AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಮೊದಲ ದಿನದ ಗಳಿಕೆ ಎಷ್ಟಾಗಲಿದೆ? ಇಲ್ಲಿದೆ ಲೆಕ್ಕಾಚಾರ

ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ 'ಜನ ನಾಯಗನ್' ಸಿನಿಮಾ ಆನ್‌ಲೈನ್‌ನಲ್ಲಿ ಲೀಕ್ ಆದ ಹೊರತಾಗಿಯೂ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಜುಲೈ 23ರಂದು ವಿಶ್ವಾದ್ಯಂತ ಭರ್ಜರಿಯಾಗಿ ರಿಲೀಸ್ ಆಗಲಿರುವ ಈ ಚಿತ್ರ ಈಗಾಗಲೇ ₹40 ಕೋಟಿ ಮುಂಗಡ ಬುಕಿಂಗ್ ಕಂಡಿದೆ. ಮೊದಲ ದಿನವೇ ₹100 ಕೋಟಿಗೂ ಅಧಿಕ ಜಾಗತಿಕ ಗಳಿಕೆ ಕಾಣುವ ನಿರೀಕ್ಷೆಯಿದ್ದು, ದಾಖಲೆಯ ಓಪನಿಂಗ್ ಪಡೆಯುವ ಎಲ್ಲಾ ಲಕ್ಷಣಗಳಿವೆ.

‘ಜನ ನಾಯಗನ್’ ಮೊದಲ ದಿನದ ಗಳಿಕೆ ಎಷ್ಟಾಗಲಿದೆ? ಇಲ್ಲಿದೆ ಲೆಕ್ಕಾಚಾರ
ವಿಜಯ್
ರಾಜೇಶ್ ದುಗ್ಗುಮನೆ
|

Updated on: Jul 22, 2026 | 7:30 AM

Share

ಮುಖ್ಯಾಂಶಗಳು

  • ಬಾಕ್ಸ್ ಆಫೀಸ್‌ನಲ್ಲಿ ವಿಜಯ್ ಅಬ್ಬರ
  • ಮೊದಲ ದಿನವೇ 100 ಕೋಟಿ ಕ್ಲಬ್
  • ಮುಂಗಡ ಬುಕಿಂಗ್‌ನಲ್ಲಿ ಧೂಳೆಬ್ಬಿಸಿದ ದಳಪತಿ ಸಿನಿಮಾ

ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ (Jana Nayagan Movie) ಜುಲೈ 23ರಂದು ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ ಈ ಸಿನಿಮಾ ಆನ್‌ಲೈನ್‌ನಲ್ಲಿ ಲೀಕ್ ಆಗುವ ಮೂಲಕ ಚಿತ್ರತಂಡಕ್ಕೆ ದೊಡ್ಡ ಆಘಾತ ನೀಡಿತ್ತು. ಆದರೆ, ಈ ಲೀಕ್ ವಿವಾದದ ಹೊರತಾಗಿಯೂ ಚಿತ್ರದ ಮೇಲಿರುವ ಕ್ರೇಜ್ ಕಮ್ಮಿಯಾಗಿಲ್ಲ. ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಓಪನಿಂಗ್ ಪಡೆಯುವುದು ಗ್ಯಾರಂಟಿ ಎಂದು ಟ್ರೇಡ್ ಅನಾಲಿಟಿಸ್ಟ್​ ಮುನ್ಸೂಚನೆ ನೀಡಿದ್ದಾರೆ.

ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ?

ಸಿನಿಮಾ ರಿಲೀಸ್ ಆದ ಬಳಿಕ ಲೀಕ್ ಆದರೂ ಅದು ಚಿತ್ರದ ಗಳಿಕೆಗೆ ತೊಂದರೆ ಆಗುತ್ತದೆ. ಹೀಗಿರುವಾಗ ರಿಲೀಸ್ ಆಗದೇ ಇರುವ ಸಿನಿಮಾ ಸೋರಿಕೆ ಆದರೆ ಕೇಳಬೇಕೇ? ಆದರೆ, ‘ಜನ ನಾಯಗನ್’ ಚಿತ್ರಕ್ಕೆ ಇದು ಸಮಸ್ಯೆ ಆಗುತ್ತಿಲ್ಲ ಎನ್ನಲಾಗಿದೆ. ಚಿತ್ರರಂಗದ ಪ್ರಮುಖ ಟ್ರ್ಯಾಕಿಂಗ್ ಸಂಸ್ಥೆಯಾದ ‘ಸ್ಯಾಕ್ನಿಲ್ಕ್’ ಪ್ರಕಾರ, ‘ಜನ ನಾಯಗನ್’ ಸಿನಿಮಾ ಮೊದಲ ದಿನವೇ ಭಾರತದಲ್ಲಿ ಬರೋಬ್ಬರಿ 50 ರಿಂದ 60 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ಗ್ಲೋಬಲ್ ಬಾಕ್ಸ್ ಆಫೀಸ್ ಅಬ್ಬರ

ಇನ್ನು ವಿದೇಶಗಳಲ್ಲೂ ವಿಜಯ್ ಕ್ರೇಜ್ ಜೋರಾಗಿದೆ. ಅಮೆರಿಕ, ಯುಕೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ಪ್ರೀ-ಸೇಲ್ಸ್ ಭರ್ಜರಿಯಾಗಿ ನಡೆಯುತ್ತಿದೆ. ಹೀಗಾಗಿ ಮೊದಲ ದಿನವೇ ವಿಶ್ವಾದ್ಯಂತ ಈ ಸಿನಿಮಾ 100 ಕೋಟಿ ರೈಪಾಯಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.

ಮುಂಗಡ ಟಿಕೆಟ್ ಬುಕಿಂಗ್

ಸಿನಿಮಾ ರಿಲೀಸ್ ಆಗುವ ಮುನ್ನವೇ ಗ್ಲೋಬಲ್ ಅಡ್ವಾನ್ಸ್ ಬುಕಿಂಗ್ ಮೂಲಕ 40 ಕೋಟಿ ರೂಪಾಯಿಗೂ ಅಧಿಕ ಹಣ ಬಾಚಿಕೊಂಡಿದೆ. ತಮಿಳುನಾಡು, ಕರ್ನಾಟಕ ಹಾಗೂ ಓವರ್‌ಸೀಸ್ ಮಾರುಕಟ್ಟೆಯಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ.

ಇದನ್ನೂ ಓದಿ: ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಚಿತ್ರದಲ್ಲಿ ಬದಲಾವಣೆ: ಟೈಟಲ್ ಕಾರ್ಡ್‌ನಲ್ಲಿ ವಿಜಯ್ ಹೆಸರು ಹೇಗಿದೆ?

ಭರ್ಜರಿ ಪ್ರದರ್ಶನ

ವಿಜಯ್ ಅವರ ಕೊನೆಯ ಸಿನಿಮಾ ಇದಾಗಿರುವುದರಿಂದ ಚಿತ್ರಕ್ಕಿರುವ ಡಿಮ್ಯಾಂಡ್ ಹೆಚ್ಚಿದೆ. ಇದನ್ನು ಮನಗಂಡು ನಿರ್ಮಾಪಕರು ಪ್ರಪಂಚದಾದ್ಯಂತ ಬರೋಬ್ಬರಿ 7,000 ದಿಂದ 8,000 ಸ್ಕ್ರೀನ್‌ಗಳಲ್ಲಿ ಬಿಡುಗಡೆ ಮಾಡಲು ಪ್ಲಾನ್ ಮಾಡಿದ್ದಾರೆ.

ಪಾತ್ರವರ್ಗದ ವಿವರ

ವಿಜಯ್‌ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದರೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಪ್ರಿಯಾಮಣಿ, ನರೇನ್ ಮತ್ತು ನಾಸರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ರಾಕ್‌ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ. ಲೀಕ್ ಕಾಟದ ನಡುವೆಯೂ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆಯೇ ಎಂದು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us