ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ‘ಜೈಲರ್​’ ಸಿನಿಮಾ? ಬಾಕ್ಸ್​ ಆಫೀಸ್​ನಲ್ಲಿ ರಜನಿಕಾಂತ್​ ಅಬ್ಬರ

Jailer Box Office Collection: ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲೂ ‘ಜೈಲರ್​’ ಸಿನಿಮಾಗೆ ಭರ್ಜರಿ ಓಪನಿಂಗ್​ ಸಿಕ್ಕಿದೆ. ಈ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಶಿವರಾಜ್​ಕುಮಾರ್​, ಮೋಹನ್​ಲಾಲ್​, ಜಾಕಿ ಶ್ರಾಫ್​ ಮುಂತಾದ ಘಟಾನುಘಟಿ ಕಲಾವಿದರು ನಟಿಸಿರುವುದರಿಂದ ಕ್ರೇಜ್​ ಹೆಚ್ಚಾಗಿದೆ.

ಮೊದಲ ದಿನ ಎಷ್ಟು ಕಲೆಕ್ಷನ್​ ಮಾಡಲಿದೆ ‘ಜೈಲರ್​’ ಸಿನಿಮಾ? ಬಾಕ್ಸ್​ ಆಫೀಸ್​ನಲ್ಲಿ ರಜನಿಕಾಂತ್​ ಅಬ್ಬರ
ರಜನಿಕಾಂತ್​
Follow us
ಮದನ್​ ಕುಮಾರ್​
|

Updated on: Aug 10, 2023 | 12:40 PM

ನಟ ರಜನಿಕಾಂತ್​ (Rajinikanth) ಅಭಿಮಾನಿಗಳಿಗೆ ಇಂದು (ಆಗಸ್ಟ್​ 10) ಹಬ್ಬ. ಯಾಕೆಂದರೆ ಬಹುನಿರೀಕ್ಷಿತ ‘ಜೈಲರ್​’ ಸಿನಿಮಾ (Jailer Movie) ರಿಲೀಸ್​ ಆಗಿದೆ. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಿರುವ ಈ ಚಿತ್ರವನ್ನು ಪ್ರೇಕ್ಷಕರು ಮುಗಿಬಿದ್ದು ನೋಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಟಿಕೆಟ್​ ಬುಕಿಂಗ್​ ಶುರುವಾಗಿತ್ತು. ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ಗಳು ಬಹುತೇಕ ಎಲ್ಲ ಕಡೆಗಳಲ್ಲಿ ಸೋಲ್ಡ್​ಔಟ್​ ಆಗಿವೆ. ರಜನಿಕಾಂತ್​ ಮಾತ್ರವಲ್ಲದೇ ಅನೇಕ ಸ್ಟಾರ್​ ನಟರು ಕೂಡ ‘ಜೈಲರ್​’ ಸಿನಿಮಾದಲ್ಲಿ ನಟಿಸಿರುವುದರಿಂದ ಈ ಚಿತ್ರಕ್ಕೆ ಹೈಪ್​ ಸೃಷ್ಟಿ ಆಗಿತ್ತು. ಮೊದಲ ದಿನ ಈ ಸಿನಿಮಾ 18ರಿಂದ 19 ಕೋಟಿ ರೂಪಾಯಿ ಕಲೆಕ್ಷನ್​ (Jailer Collection) ಮಾಡಬಹುದು ಎಂದು ಬಾಕ್ಸ್​ ಆಫೀಸ್ ವ್ಯವಹಾರ ಬಲ್ಲವರು ಊಹಿಸುತ್ತಿದ್ದಾರೆ.

‘ಜೈಲರ್​​’ಸಿನಿಮಾಗೆ ನೆಲ್ಸನ್​ ದಿಲೀಪ್​ಕುಮಾರ್​ ಅವರು ನಿರ್ದೇಶನ ಮಾಡಿದ್ದಾರೆ. ಬಹಳ ಮಾಸ್​ ಆಗಿ ಈ ಚಿತ್ರ ಮೂಡಿಬಂದಿದೆ. ಮೊದಲ ದಿನ ಮೊದಲ ಶೋ ನೋಡಿ ಬಂದ ಬಹುತೇಕ ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಕಾರಣದಿಂದ ‘ಜೈಲರ್​’ ಸಿನಿಮಾಗೆ ಪ್ರೇಕ್ಷಕರಿಂದ ಬಾಯಿ ಮಾತಿನ ಪ್ರಚಾರ ಚೆನ್ನಾಗಿ ಸಿಗುತ್ತಿದೆ. ಹಾಗಾಗಿ ಮೊದಲ ದಿನ ಸಂಜೆಯ ಶೋಗಳು ಹೌಸ್​ಫುಲ್​ ಪ್ರದರ್ಶನ ಕಾಣಲಿವೆ.

ಇದನ್ನೂ ಓದಿ: Jailer Movie Review: ಇದು ಮಾಸ್ ಮಸಾಲ ‘ಜೈಲರ್’; ಇಷ್ಟವಾಗುತ್ತೆ ರಜನಿ, ಶಿವಣ್ಣನ ಖದರ್

ರಜನಿಕಾಂತ್​ ಅವರಿಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದಾರೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲೂ ಅವರ ಸಿನಿಮಾಗೆ ಭರ್ಜರಿ ಓಪನಿಂಗ್​ ಸಿಗುತ್ತದೆ. ‘ಜೈಲರ್​’ ಸಿನಿಮಾದಲ್ಲಿ ರಜನಿಕಾಂತ್ ಜೊತೆ ಶಿವರಾಜ್​ಕುಮಾರ್​, ಮೋಹನ್​ಲಾಲ್​, ಜಾಕಿ ಶ್ರಾಫ್​ ಮುಂತಾದ ಘಟಾನುಘಟಿ ಕಲಾವಿದರು ನಟಿಸಿರುವುದರಿಂದ ಕರ್ನಾಟಕ ಮತ್ತು ಕೇರಳದಲ್ಲೂ ಈ ಸಿನಿಮಾದ ಕ್ರೇಜ್​ ಹೆಚ್ಚಾಗಿದೆ. ಈ ಸಿನಿಮಾಗೆ ಅನಿರುದ್ಧ್​ ರವಿಚಂದರ್​ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ‘ಜೈಲರ್​’ ಬಿಡುಗಡೆ ಪ್ರಯುಕ್ತ ಆ.10ರಂದು ರಜೆ ಘೋಷಿಸಿದ ಖಾಸಗಿ ಕಂಪನಿಗಳು; ಅಬ್ಬಬ್ಬಾ ಇದು ರಜನಿಕಾಂತ್​ ಹವಾ

ವಿದೇಶದಲ್ಲೂ ‘ಜೈಲರ್​’ ಸಿನಿಮಾ ಬಿಡುಗಡೆ ಆಗಿದೆ. ತಮನ್ನಾ ಭಾಟಿಯಾ ಮತ್ತು ರಜನಿಕಾಂತ್​ ಅವರು ಜೋಡಿಯಾಗಿ ಹೆಜ್ಜೆ ಹಾಕಿದ ‘ಕಾವಾಲಾ..’ ಹಾಡು ಸೂಪರ್​ ಹಿಟ್​ ಆಗಿದೆ. ಇಷ್ಟೆಲ್ಲ ಹೈಪ್​ ಪಡೆದುಕೊಂಡಿರುವ ಕಾರಣದಿಂದ ಭಾರತದಲ್ಲಿ ಈ ಸಿನಿಮಾ ಮೊದಲ ದಿನ 13 ಕೋಟಿ ರೂಪಾಯಿ ಗಳಿಸಲಿದೆ. ವಿದೇಶದಲ್ಲಿ 6 ಕೋಟಿ ರೂಪಾಯಿ ಕಲೆಕ್ಷನ್​ ಆಗಲಿದೆ. ಎರಡನ್ನೂ ಸೇರಿಸಿ 19 ಕೋಟಿ ರೂಪಾಯಿ ಗಳಿಕೆ ಆಗುತ್ತದೆ ಎಂದು ಅಂದಾಜಿಸಲಾಗಿದೆ. ಗುರುವಾರ (ಆಗಸ್ಟ್​ 11) ಈ ಬಗ್ಗೆ ಪಕ್ಕಾ ಲೆಕ್ಕ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ