ಈ ಹಬ್ಬಕ್ಕೆ ಉಡುಗೊರೆಯಾಗಿ ಒಟಿಟಿಯಲ್ಲಿ ಬರಲಿದೆ ‘ಜೈಲರ್’ ಸಿನಿಮಾ?

‘ಜೈಲರ್’ ಚಿತ್ರದಲ್ಲಿ ರಜನಿಕಾಂತ್ ಅವರು ನಿವೃತ್ತ ಜೈಲರ್ ಆಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಈ ಚಿತ್ರದಲ್ಲಿ ಎರಡು ಶೇಡ್ ಇದೆ. ಶಿವರಾಜ್​ಕುಮಾರ್ ಜೊತೆ ರಜನಿಕಾಂತ್, ಶಿವಣ್ಣ, ಮೋಹನ್​ಲಾಲ್, ವಿನಾಯಕನ್ ಮೊದಲಾದ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಒಟಿಟಿ ದಿನಾಂಕದ ಬಗ್ಗೆ ಸುದ್ದಿ ಹರಿದಾಡಿದೆ.

ಈ ಹಬ್ಬಕ್ಕೆ ಉಡುಗೊರೆಯಾಗಿ ಒಟಿಟಿಯಲ್ಲಿ ಬರಲಿದೆ ‘ಜೈಲರ್’ ಸಿನಿಮಾ?
ರಜನೀಕಾಂತ್-ಜೈಲರ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Aug 14, 2023 | 2:07 PM

‘ಜೈಲರ್’ ಸಿನಿಮಾ (Jailer Movie) ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರ ಭಾರತೀಯ ಬಾಕ್ಸ್ ಆಫೀಸ್​ನಲ್ಲಿ ಕೇವಲ ಮೂರು ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಿದೇಶದ ಲೆಕ್ಕಚಾರವೂ ಸೇರಿದರೆ ಈ ಸಂಖ್ಯೆ ಮತ್ತಷ್ಟು ದೊಡ್ಡದಾಗುತ್ತದೆ. ದೊಡ್ಡ ಸಿನಿಮಾ ರಿಲೀಸ್ ಆದಾಗಲೇ ಒಟಿಟಿ ರಿಲೀಸ್ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿ ಆಗುತ್ತದೆ. ಈಗ ‘ಜೈಲರ್’ ಸಿನಿಮಾ ಒಟಿಟಿ ದಿನಾಂಕದ ಬಗ್ಗೆ ಚರ್ಚೆ ಶುರುವಾಗಿದೆ. ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿರುವಾಗಲೇ ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕದ ಬಗ್ಗೆ ಸುದ್ದಿ ಹಬ್ಬಿದೆ.

‘ಜೈಲರ್’ ಚಿತ್ರದಲ್ಲಿ ರಜನಿಕಾಂತ್ ಅವರು ನಿವೃತ್ತ ಜೈಲರ್ ಆಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಈ ಚಿತ್ರದಲ್ಲಿ ಎರಡು ಶೇಡ್ ಇದೆ. ಶಿವರಾಜ್​ಕುಮಾರ್ ಜೊತೆ ರಜನಿಕಾಂತ್, ಶಿವಣ್ಣ, ಮೋಹನ್​ಲಾಲ್, ವಿನಾಯಕನ್ ಮೊದಲಾದ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಇದೆ. ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ರಜನಿಕಾಂತ್ ಜೊತೆ ಶಿವಣ್ಣನ  ಪಾತ್ರವೂ ಪ್ರೇಕ್ಷಕರಿಗೆ ಇಷ್ಟವಾಗಿದೆ.

‘ಜೈಲರ್’ ಸಿನಿಮಾನ ಸನ್​ ಪಿಕ್ಚರ್ಸ್ ನಿರ್ಮಾಣ ಮಾಡಿದೆ. ಹೀಗಾಗಿ, ಇದು ‘ಸನ್ ನೆಕ್ಸ್ಟ್​’ ಒಟಿಟಿ ಮೂಲಕ ಪ್ರಸಾರ ಕಾಣಲಿದೆ. ದಸರಾ ಸಂದರ್ಭದಲ್ಲಿ ಈ ಚಿತ್ರ ಒಟಿಟಿಯಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ ಎಂಬ ಸುದ್ದಿ ಇದೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ ಎಂದಾಗ ಒಟಿಟಿ ರಿಲೀಸ್ ದಿನಾಂಕವನ್ನು ರಿವೀಲ್ ಮಾಡುವ ಸಾಹಸಕ್ಕೆ ಯಾರೂ ಹೋಗುವುದಿಲ್ಲ. ಒಂದೊಮ್ಮೆ ಒಟಿಟಿ ರಿಲೀಸ್ ದಿನಾಂಕ ಘೋಷಣೆ ಆದರೆ, ಸಿನಿಮಾದ ಕಲೆಕ್ಷನ್​ಗೆ ಹೊಡೆತ ಉಂಟಾಗುತ್ತದೆ. ಈ ಕಾರಣದಿಂದಲೇ ‘ಜೈಲರ್’ ಸಿನಿಮಾ ತಂಡದವರು ಈ ಬಗ್ಗೆ ಸದ್ಯಕ್ಕಂತೂ ಯಾವುದೇ ಅಪ್​ಡೇಟ್ ನೀಡುವುದಿಲ್ಲ.

ಇದನ್ನೂ ಓದಿ: ‘ಜೈಲರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು? ಮೂರನೇ ದಿನಕ್ಕೆ ಶತಕ ಗ್ಯಾರಂಟಿ

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಗಿದೆ. ಮೊದಲ ದಿನವೇ ಈ ಚಿತ್ರ 48 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಚಿತ್ರದ ಗಳಿಕೆ ಈಗಾಗಲೇ 100 ಕೋಟಿ ರೂಪಾಯಿ ದಾಟಿದೆ. ಆಗಸ್ಟ್ 15ರಂದು ಸರ್ಕಾರಿ ರಜೆ ಇದೆ. ಇದು ಚಿತ್ರಕ್ಕೆ ಸಹಕಾರಿ ಆಗಲಿದೆ. ತಮಿಳುನಾಡಿನಲ್ಲಿ ಈ ಚಿತ್ರ ಭರ್ಜರಿ ಕಮಾಯಿ ಮಾಡುತ್ತಿದೆ. ಶಿವಣ್ಣ ಇರುವುದರಿಂದ ಕರ್ನಾಟಕದಲ್ಲೂ ಸಿನಿಮಾಗೆ ಮೆಚ್ಚುಗೆ ಸಿಗುತ್ತಿದೆ.  ಮೋಹನ್​ಲಾಲ್ ಹಾಗೂ ವಿನಾಯಕನ್ ಅವರಿಂದ ಕೇರಳ ಭಾಗದಲ್ಲಿ ಸಿನಿಮಾ ಉತ್ತಮ ಕಲೆಕ್ಷನ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:04 pm, Mon, 14 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ