Jailer Records: ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ ‘ಜೈಲರ್’; ತಮಿಳುನಾಡಿನಲ್ಲಿ 235 ಕೋಟಿ ರೂ. ಗಳಿಕೆ

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಮೊದಲ ದಿನವೇ ಈ ಚಿತ್ರ ಮ್ಯಾಜಿಕ್ ಮಾಡಿತು. ಭಾರತದಲ್ಲಿ ಈ ಚಿತ್ರ ಮೊದಲ ದಿನ 48 ಕೋಟಿ ರೂಪಾಯಿ ಬಾಚಿಕೊಂಡಿತು. ನಂತರದ ದಿನಗಳಲ್ಲೂ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂತು. ದಕ್ಷಿಣ ಭಾರತದಲ್ಲಿ ಸಿನಿಮಾ ಪಾರುಪತ್ಯ ಸಾಧಿಸಿದೆ.

Jailer Records: ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ ‘ಜೈಲರ್’; ತಮಿಳುನಾಡಿನಲ್ಲಿ 235 ಕೋಟಿ ರೂ. ಗಳಿಕೆ
ರಜನಿ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Aug 18, 2023 | 11:35 AM

ಜೈಲರ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿತ್ತು. ಆ ನಿರೀಕ್ಷೆಯನ್ನು ಮೀರಿ ಚಿತ್ರ ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ಎರಡನೇ ವಾರವೂ ಭರ್ಜರಿ ಗಳಿಕೆ ಆಗುತ್ತಿದೆ. ನೆಲ್ಸನ್ ದಿಲೀಪ್ ಕುಮಾರ್ (Nelson Dileep Kumar) ನಿರ್ದೇಶನದ, ರಜನಿಕಾಂತ್ (Rajinikanth) ನಟನೆಯ ಈ ಸಿನಿಮಾ ಎಂಟು ದಿನಕ್ಕೆ ತಮಿಳುನಾಡಿನಲ್ಲಿ 235 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾದ ಕಲೆಕ್ಷನ್ 450+ ಕೋಟಿ ರೂಪಾಯಿ ಆಗಿದೆ ಅನ್ನೋದು ವಿಶೇಷ. ಇನ್ನೂ ಹಲವು ದಿನಗಳ ಕಾಲ ಈ ನಾಗಾಲೋಟ ಮುಂದುವರಿಯಲಿದೆ.

‘ಜೈಲರ್’ ಸಿನಿಮಾ ಆಗಸ್ಟ್ 10ರಂದು ರಿಲೀಸ್ ಆಯಿತು. ಮೊದಲ ದಿನವೇ ಈ ಚಿತ್ರ ಮ್ಯಾಜಿಕ್ ಮಾಡಿತು. ಭಾರತದಲ್ಲಿ ಈ ಚಿತ್ರ ಮೊದಲ ದಿನ 48 ಕೋಟಿ ರೂಪಾಯಿ ಬಾಚಿಕೊಂಡಿತು. ನಂತರದ ದಿನಗಳಲ್ಲೂ ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಹಣ ಹರಿದು ಬಂತು. ದಕ್ಷಿಣ ಭಾರತದಲ್ಲಿ ಸಿನಿಮಾ ಪಾರುಪತ್ಯ ಸಾಧಿಸಿದೆ. ಬಾಲಿವುಡ್ ಸಿನಿಮಾಗಳ ಯಶಸ್ಸಿನ ಬಿಸಿ ಈ ಚಿತ್ರಕ್ಕೆ ತಟ್ಟುತ್ತಿಲ್ಲ.

ಬಾಲಿವುಡ್​ನಲ್ಲಿ ‘ಗದರ್ 2’ ಸಿನಿಮಾ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಚಿತ್ರ ಐದು ದಿನಕ್ಕೆ 262 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು, ‘ಒಎಂಜಿ 2’ ಸಿನಿಮಾ ಕೂಡ 100 ಕೋಟಿ ರೂಪಾಯಿ ಗಳಿಸಿದೆ. ಈ ಚಿತ್ರಗಳು ದಕ್ಷಿಣ ಭಾರತದಲ್ಲಿ ‘ಜೈಲರ್​’ ಚಿತ್ರದ ಜೊತೆ ಸ್ಪರ್ಧೆ ನೀಡೋಕೆ ಸಾಧ್ಯವಾಗುತ್ತಿಲ್ಲ. ತಮಿಳು ಮಾತ್ರವಲ್ಲದೆ, ತೆಲುಗು ಭಾಷೆಯಲ್ಲೂ ಸಿನಿಮಾ ಸದ್ದು ಮಾಡುತ್ತಿದೆ.

ಇದನ್ನೂ ಓದಿ: 400 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಜೈಲರ್’ ಸಿನಿಮಾ; ಕರ್ನಾಟಕದಲ್ಲಿ ಎಷ್ಟು ಗಳಿಕೆ?

ರಜನಿಕಾಂತ್ ಜೊತೆ ಶಿವರಾಜ್​ಕುಮಾರ್, ಮೋಹನ್​ಲಾಲ್, ಜಾಕಿ ಶ್ರಾಫ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಚಿತ್ರಕ್ಕೆ ಸಹಕಾರಿ ಆಗಿದೆ. ಬೇರೆ ಭಾಷೆಗಳಲ್ಲಿ ಸಿನಿಮಾಗೆ ಹೈಪ್ ಸೃಷ್ಟಿ ಆಗೋಕೆ ಇದೂ ಕಾರಣ. ಸದ್ಯ ರಜನಿಕಾಂತ್ ಅವರು ಹಿಮಾಚಲ್ ಪ್ರದೇಶಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಆಧ್ಯಾತ್ಮ ಗುರುಗಳನ್ನು ಭೇಟಿ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:28 am, Fri, 18 August 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ