AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ಪೊಲೀಸ್ ಠಾಣೆಯಲ್ಲಿ ದುರ್ವರ್ತನೆ: ‘ಜೈಲರ್’ ನಟನ ಬಂಧನ

Vinayakan: 'ಜೈಲರ್' ಸಿನಿಮಾದ ವಿಲನ್ ವರ್ಮಾ ಪಾತ್ರಧಾರಿ ವಿನಾಯಗನ್ , ನಿಜ ಜೀವನದಲ್ಲಿಯೂ ವಿಲನ್ ಪ್ರವೃತ್ತಿ ತೋರಿಸಿದ್ದಾರೆ. ಕುಡಿದು ಪೊಲೀಸ್ ಠಾಣೆಗೆ ಹೋಗಿ ಗಲಾಟೆ ಮಾಡಿ ಪೊಲೀಸರ ಅತಿಥಿಯಾಗಿದ್ದಾರೆ.

ಕುಡಿದ ಅಮಲಿನಲ್ಲಿ ಪೊಲೀಸ್ ಠಾಣೆಯಲ್ಲಿ ದುರ್ವರ್ತನೆ: 'ಜೈಲರ್' ನಟನ ಬಂಧನ
ವಿನಾಯಗನ್
ಮಂಜುನಾಥ ಸಿ.
|

Updated on: Oct 24, 2023 | 10:28 PM

Share

ಇತ್ತೀಚೆಗೆ ಬಿಡುಗಡೆ ಆಗಿ ಸೂಪರ್ ಡೂಪರ್ ಹಿಟ್ ಆಗಿರುವ ರಜನೀಕಾಂತ್ (Rajinikanth) ನಟನೆಯ ‘ಜೈಲರ್’ ಸಿನಿಮಾದ ವಿಲನ್ ವಿನಾಯಗನ್ ನಿಜ ಜೀವನದಲ್ಲಿಯೂ ವಿಲನ್ ಪ್ರವೃತ್ತಿ ತೋರಿಸಿ ಪೊಲೀಸರ ಅತಿಥಿಯಾಗಿದ್ದಾರೆ. ಕುಡಿದು ಪೊಲೀಸ್ ಠಾಣೆಗೆ ಬಂದಿದ್ದು ಮಾತ್ರವಲ್ಲದೆ ಠಾಣೆಯಲ್ಲಿ ದುರ್ವರ್ತನೆ ತೋರಿರುವ ವಿನಾಯಗನ್ ಅನ್ನು ಕೇರಳದ ಉತ್ತರ ಎರ್ನಾಕುಲಂ ಪೊಲೀಸರು ಬಂಧಿಸಿದ್ದಾರೆ.

ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ವಿನಾಯಕನ್ ವಿರುದ್ಧ ದೂರೊಂದು ದಾಖಲಾಗಿತ್ತು. ವಿನಾಯಗನ್ ವಾಸವಿರುವ ಅಪಾರ್ಟ್​ಮೆಂಟ್​ನವರು ಅತಿಯಾದ ಶಬ್ದ, ಲೇಟ್ ನೈಟ್ ಪಾರ್ಟಿಗಳು ಮಾಡುತ್ತಿದ್ದ ವಿನಯ್ ವಿರುದ್ಧ ದೂರು ನೀಡಿದ್ದರು. ಇದೇ ಕಾರಣಕ್ಕೆ ವಿನಾಯಗನ್ ಅವರಿಗೆ ಪೊಲೀಸರು ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದರು.

ಇಂದು ಕುಡಿದ ಮತ್ತಿನಲ್ಲಿ ಪೊಲೀಸ್ ಠಾಣೆ ಪ್ರವೇಶಿಸಿದ ನಟ ವಿನಾಯಗನ್, ಠಾಣೆಯಲ್ಲಿ ಕೆಟ್ಟದಾಗಿ ವರ್ತಿಸಲು ಪ್ರಾರಂಭಿಸಿದ ಹಾಗೂ ಪೊಲೀಸ್ ಠಾಣೆಯ ಅಧಿಕಾರಿಗಳನ್ನು ಏಕವಚನದಲ್ಲಿ ಮಾತನಾಡಿದ್ದು ಮಾತ್ರವೇ ಅಲ್ಲದೆ ಅವಾಚ್ಯ ಶಬ್ದಗಳಿಂದಲೂ ನಿಂದಿಸಿದರು ಎಂದು ಪೊಲೀಸರು ಆರೋಪಿಸಿದ್ದು, ವಿನಾಯಗನ್ ವಿರುದ್ಧ ದೂರು ದಾಖಲಿಸಿಕೊಂಡು ಅವರನ್ನು ಬಂಧಿಸಿದ ಪೊಲೀಸರು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆರೋಗ್ಯ ತಪಾಸಣೆ, ರಕ್ತ ಪರೀಕ್ಷೆಗಳನ್ನು ಮಾಡಿಸಿದ್ದಾರೆ.

ಸಾಧಾರಣ ಟಿ-ಶರ್ಟ್-ನಿಕ್ಕರ್ ಧರಿಸಿದ ವಿನಾಯಗನ್ ಅವರನ್ನು ಪೊಲೀಸ್ ಠಾಣೆಯ ಮೂಲೆಯೊಂದರಲ್ಲಿ ನಿಲ್ಲಿಸಿರುವ ಚಿತ್ರ ಹಾಗೂ ವಿನಾಯಗನ್ ಅವರನ್ನು ಆಟೋನಲ್ಲಿ ಕರೆದುಕೊಂಡು ಹೋಗುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜೈಲರ್ ಸಿನಿಮಾ ವಿಲನ್​ಗೆ ಕೊಟ್ಟಿದ್ದು ಕೇವಲ ₹35 ಲಕ್ಷವೇ?

ವಿನಾಯಗನ್ ಅವರು ಸೈಡ್ ಡ್ಯಾನ್ಸರ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಈಗ ಪ್ರಮುಖ ವಿಲನ್ ಪಾತ್ರಧಾರಿಗಳಲ್ಲಿ ಒಬ್ಬರಾಗಿದ್ದಾರೆ. ದುಲ್ಕರ್ ಸಲ್ಮಾನ್ ಜೊತೆಗೆ ನಟಿಸಿದ್ದ ‘ಕಪಾಟಿಪದಂ’ ಸಿನಿಮಾ ವಿನಾಯಗನ್​ಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು. ಅದಾದ ಬಳಿಕ ಹಲವು ಸಿನಿಮಾಗಳಲ್ಲಿ ವಿನಾಯಗನ್ ವಿಲನ್ ಆಗಿ ನಟಿಸಿದ್ದರು. ಇತ್ತೀಚೆಗೆ ‘ಜೈಲರ್’ ಸಿನಿಮಾದ ವರ್ಮಾ ಪಾತ್ರಕ್ಕೂ ವಿನಾಯಗನ್​ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಬಿಡುಗಡೆಗೆ ಸಜ್ಜಾಗಿರುವ ಚಿಯಾನ್ ವಿಕ್ರಂ ನಟಿಸಿರುವ ‘ಧ್ರುವ ನಚ್ಚತ್ತಿರಂ’ ಸಿನಿಮಾದಲ್ಲಿಯೂ ವಿನಾಯಗನ್ ನಟಿಸಿದ್ದಾರೆ. ಮಲಯಾಳಂನಲ್ಲಿ ‘ಕರಿಂತಾಂಧಾನ್’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು