AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ಪೂಜಾ ಹೆಗ್ಡೆ: ವಿಡಿಯೋ ವೈರಲ್

ಬೆಳ್ಳಿತೆರೆಯ ಮೇಲೆ ಮಿಂಚಿದ್ದ ದಳಪತಿ ವಿಜಯ್ ಈಗ ತಮಿಳುನಾಡಿನ ಜನರ ಮನಗೆದ್ದು ಶಾಸನ ಸಭೆ ಪ್ರವೇಶಿಸಲು ಸಜ್ಜಾಗಿದ್ದಾರೆ. ಈ ರೀತಿ ಆಗುತ್ತದೆ ಎಂದು ನಟಿ ಪೂಜಾ ಹೆಗ್ಡೆ ಅವರು ಈ ಮೊದಲೇ ಭವಿಷ್ಯ ನುಡಿದಿದ್ದರು. ಅವರ ಹಳೇ ವಿಡಿಯೋ ಈಗ ವೈರಲ್ ಆಗುತ್ತಿದೆ.

ವಿಜಯ್ ಗೆಲುವಿನ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ಪೂಜಾ ಹೆಗ್ಡೆ: ವಿಡಿಯೋ ವೈರಲ್
Thalapathy Vijay, Pooja Hegde
ಮದನ್​ ಕುಮಾರ್​
|

Updated on: May 05, 2026 | 7:30 PM

Share

ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಫಲಿತಾಂಶ ಹೊರಬಿದ್ದಿದ್ದು, ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಯಾರೂ ಊಹಿಸದ ರೀತಿಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ವಿಜಯ್ (Thalapathy Vijay) ಅವರದ್ದೇ ಹವಾ. ಈ ನಡುವೆ, ವಿಜಯ್ ಅವರ ಈ ಭರ್ಜರಿ ಗೆಲುವಿನ ಬಗ್ಗೆ ನಟಿ ಪೂಜಾ ಹೆಗ್ಡೆ (Pooja Hegde) ಅವರು ಬಹಳ ಹಿಂದೆಯೇ ನುಡಿದಿದ್ದ ಭವಿಷ್ಯ ಈಗ ಅಕ್ಷರಶಃ ನಿಜವಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.

1. ವೈರಲ್ ಆದ ಹಳೆಯ ವಿಡಿಯೋದಲ್ಲಿದೆ ಪೂಜಾ ಹೆಗ್ಡೆ ಭವಿಷ್ಯವಾಣಿ.

2. ಯಾರು ಚುನಾವಣೆ ಗೆಲ್ತಾರೆ ಎನ್ನೋದನ್ನು ಮೊದಲೇ ಹೇಳಿದ್ದ ನಟಿ.

3. ವಿಜಯ್ ಜತೆ ‘ಬೀಸ್ಟ್’, ‘ಜನ ನಾಯಗನ್’ ಚಿತ್ರದಲ್ಲಿ ಪೂಜಾ ನಟನೆ.

ವಿಜಯ್ ಮತ್ತು ಪೂಜಾ ಹೆಗ್ಡೆ ಅಭಿನಯದ ‘ಜನ ನಾಯಗನ್’ ಚಿತ್ರದ ಶೂಟಿಂಗ್ ಸೆಟ್‌ನ ಹಳೆಯ ವಿಡಿಯೋವೊಂದನ್ನು ಪೂಜಾ ಅವರು ಹಂಚಿಕೊಂಡಿದ್ದರು. ಆ ವಿಡಿಯೋದಲ್ಲಿ ಅಲ್ಲಿನ ಬೋರ್ಡ್ ಒಂದರ ಮೇಲೆ ‘ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?’ ಎಂದು ಬರೆಯಲಾಗಿತ್ತು. ಆಗ ಪೂಜಾ ಹೆಗ್ಡೆ ಅವರು ತಮಾಷೆಯಾಗಿ ತಮ್ಮ ಪಕ್ಕದಲ್ಲೇ ನಿಂತಿದ್ದ ವಿಜಯ್ ಅವರತ್ತ ಬೆರಳು ಮಾಡಿ ತೋರಿಸಿದ್ದರು. ಪೂಜಾ ಅವರ ಈ ಮಾತಿಗೆ ವಿಜಯ್ ಅವರು ಮುಗುಳ್ನಗುತ್ತಾ ನಾಚಿಕೊಂಡಿದ್ದರು.

ಅಂದು ಪೂಜಾ ಹೆಗ್ಡೆ ತಮಾಷೆಯಾಗಿ ನುಡಿದಿದ್ದ ಈ ಭವಿಷ್ಯವಾಣಿ ಇಂದು ನಿಜವಾಗಿದೆ. ವಿಜಯ್ ಅವರ ಟಿವಿಕೆ ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ಸರ್ಕಾರ ರಚಿಸಲು ಸಜ್ಜಾಗಿದೆ. ವಿಜಯ್ ಅವರಿಗೆ ರಾಜಕೀಯದ ಬಗ್ಗೆ ಮೊದಲಿನಿಂದಲೂ ಆಸಕ್ತಿ ಇತ್ತು. ಅದಕ್ಕಾಗಿ ಅವರು ತೆರೆಮರೆಯಲ್ಲಿ ತಯಾರಿ ಮಾಡಿಕೊಂಡಿದ್ದರು. ಈಗ ಫಲ ಸಿಕ್ಕಿದೆ.

ಪೂಜಾ ಹೆಗ್ಡೆ ಹಂಚಿಕೊಂಡ ವಿಡಿಯೋ ಇಲ್ಲಿದೆ:

View this post on Instagram

A post shared by Pooja Hegde (@hegdepooja)

ತಮಿಳುನಾಡು ರಾಜಕೀಯದಲ್ಲಿ ದಶಕಗಳಿಂದ ಪ್ರಾಬಲ್ಯ ಹೊಂದಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಭದ್ರಕೋಟೆಯನ್ನು ವಿಜಯ್ ಪುಡಿಪುಡಿ ಮಾಡಿದ್ದಾರೆ. ‘ಬೀಸ್ಟ್’ ಸಿನಿಮಾ ನಂತರ ಪೂಜಾ ಮತ್ತು ವಿಜಯ್ ಜೋಡಿಯಾಗಿ ನಟಿಸುತ್ತಿರುವ ಎರಡನೇ ಸಿನಿಮಾ ‘ಜನ ನಾಯಗನ್’. ಈ ಸಿನಿಮಾದ ಶೀರ್ಷಿಕೆಗೆ ತಕ್ಕಂತೆಯೇ ವಿಜಯ್ ಇಂದು ನಿಜವಾದ ಜನನಾಯಕನಾಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: ಟಿವಿಕೆ ಜಯಭೇರಿ: ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ

ವಿಜಯ್ ಅವರ ಈ ಅಪ್ರತಿಮ ಸಾಧನೆಗೆ ಭಾರತೀಯ ಚಿತ್ರರಂಗದ ಘಟಾನುಘಟಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ಮಹೇಶ್ ಬಾಬು, ನಯನತಾರಾ, ಹೇಮಾ ಮಾಲಿನಿ, ಟೈಗರ್ ಶ್ರಾಫ್, ನಾನಿ, ರಜನಿಕಾಂತ್, ರಿಷಬ್ ಶೆಟ್ಟಿ, ಶಿವರಾಜ್​ಕುಮಾರ್ ಸೇರಿದಂತೆ ಹಲವು ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ವಿಜಯ್ ಅವರ ರಾಜಕೀಯ ಯಶಸ್ಸನ್ನು ಕೊಂಡಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ