AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಕ್ಕಟ್ಟಿಗೆ ಸಿಲುಕಿದ ‘ಜನ ನಾಯಗನ್’ ರಿಲೀಸ್: ನ್ಯಾಯಾಲಯ ಹೇಳಿದ್ದೇನು?

Jana Nayagan movie release: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಜನವರಿ 09 ಕ್ಕೆ ಬಿಡುಗಡೆ ಆಗಲಿದೆ. ಆದರೆ ಸಿನಿಮಾಕ್ಕೆ ಸಿಬಿಎಫ್​​ಸಿ ಸಮಸ್ಯೆ ಎದುರಾಗಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಮದ್ರಾಸ್ ಹೈಕೋರ್ಟ್​​ನಲ್ಲಿ ವಿಚಾರಣೆ ನಡೆದಿದೆ. ಆದರೆ ಸಿನಿಮಾ ಬಿಡುಗಡೆ ಇನ್ನೂ ಅಡಕತ್ತರಿಯಲ್ಲೇ ಇದೆ.

ಇಕ್ಕಟ್ಟಿಗೆ ಸಿಲುಕಿದ ‘ಜನ ನಾಯಗನ್’ ರಿಲೀಸ್: ನ್ಯಾಯಾಲಯ ಹೇಳಿದ್ದೇನು?
Jana Nayagan
ಮಂಜುನಾಥ ಸಿ.
|

Updated on: Jan 07, 2026 | 6:46 PM

Share

ದಳಪತಿ ವಿಜಯ್ (Thalapathy Vijay) ನಟನೆಯ ಕೊನೆಯ ಸಿನಿಮಾ ಎನ್ನಲಾಗುತ್ತಿರುವ ‘ಜನ ನಾಯಗನ್’ ಜನವರಿ 9 ರಂದು ಬಿಡುಗಡೆ ಆಗಲಿತ್ತು, ಆದರೆ ಕೊನೆಯ ಕ್ಷಣದಲ್ಲಿ ಸಿನಿಮಾಕ್ಕೆ ಸಮಸ್ಯೆ ಎದುರಾಗಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ನೀಡಲಾಗಿಲ್ಲ. ಬದಲಿಗೆ ಸಿನಿಮಾವನ್ನು ಮರುಪರಿಶೀಲನೆಗೆ ಸಮಿತಿಯು ಸೂಚಿಸಿತ್ತು. ಸಿಬಿಎಫ್​​ಸಿ ವಿರುದ್ಧ ಸಿನಿಮಾ ನಿರ್ಮಾಪಕರು ಮದ್ರಾಸ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಇಂದು ನಡೆದಿದೆ. ಆದರೆ ಆದೇಶವನ್ನು ಸಿನಿಮಾದ ಬಿಡುಗಡೆ ದಿನಾಂಕದಂದೆ ಅಂದರೆ ಜನವರಿ 09ರಂದೇ ಪ್ರಕಟಿಸುವುದಾಗಿ ಹೈಕೋರ್ಟ್ ಹೇಳಿರುವುದರಿಂದ ಸಿನಿಮಾ ಬಿಡುಗಡೆಗೆ ಸಮಸ್ಯೆ ಎದುರಾಗಿದೆ.

‘ಜನ ನಾಯಗನ್’ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವಂತೆ ಸಿಬಿಎಫ್​ಸಿಗೆ ಸೂಚಿಸುವಂತೆ ನಿರ್ಮಾಪಕರು ಅರ್ಜಿ ಸಲ್ಲಿಸಿದ್ದರು. ಆದರೆ ಸಿನಿಮಾದ ವಿರುದ್ಧ ಸಿಬಿಎಫ್​​ಸಿ ಸಮಿತಿಯ ಒಬ್ಬ ಸದಸ್ಯರು ಆಕ್ಷೇಪಣೆ ಸಲ್ಲಿಸುರುವುದು ಮತ್ತು ಸಿನಿಮಾದ ವಿರುದ್ಧ ಇಮೇಲ್​​ ಮೂಲಕ ದೂರು ಸಲ್ಲಿಕೆ ಆಗಿರುವ ಕಾರಣ ಸಮಿತಿಯ ಮುಖ್ಯಸ್ಥರು ಏಕ ನಿರ್ಣಯದಿಂದ ಸಿನಿಮಾವನ್ನು ಮರುಪರಿಶೀಲನೆಗೆ ಸೂಚಿಸಿದ್ದರು.

ಇಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಸಿಬಿಎಫ್​​ಸಿಯನ್ನು ತರಾಟೆಗೆ ತೆಗೆದುಕೊಂಡಿತು. ಸಮಿತಿ ಎತ್ತಿರುವ ಆಕ್ಷೇಪಣೆಗಳನ್ನು ನಿರ್ಮಾಪಕರು, ಚಿತ್ರತಂಡ ಈಗಾಗಲೇ ಒಪ್ಪಿಕೊಂಡು ಬದಲಾವಣೆಗೆ ತಯಾರಿರುವಾಗಲೂ ಮತ್ತೊಮ್ಮೆ ಏಕೆ ಮರುಪರಿಶೀಲನೆಗೆ ಕಳಿಸಲಾಗಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಅಲ್ಲದೆ, ದೂರಿನಲ್ಲಿ ಎತ್ತಲಾಗಿರುವ ಎಲ್ಲ ವಿಷಯಗಳನ್ನು ಈಗಾಗಲೇ ಒಪ್ಪಿಕೊಂಡ ಬಳಿಕವೂ ಮರುಪರಿಶೀಲನೆಯ ಅಗತ್ಯ ಏನಿದೆ ಎಂದು ಪ್ರಶ್ನೆ ಮಾಡಿದೆ.

ಇದನ್ನೂ ಓದಿ:‘ಜನ ನಾಯಗನ್’ ಬಳಿಕ ನ್ಯಾಯಾಲಯದ ಮೆಟ್ಟಿಲೇರಿದ ‘ರಾಜಾ ಸಾಬ್’ ಮತ್ತು ‘ಶಂಕರ ವರ ಪ್ರಸಾದ್’

ಎರಡೂ ಕಡೆಯ ವಾದಗಳನ್ನು ಆಲಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಹೈಕೋರ್ಟ್​​ನ ಆದೇಶವು ಜನವರಿ 9ರಂದು ಹೊರಬೀಳಲಿದೆ. ಆದರೆ ಅದೇ ದಿನ ಸಿನಿಮಾ ಬಿಡುಡಗೆ ದಿನಾಂಕವೂ ಆಗಿದೆ. ಹಾಗಾಗಿ ಸಿನಿಮಾದ ಬಿಡುಗಡೆ ಮುಂದೂಡಲ್ಪಡುವ ಸಾಧ್ಯತೆ ಇದೆ. ಸಿನಿಮಾದ ಮುಂಗಡ ಬುಕಿಂಗ್ ಈಗಾಗಲೇ ಓಪನ್ ಆಗಿದ್ದು, ಬೆಂಗಳೂರು, ಕೊಚ್ಚಿಯಲ್ಲಿ ಲಕ್ಷಾಂತರ ಪ್ರೇಕ್ಷಕರು ಮುಂಗಡವಾಗಿ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಆದರೆ ಈಗ ಸಿನಿಮಾದ ಬಿಡುಗಡೆ ಮುಂದೂಡಲ್ಪಡುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

ಇನ್ನು ‘ಜನ ನಾಯಗನ್’ ಸಿನಿಮಾಕ್ಕೆ ಬ್ರಿಟನ್​​ನಲ್ಲಿ ಸೆನ್ಸಾರ್ ಪ್ರಮಾಣ ಪತ್ರ ದೊರೆತಿದೆ. 15 ವರ್ಷಕ್ಕೂ ಹೆಚ್ಚಿನವರು ಯುಕೆಯಲ್ಲಿ ‘ಜನ ನಾಯಗನ್’ ಸಿನಿಮಾ ವೀಕ್ಷಿಸಬಹುದಾಗಿದ್ದು, ಸಿನಿಮಾ ಜನವರಿ 09ರಂದು ಯುಕೆಯಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ