AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಸಾವಿರ ಶೋ ಪಡೆದರೂ ‘ಜನ ನಾಯಗನ್’ ಚಿತ್ರಕ್ಕೆ 10 ಕೋಟಿ ರೂ. ಕಲೆಕ್ಷನ್

Jana Nayagan Movie Collection: 'ಜನ ನಾಯಕನ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಐದನೇ ದಿನವೂ ಭರ್ಜರಿ ಕಲೆಕ್ಷನ್ ಮಾಡಿದೆ. ಸೋಮವಾರ ಚಿತ್ರವು 10.15 ಕೋಟಿ ರೂಪಾಯಿ ಗಳಿಸಿದೆ. ಇದರೊಂದಿಗೆ ಚಿತ್ರದ ವಿಶ್ವಾದ್ಯಂತ ಒಟ್ಟು ಕಲೆಕ್ಷನ್ 233.24 ಕೋಟಿ ರೂಪಾಯಿಗೆ ತಲುಪಿದೆ ಎಂದು ಸಿನಿಮಾ ವಿಶ್ಲೇಷಕರು ಅಧಿಕೃತವಾಗಿ ವರದಿ ಮಾಡಿದ್ದಾರೆ.

10 ಸಾವಿರ ಶೋ ಪಡೆದರೂ ‘ಜನ ನಾಯಗನ್’ ಚಿತ್ರಕ್ಕೆ 10 ಕೋಟಿ ರೂ. ಕಲೆಕ್ಷನ್
ಜನ ನಾಯಗನ್
ರಾಜೇಶ್ ದುಗ್ಗುಮನೆ
|

Updated on: Jul 28, 2026 | 8:52 AM

Share

ಮುಖ್ಯಾಂಶಗಳು

  • ಸೋಮವಾರವೂ ಸಾಧಾರಣ ಕಮಾಯಿ ಮಾಡಿದ ಜನ ನಾಯಗನ್ 
  • ವಿದೇಶದಲ್ಲೂ ಹವಾ ಎಬ್ಬಿಸಿದ ಭಾರತೀಯ ಸಿನಿಮಾ
  • ವಿಶ್ವದಾದ್ಯಂತ 230 ಕೋಟಿ ದಾಟಿದ ಗಲ್ಲಾಪೆಟ್ಟಿಗೆ ಗಳಿಕೆ

‘ಜನ ನಾಯಗನ್’ ಸಿನಿಮಾಗೆ (Jana Nayagan) ನೆಗೆಟಿವ್ ವಿಮರ್ಶೆ ಸಿಕ್ಕಿದೆ. ಆದಾಗ್ಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಐದು ದಿನಗಳಲ್ಲಿ ಜಾಗತಿಕವಾಗಿ ಒಳ್ಳೆಯಕಮಾಯಿ ಮಾಡಿದೆ. ಸೋಮವಾರದ ಪರೀಕ್ಷೆಯಲ್ಲೂ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದೆ. ಈ ಸಿನಿಮಾ ಒಟ್ಟಾರೆಯಾಗಿ 500 ಕೋಟಿ ರೂಪಾಯಿ ಗಳಿಕೆ ಮಾಡೋದು ಅನುಮಾನ ಎನ್ನಲಾಗುತ್ತಿದೆ.

ಐದನೇ ದಿನವಾದ ಸೋಮವಾರ ‘ಜನ ನಾಯಗನ್’ ಸಿನಿಮಾ ದೇಶಾದ್ಯಂತ ಒಟ್ಟು 10,436 ಶೋಗಳನ್ನು ಪ್ರದರ್ಶನ ಕಂಡಿದೆ. ಅಂದು 10.15 ಕೋಟಿ ರೂಪಾಯಿ ನೆಟ್​ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ಒಟ್ಟು ಗಳಿಕೆ 157.74 ಕೋಟಿ ರೂಪಾಯಿಗೆ ತಲುಪಿದೆ. ದೇಶದ ಒಟ್ಟು ನೆಟ್ ಕಲೆಕ್ಷನ್ 134.90 ಕೋಟಿ ರೂಪಾಯಿ ಆಗಿದೆ. ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಅತಿ ಹೆಚ್ಚು ಅಂದರೆ 42.70 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಆ ಬಳಿಕ ಈ ಗಳಿಕೆ ಹತ್ತಿರ ಸುಳಿಯಲೂ ಸಿನಿಮಾ ಬಳಿ ಸಾಧ್ಯವಾಗಿಲ್ಲ.

ವಿದೇಶಗಳಲ್ಲೂ ಈ ಸಿನಿಮಾಗೆ ಸಾಧಾರಣ ಬೇಡಿಕೆ ಸೃಷ್ಟಿಯಾಗಿದೆ. ಐದನೇ ದಿನ ವಿದೇಶಗಳಲ್ಲಿ ಸಿನಿಮಾ 4.00 ಕೋಟಿ ರೂಪಾಯಿ ಮಾತ್ರ ಗಳಿಸಿದೆ. ಇದರಿಂದ ವಿದೇಶದ ಒಟ್ಟು ಗ್ರಾಸ್ ಕಲೆಕ್ಷನ್ 75.50 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಭಾರತ ಮತ್ತು ವಿದೇಶದ ಗಳಿಕೆ ಸೇರಿ ಸಿನಿಮಾ ಜಾಗತಿಕವಾಗಿ ಸಾಧಾರಣ ಪ್ರದರ್ಶನ ಕಾಣುತ್ತಿದೆ. ‘ಜನ ನಾಯಗನ್’ ಚಿತ್ರದ ಒಟ್ಟು ವಿಶ್ವಾದ್ಯಂತ ಗ್ರಾಸ್ ಕಲೆಕ್ಷನ್ 233.24 ಕೋಟಿ ರೂಪಾಯಿ ತಲುಪಿದೆ. ಈ ವಾರಾಂತ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಸಿನಿಮಾ 500 ಕೋಟಿ ರೂಪಾಯಿ ಗಳಿಕೆ ಮಾಡೋದು ಅನುಮಾನವೇ.

ಇದನ್ನೂ ಓದಿ: ಎ ಸರ್ಟಿಫಿಕೇಟ್ ಸಿನಿಮಾಗೆ ಮಕ್ಕಳನ್ನು ಕರೆತಂದ ಪೋಷಕರು; ‘ಜನ ನಾಯಗನ್’ ಪ್ರದರ್ಶನ ಬಂದ್

‘ಜನ ನಾಯಗನ್’ ಸಿನಿಮಾ ವಿಜಯ್ ಅವರ ಕೊನೆಯ ಚಿತ್ರವಾಗಲಿದೆ. ಎಚ್​​. ವಿನೋದ್ ಈ ಚಿತ್ರ ನಿರ್ದೇಶಿಸಿದ್ದಾರೆ. ಭಗವಂತ ಕೇಸರಿ ಚಿತ್ರದ ರಿಮೇಕ್ ಇದಾಗಿದೆ. ಪೂಜಾ ಹೆಗ್ಡೆ, ಮಮಿತಾ ಬೈಜು ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ