‘ಜನ ನಾಯಗನ್’ ವಿಳಂಬಂದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ?

‘ಜನ ನಾಯಗನ್’ ಚಿತ್ರದ ಸೆನ್ಸಾರ್ ವಿಳಂಬ ಮತ್ತು ನ್ಯಾಯಾಲಯದ ಪ್ರಕರಣದಿಂದ ಅದರ ಬಿಡುಗಡೆ ಮುಂದೂಡಲ್ಪಟ್ಟಿದೆ. ಇದು ಕೆವಿಎನ್ ನಿರ್ಮಾಣದ 'ಟಾಕ್ಸಿಕ್' ಮತ್ತು 'ಕೆಡಿ' ಚಿತ್ರಗಳ ಪ್ರಚಾರ ಹಾಗೂ ಬಿಡುಗಡೆ ವೇಳಾಪಟ್ಟಿಯ ಮೇಲೆ ನೇರ ಪರಿಣಾಮ ಬೀರಿದೆ. ವಿಜಯ್ ಅವರ ರಾಜಕೀಯ ಪ್ರವೇಶದಿಂದ ರಾಜಕೀಯ ಶಕ್ತಿಗಳು ಚಿತ್ರವನ್ನು ತಡೆಯುತ್ತಿವೆಯೇ ಎಂಬ ಪ್ರಶ್ನೆ ಎದ್ದಿದೆ.

‘ಜನ ನಾಯಗನ್’ ವಿಳಂಬಂದಿಂದ ‘ಟಾಕ್ಸಿಕ್’,‘ಕೆಡಿ’ಗೆ ದೊಡ್ಡ ಹೊಡೆತ?
ಕೆವಿಎನ್ ಸಿನಿಮಾಗಳು

Updated on: Jan 28, 2026 | 9:05 AM

‘ಜನ ನಾಯಗನ್’ ಚಿತ್ರಕ್ಕೆ (Jana Nayagan) ಕೋರ್ಟ್​ನಲ್ಲಿ ಸಾಕಷ್ಟು ಹಿನ್ನಡೆ ಆಗುತ್ತಲೇ ಇದೆ. ಜನವರಿ 9ರಂದೇ ಚಿತ್ರ ರಿಲೀಸ್ ಆಗಬೇಕಿತ್ತು. ಆದರೆ, ಸೆನ್ಸಾರ್ ಪ್ರಮಾಣಪತ್ರ ವಿಷಯದಲ್ಲಿ ಆದ ತೊಂದರೆಯಿಂದ ಸಿನಿಮಾ ರಿಲೀಸ್ ವಿಳಂಬ ಆಗುತ್ತಿದೆ. ಈ ಪ್ರಕರಣ ಇನ್ನೂ ಕೋರ್ಟ್​​ನಲ್ಲೇ ಇದೆ. ‘ಜನ ನಾಯಗನ್’ ಚಿತ್ರದ ವಿಳಂಬವು ‘ಟಾಕ್ಸಿಕ್’ ಹಾಗೂ ‘ಕೆಡಿ’ ಸಿನಿಮಾ ಪ್ರಚಾರದ ಮೇಲೆ ನೇರ ಪರಿಣಾಮ ಬೀರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ‘ಕೆಡಿ’ ರಿಲೀಸ್​​ಗೂ ತೊಂದರೆ ತಂದೊಡ್ಡಬಹುದು ಎಂಬ ಆತಂಕ ಮೂಡಿದೆ.

ವಿಜಯ್ ಅವರ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಿ ‘ಜನ ನಾಯಗನ್’ ರಿಲೀಸ್ ಆಗುತ್ತಿದೆ. ಇದು ಬಾಲಯ್ಯ ಅವರ ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರಿಮೇಕ್. ಇದರಲ್ಲಿ ರಾಜಕೀಯ ವಿಷಯ ಕೂಡ ಇದೆ. ವಿಜಯ್ ಕೂಡ ರಾಜಕೀಯಕ್ಕೆ ಬರುತ್ತಿರುವುದರಿಂದ ರಾಜಕೀಯ ಶಕ್ತಿಗಳು ಸಿನಿಮಾ ರಿಲೀಸ್ ಆಗದಂತೆ ತಡೆಯುತ್ತಿವೆಯೇ ಎಂಬ ಪ್ರಶ್ನೆ ಮೂಡಿದೆ. ಈ ಮಧ್ಯೆ ‘ಟಾಕ್ಸಿಕ್’ ಚಿತ್ರಕ್ಕೂ ತೊಂದರೆ ಎದುರಾಗುವ ಸೂಚನೆ ಸಿಕ್ಕಿದೆ.

‘ಜನ ನಾಯಗನ್’ ಸಿನಿಮಾ ನಿರ್ಮಾಣ ಮಾಡಿದ್ದು ಕನ್ನಡದ ಕೆವಿಎನ್​ ಸಂಸ್ಥೆ. ಯಶ್ ನಟನೆಯ ‘ಟಾಕ್ಸಿಕ್’ ಹಾಗೂ ಧ್ರುವ ಸರ್ಜಾ ವರ ‘ಕೆಡಿ’ ಚಿತ್ರವನ್ನು ಇದೇ ಸಂಸ್ಥೆ ನಿರ್ಮಾಣ ಮಾಡಿದೆ. ಜನವರಿ 9ಕ್ಕೆ ‘ಜನ ನಾಯಗನ್’, ‘ಮಾರ್ಚ್ 19’ಕ್ಕೆ ‘ಟಾಕ್ಸಿಕ್’ ಹಾಗೂ ಏಪ್ರಿಲ್ ಅಂತ್ಯಕ್ಕೆ ‘ಕೆಡಿ’ ರಿಲೀಸ್ ಮಾಡುವ ಪ್ಲ್ಯಾನ್ ಸಂಸ್ಥೆಯದ್ದಾಗಿತ್ತು.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ: ನೂರಾರು ಕೋಟಿ ನಷ್ಟದ ಭೀತಿ

ಒಂದು ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಮತ್ತೊಂದು ಚಿತ್ರದ ಪ್ರಚಾರ ಕಾರ್ಯ ಆರಂಭಿಸುವ ಪ್ಲ್ಯಾನ್​ ಅಲ್ಲಿ ಕೆವಿಎನ್ ಇತ್ತು. ಆದರೆ, ‘ಜನ ನಾಯಗನ್’ ಸಿನಿಮಾ ರಿಲೀಸ್ ಡೋಲಾಯಮಾನ ಸ್ಥಿತಿಯಲ್ಲಿ ಇದೆ. ಹೀಗಾಗಿ, ‘ಟಾಕ್ಸಿಕ್’ ಚಿತ್ರದ ಪ್ರಚಾರಕ್ಕೆ ಸಾಕಷ್ಟು ಅಡಚಣೆ ಉಂಟಾಗಬಹುದು ಎಂದು ಹೇಳಲಾಗುತ್ತಾ ಇದೆ. ಆ ಬಳಿಕ ‘ಕೆಡಿ’ ಸಿನಿಮಾದ ಮೇಲೂ ಇದು ಪರಿಣಾಮ ಬೀರಲಿದೆ. ‘ಜನ ನಾಯಗನ್’ ಸಿನಿಮಾ ಯಾವಾಗ ರಿಲೀಸ್ ಆಗುತ್ತದೆ ಎಂಬುದು ಸದ್ಯದ ಪ್ರಶ್ನೆ. ಅದರ ಆಧಾರದ ಮೇಲೆ ಮುಂದಿನ ಪ್ಲ್ಯಾನ್​​ಗಳು ನಿರ್ಧಾರವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.