ವಾರ ರಿಲೀಸ್ ಆದವು. ರಜನಿ ಸಿನಿಮಾ ಆಗಸ್ಟ್ 10ರಂದು ಬಿಡುಗಡೆ ಆದರೆ, ‘ಗದರ್ 2’ ಸಿನಿಮಾ ಆಗಸ್ಟ್ 11ರಂದು ರಿಲೀಸ್ ಆಯಿತು. ಈ ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿದವು. ಈ ಚಿತ್ರಗಳ ಗಳಿಕೆ ಮೂರನೇ ಸೋಮವಾರ ಕೊಂಚ ಕಡಿಮೆ ಆಗಿದೆ. ಮುಂದಿನ ದಿನಗಳಲ್ಲಿ ಗಳಿಕೆಯಲ್ಲಿ ಮತ್ತಷ್ಟು ಇಳಿಕೆ ಕಾಣುವುದು ಪಕ್ಕಾ ಎನ್ನಲಾಗುತ್ತಿದೆ.ಯಾವ ಚಿತ್ರದ ಗಳಿಕೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ತಗ್ಗಿತು ಜೈಲರ್ ಅಬ್ಬರ

ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾದಲ್ಲಿ ಶಿವರಾಜ್​ಕುಮಾರ್, ಮೋಹನ್​ಲಾಲ್ ಮೊದಲಾದವರು ಪ್ರಮುಖ ಪಾತ್ರ ನಿಭಾಯಿಸಿದರು. ಆಗಸ್ಟ್ 10ರಂದು ರಿಲೀಸ್ ಆದ ಈ ಚಿತ್ರ ಮೊದಲ ದಿನವೇ ಅಬ್ಬರಿಸಿತು. ನೆಲ್ಸನ್ ದಿಲೀಪ್​ ಕುಮಾರ್ ನಿರ್ದೇಶನಕ್ಕೆ ಭರ್ಜರಿ ಮೆಚ್ಚುಗೆ ಸಿಕ್ಕಿತು. ಈ ಕಾರಣದಿಂದ ಸಿನಿಮಾನ ಜನರು ಮುಗಿಬಿದ್ದು ವೀಕ್ಷಿಸಿದರು. ರಜನಿ, ಶಿವಣ್ಣನ ಅಭಿಮಾನಿಗಳು ಎರಡು ಮೂರು ಬಾರಿ ಸಿನಿಮಾ ನೋಡಿದ್ದಾರೆ. ಇದರಿಂದ ಸಹಜವಾಗಿಯೇ ಕಲೆಕ್ಷನ್ ಹೆಚ್ಚಿದೆ.

ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 319 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಮಟ್ಟದಲ್ಲಿ 558 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೂರನೇ ಸೋಮವಾರ (ಆಗಸ್ಟ್ 18) ಚಿತ್ರದ ಗಳಿಕೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕಲೆಕ್ಷನ್ ಮತ್ತಷ್ಟು ತಗ್ಗಲಿದೆ.

ಇದನ್ನೂ ಓದಿ: ಆರ್​ಸಿಬಿ ಘನತೆಗೆ ಧಕ್ಕೆ ತಂದ ‘ಜೈಲರ್’; ಸಿನಿಮಾ ದೃಶ್ಯಕ್ಕೆ ಕತ್ತರಿ ಹಾಕಲು ಕೋರ್ಟ್ ಸೂಚನೆ

‘ಗದರ್ 2’ ಅಬ್ಬರವೂ ಕಡಿಮೆ

ಸನ್ನಿ ಡಿಯೋಲ್ ನಟನೆಯ ‘ಗದರ್ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡಿದೆ. ಈ ಚಿತ್ರದ ಮೂಲಕ ಸನ್ನಿ ಅವರು ವೃತ್ತಿಜೀವನದಲ್ಲೇ ಅತಿದೊಡ್ಡ ಯಶಸ್ಸು ಕಂಡಿದ್ದಾರೆ. ಮೂರನೇ ಸೋಮವಾರ ಈ ಸಿನಿಮಾ 4.6 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಕಲೆಕ್ಷನ್ 460 ಕೋಟಿ ರೂಪಾಯಿ ಆಗಿದೆ. ‘ಗದರ್’ ಸಿನಿಮಾ 2001ರಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಅದರ ಸೀಕ್ವೆಲ್ ಆಗಿ ‘ಗದರ್ 2’ ಸಿನಿಮಾ ರಿಲೀಸ್ ಆಯಿತು. ಹಲವು ದಿನಗಳ ಕಾಲ ಈ ಚಿತ್ರ ಭರ್ಜರಿ ಕಮಾಯಿ ಮಾಡಿದೆ. ವೀಕೆಂಡ್​ನಲ್ಲಿ ಕಲೆಕ್ಷನ್ ಹೆಚ್ಚುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ