‘ಜೈಲರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು? ಮೂರನೇ ದಿನಕ್ಕೆ ಶತಕ ಗ್ಯಾರಂಟಿ

Jailer Movie Second Day Collection: ‘ಜೈಲರ್’ ಚಿತ್ರದಲ್ಲಿ ದಕ್ಷಿಣ ಭಾರತದ ಹಲವು ಸ್ಟಾರ್​ಗಳಿದ್ದಾರೆ. ಕನ್ನಡದಿಂದ ಶಿವರಾಜ್​ಕುಮಾರ್, ಮಲಯಾಳಂನಿಂದ ಮೋಹನ್​ಲಾಲ್​ ಹಾಗೂ ವಿನಾಯಕನ್, ಹಿಂದಿಯಿಂದ ಜಾಕಿ ಶ್ರಾಫ್, ತೆಲುಗಿನಿಂದ ನಾಗ ಬಾಬು ಹಾಗೂ ಸುನೀಲ್ ನಟಿಸಿದ್ದಾರೆ. ಈ ಕಾರಣಕ್ಕೆ ಸಿನಿಮಾದ ಮೈಲೇಜ್ ಹೆಚ್ಚಿದೆ.

‘ಜೈಲರ್’ ಸಿನಿಮಾದ ಎರಡನೇ ದಿನದ ಕಲೆಕ್ಷನ್ ಎಷ್ಟು? ಮೂರನೇ ದಿನಕ್ಕೆ ಶತಕ ಗ್ಯಾರಂಟಿ
ಜೈಲರ್ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Aug 12, 2023 | 8:35 AM

ರಜನಿಕಾಂತ್, ಶಿವರಾಜ್​ಕುಮಾರ್ (Shivarajkumar), ಮೋಹನ್​ಲಾಲ್, ಜಾಕಿ ಶ್ರಾಫ್ ನಟನೆಯ ‘ಜೈಲರ್’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ಮೂಲಕ ರಜನಿಕಾಂತ್ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಈ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿತು. ಎರಡನೇ ದಿನವೂ ಈ ಚಿತ್ರಕ್ಕೆ ಉತ್ತಮ ಗಳಿಕೆ ಆಗಿದೆ. ಮೂರೇ ದಿನಕ್ಕೆ ಈ ಚಿತ್ರದ ಗಳಿಕೆ ನೂರು ಕೋಟಿ ರೂಪಾಯಿ ದಾಟಲಿದೆ ಅನ್ನೋದು ವಿಶೇಷ. ಸದ್ಯ ರಜನಿ ಫ್ಯಾನ್ಸ್ ಚಿತ್ರವನ್ನು ಎಂಜಾಯ್ ಮಾಡುತ್ತಿದ್ದಾರೆ. ಅವರ ಎನರ್ಜಿ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಜನಿಕಾಂತ್ ಅವರ ವಯಸ್ಸು ಈಗ 72. ಈ ವಯಸ್ಸಿನಲ್ಲೂ ಅವರು ಆ್ಯಕ್ಷನ್ ಚಿತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಮೊದಲ ದಿನ 48 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಅಂದರೆ ಶುಕ್ರವಾರ (ಆಗಸ್ಟ್ 11) ಈ ಚಿತ್ರದ ಗಳಿಕೆ 27 ಕೋಟಿ ರೂಪಾಯಿ ಆಗಿದೆ. ಈ ಮೂಲಕ ಚಿತ್ರದ ಒಟ್ಟೂ ಗಳಿಕೆ 75 ಕೋಟಿ ರೂಪಾಯಿ ಆಗಿದೆ. ಇಂದು (ಆಗಸ್ಟ್ 12) ಹಾಗೂ ನಾಳೆ (ಆಗಸ್ಟ್ 13) ಚಿತ್ರಕ್ಕೆ ಭರ್ಜರಿ ಕಲೆಕ್ಷನ್ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಆಗಸ್ಟ್ 15ರಂದು ಚಿತ್ರ ಒಳ್ಳೆಯ ಕಮಾಯಿ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ.

‘ಜೈಲರ್’ ಚಿತ್ರದಲ್ಲಿ ದಕ್ಷಿಣ ಭಾರತದ ಹಲವು ಸ್ಟಾರ್​ಗಳಿದ್ದಾರೆ. ಕನ್ನಡದಿಂದ ಶಿವರಾಜ್​ಕುಮಾರ್, ಮಲಯಾಳಂನಿಂದ ಮೋಹನ್​ಲಾಲ್​ ಹಾಗೂ ವಿನಾಯಕನ್, ಹಿಂದಿಯಿಂದ ಜಾಕಿ ಶ್ರಾಫ್, ತೆಲುಗಿನಿಂದ ನಾಗ ಬಾಬು ಹಾಗೂ ಸುನೀಲ್ ನಟಿಸಿದ್ದಾರೆ. ಈ ಕಾರಣಕ್ಕೆ ಸಿನಿಮಾದ ಮೈಲೇಜ್ ಹೆಚ್ಚಿದೆ.

ಇದನ್ನೂ ಓದಿ: ‘ಜೈಲರ್​’ ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯೂ ಕೇಳದೇ ಮನಶಾಂತಿಗಾಗಿ ಹಿಮಾಲಯಕ್ಕೆ ತೆರಳಿದ ರಜನಿಕಾಂತ್​

ಇದನ್ನೂ ಓದಿ: ಪರಭಾಷಿಗರಿಗೂ ಹತ್ತಿರವಾದ ಶಿವರಾಜ್​ಕುಮಾರ್; ಹ್ಯಾಟ್ರಿಕ್ ಹೀರೋಈ ಖದರ್​ಗೆ ಭರಪೂರ ಮೆಚ್ಚುಗೆ 

ಶಿವರಾಜ್​ಕುಮಾರ್ ಮಾಡಿರುವ ನರಸಿಂಹನ ಪಾತ್ರವನ್ನು ಎಲ್ಲರೂ ಹೊಗಳುತ್ತಿದ್ದಾರೆ. ಅವರು ಖಡಕ್ ಪಾತ್ರದ ಮೂಲಕ ಗಮನ ಸೆಳೆದಿದ್ದಾರೆ. ಅವರ ಪಾತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ಶಿವರಾಜ್​ಕುಮಾರ್ ಅವರ ಖುಷಿಯನ್ನು ಹೆಚ್ಚಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್