ಡಬ್ಬಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ‘ಜೈಲರ್’ ಸಿನಿಮಾ ವಿಲನ್  

|

Updated on: Sep 08, 2023 | 11:41 AM

G. Marimuthu Passed Away: ಶುಕ್ರವಾರ ಬೆಳಿಗ್ಗೆ ಮಾರಿಮುತ್ತು ಅವರು ಟಿವಿ ಶೋ ಒಂದರ ಡಬ್ಬಿಂಗ್​ನಲ್ಲಿ ಭಾಗಿ ಆಗಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಈ ಡಬ್ಬಿಂಗ್ ಕೆಲಸ ನಡೆಯುತ್ತಿತ್ತು. ಅವರು ಡಬ್ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಅಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ತೆಗೆದುಕೊಂಡು ಹೋಗಲಾಯಿತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು.

ಡಬ್ಬಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ‘ಜೈಲರ್’ ಸಿನಿಮಾ ವಿಲನ್  
ಮಾರಿಮುತ್ತು
Follow us on

ತಮಿಳುನಾಡಿನ ಖ್ಯಾತ ನಟ ಮಾರಿಮುತ್ತು (Marimuthu) ಅವರು ಹೃದಯಾಘಾತದಿಂದ ಇಂದು (ಸೆಪ್ಟೆಂಬರ್ 8) ಮೃತಪಟ್ಟಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ರಿಲೀಸ್ ಆದ ಜೈಲರ್’ ಸಿನಿಮಾದಲ್ಲಿ (Jailer Movie) ಅವರು ವಿಲನ್ ಸಹಚರನ ಪಾತ್ರ ಮಾಡಿದ್ದರು. ಹೃದಯಾಘಾತ ಆದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಅವರ ಸಾವಿಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ನಿಧನ ವಾರ್ತೆ ಅನೇಕರಿಗೆ ಶಾಕ್ ತಂದಿದೆ.

ಶುಕ್ರವಾರ ಬೆಳಿಗ್ಗೆ ಮಾರಿಮುತ್ತು ಅವರು ಟಿವಿ ಶೋ ಒಂದರ ಡಬ್ಬಿಂಗ್​ನಲ್ಲಿ ಭಾಗಿ ಆಗಿದ್ದರು. ಚೆನ್ನೈನ ಸ್ಟುಡಿಯೋದಲ್ಲಿ ಈ ಡಬ್ಬಿಂಗ್ ಕೆಲಸ ನಡೆಯುತ್ತಿತ್ತು. ಅವರು ಡಬ್ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಅಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ತೆಗೆದುಕೊಂಡು ಹೋಗಲಾಯಿತು. ಆದರೆ, ಆಗಲೇ ಅವರು ಮೃತಪಟ್ಟಿದ್ದರು. ಚೆನ್ನೈನಲ್ಲಿರುವ ಅವರ ನಿವಾಸಕ್ಕೆ ಮೃತದೇಹವನ್ನು ಸ್ಥಳಾಂತರಿಸಲಾಗಿದೆ.

‘ಜೈಲರ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 650 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಚಿತ್ರದಲ್ಲಿ ವಿಲನ್ ವರ್ಮಾನ (ವಿನಾಯಕನ್) ಸಹಚರನಾಗಿ ಮಾರಿಮುತ್ತು ಕಾಣಿಸಿಕೊಂಡಿದ್ದರು. ಅವರ ಪಾತ್ರ ಕೂಡ ಗಮನ ಸೆಳೆದಿತ್ತು. ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದಾಗಲೇ ಅವರು ಮೃತಪಟ್ಟಿರೋದು ಬೇಸರದ ಸಂಗತಿ.

ಇದನ್ನೂ ಓದಿ: ‘ಜೈಲರ್’ ಮ್ಯೂಸಿಕ್ ಕಂಪೋಸರ್ ಅನಿರುದ್ಧ್ ರವಿಚಂದರ್​ಗೆ ದುಬಾರಿ ಪೋರ್ಷಾ ಕಾರು; ಇದರ ಬೆಲೆ ಎಷ್ಟು?

ಮಾರಿಮುತ್ತು ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1999ರಲ್ಲಿ. ಅಜಿತ್ ಕುಮಾರ್ ನಟನೆಯ ‘ವಾಲಿ’ ಅವರ ನಟನೆಯ ಮೊದಲ ಸಿನಿಮಾ. ಬಳಿಕ ಅವರು ಹಲವು ಪೋಷಕ ಪಾತ್ರದಲ್ಲಿ ನಟಿಸಿದರು. ‘ತೇರಿ’ ಸಿನಿಮಾದಲ್ಲಿ ಅವರು ರಾಜಕಾರಣಿಯ ಪಾತ್ರ ಮಾಡಿದ್ದರು. ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಚಿತ್ರದಲ್ಲಿ ಅವರು ನಟಿಸುತ್ತಿದ್ದರು. ಸಿನಿಮಾ ಶೂಟಿಂಗ್​ ಪ್ರಗತಿಯಲ್ಲಿರುವಾಗಲೇ ‘ಅವರು ಕೊನೆಯುಸಿರು ಎಳೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Fri, 8 September 23