AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್​​ಡೇಟ್ ಹಂಚಿಕೊಂಡ ನಿರ್ಮಾಪಕ

Jana Nayagan movie: ನಟ ವಿಜಯ್ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿಯಲಾಗಿತ್ತು. ಆದರೆ ಈಗ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿದ್ದಾರೆ. ‘ಜನ ನಾಯಗನ್’ ಸಿನಿಮಾ ಈಗ ಯಾವುದೇ ಅಡೆ-ತಡೆ ಇಲ್ಲದೆ ಬಿಡುಗಡೆ ಆಗಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಅಧಿಕೃತ ಸುದ್ದಿಗಳು ಹೊರಬಿದ್ದಿರಲಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ವೆಂಕಟ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ‘ಜನ ನಾಯಗನ್’ ಸಿನಿಮಾದ ಸೆನ್ಸಾರ್ ಪ್ರಮಾಣ ಪತ್ರ ಮತ್ತು ಸಿನಿಮಾದ ಬಿಡುಗಡೆ ಕುರಿತಾಗಿ ಮಾತನಾಡಿದ್ದಾರೆ. ಸಿನಿಮಾ ಬಿಡುಗಡೆ ಬಗ್ಗೆ ಪ್ರಮುಖ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್​​ಡೇಟ್ ಹಂಚಿಕೊಂಡ ನಿರ್ಮಾಪಕ
Jana Nayagan
ಮಂಜುನಾಥ ಸಿ.
|

Updated on: May 24, 2026 | 2:56 PM

Share

ನಟ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿಯಲಾಗಿತ್ತು. ಆದರೆ ಈಗ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿದ್ದಾರೆ. ‘ಜನ ನಾಯಗನ್’ ಸಿನಿಮಾ ಈಗ ಯಾವುದೇ ಅಡೆ-ತಡೆ ಇಲ್ಲದೆ ಬಿಡುಗಡೆ ಆಗಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಅಧಿಕೃತ ಸುದ್ದಿಗಳು ಹೊರಬಿದ್ದಿರಲಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ವೆಂಕಟ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ‘ಜನ ನಾಯಗನ್’ ಸಿನಿಮಾದ ಸೆನ್ಸಾರ್ ಪ್ರಮಾಣ ಪತ್ರ ಮತ್ತು ಸಿನಿಮಾದ ಬಿಡುಗಡೆ ಕುರಿತಾಗಿ ಮಾತನಾಡಿದ್ದಾರೆ. ಸಿನಿಮಾ ಬಿಡುಗಡೆ ಬಗ್ಗೆ ಪ್ರಮುಖ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ.

ತಿರುಚೆಂದೂರಿನ ಅರುಲ್ಮಿಗು ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಿರ್ಮಾಪಕ ವೆಂಕಟ್ ಅವರು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮಾಧ್ಯಮಗಳೊಟ್ಟಿಗೆ ಮಾತನಾಡಿ ಚಿತ್ರದ ಬಿಡುಗಡೆಯ ಕುರಿತು ಮಾತನಾಡಿದರು. ‘ನಾನು ಇಲ್ಲಿಗೆ ಶಾಂತಿ ಮತ್ತು ದೇವರ ಆಶೀರ್ವಾದ ಪಡೆಯಲು ಬಂದಿದ್ದೇನೆ. ‘ಜನ ನಾಯಗನ್’ ಚಿತ್ರಕ್ಕೆ ಇನ್ನೂ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ, ಆದರೆ ಅದು ಯಾವುದೇ ಕ್ಷಣದಲ್ಲಾದರೂ ಸಿಗಬಹುದು. ಸೆನ್ಸಾರ್ ಪ್ರಮಾಣಪತ್ರ ಕೈ ಸೇರಿದ ತಕ್ಷಣ, ನಾವು ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೇವೆ. ಇದು ಶೀಘ್ರದಲ್ಲೇ ನಡೆಯಲಿದೆ’ ಎಂದು ತಿಳಿಸಿದ್ದಾರೆ. ಇದೇ ವೇಳೆ ವಿಜಯ್ ಅವರು ಮುಖ್ಯಮಂತ್ರಿಯಾಗಿರುವುದಕ್ಕೆ ತಮ್ಮ ಸಂತೋಷವನ್ನು ಹಂಚಿಕೊಂಡ ಅವರು, ಚಿತ್ರದ ಸುತ್ತಲಿನ ವಿವಾದಗಳಿಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಮಾತನಾಡಲು ನಿರಾಕರಿಸಿದರು.

ವಿಜಯ್ ಅವರು ರಾಜಕೀಯಕ್ಕೆ ಪ್ರವೇಶಿಸಿದ ನಂತರ, ಸಿನಿಮಾ ರಂಗದಿಂದ ದೂರ ಸರಿಯುವ ಮುನ್ನ ‘ಜನ ನಾಯಕನ್’ ತಮ್ಮ ಕೊನೆಯ ಚಿತ್ರವಾಗಲಿದೆ ಎಂದು ಘೋಷಿಸಿದ್ದರು. ಆ ಭಾವನಾತ್ಮಕ ಕಾರಣದಿಂದಾಗಿ, ಅಭಿಮಾನಿಗಳು ಈ ಚಿತ್ರಕ್ಕೆ ಸಂಬಂಧಿಸಿದ ಪ್ರತಿಯೊಂದು ಅಪ್‌ಡೇಟ್‌ ಅನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಚಿತ್ರತಂಡವು ಈ ಚಿತ್ರವನ್ನು ಜನವರಿಯಲ್ಲಿ ಬಿಡುಗಡೆ ಮಾಡಲು ಯೋಜಿಸಿತ್ತು ಮತ್ತು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿತ್ತು ಎನ್ನಲಾಗಿದೆ. ಆದರೆ, ಸೆನ್ಸಾರ್ ಮಂಡಳಿಯು ಪ್ರಮಾಣಪತ್ರ ನೀಡದ ಕಾರಣ, ನಿರ್ಮಾಣ ಸಂಸ್ಥೆಯು ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಕಾನೂನು ಹೋರಾಟದ ನಂತರವೂ ಯಾವುದೇ ಸಕಾರಾತ್ಮಕ ಫಲಿತಾಂಶ ಸಿಗಲಿಲ್ಲ. ಈ ವಿಳಂಬದಿಂದಾಗಿ, ಸಿನಿಮಾ ಚಿತ್ರಮಂದಿರಗಳಲ್ಲಿ ಎಂದಿಗೂ ಬಿಡುಗಡೆಯಾಗದೇ ಇರಬಹುದು ಎಂದು ಅನೇಕ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:‘ಟಾಕ್ಸಿಕ್ ಸಿನಿಮಾದ ಮಹಿಳಾ ಪಾತ್ರಗಳು ಸಖತ್ ಬೋಲ್ಡ್’: ಕೌತುಕ ಹೆಚ್ಚಿಸಿದ ಯಶ್

ಕೆಲವು ತಿಂಗಳುಗಳ ಹಿಂದೆ ಇಡೀ ಸಿನಿಮಾ ಆನ್‌ಲೈನ್‌ನಲ್ಲಿ ಸೋರಿಕೆಯಾಯ್ತು. ಚಿತ್ರಕ್ಕೆ ಇನ್ನೂ ಸೆನ್ಸಾರ್ ಮಂಡಳಿಯ ಅನುಮತಿಯೇ ಸಿಗದ ಹಂತದಲ್ಲಿ ಈ ಘಟನೆ ನಡೆದಿದ್ದು, ಅಭಿಮಾನಿಗಳಿಗೆ ಮತ್ತು ಚಿತ್ರರಂಗಕ್ಕೆ ದೊಡ್ಡ ಆಘಾತವನ್ನು ಉಂಟುಮಾಡಿತ್ತು. ಈ ಸೋರಿಕೆಗೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಲಾಗಿದೆ. ಇತ್ತೀಚೆಗೆ ತಾನೆ ಅವರಿಗೆ ಜಾಮೀನನ್ನು ಸಹ ನ್ಯಾಯಾಲಯ ತಿರಸ್ಕರಿಸಿದೆ. ‘ಜನ ನಾಯಗನ್’ ಸಿನಿಮಾನಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದರೆ, ಬಾಬಿ ಡಿಯೋಲ್ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ. ನಟಿ ಮಮಿತಾ ಬೈಜು ಕೂಡ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ವರದಿಗಳ ಪ್ರಕಾರ, ಸಿನಿಮಾದ ಟೈಟಲ್ ಕಾರ್ಡ್‌ನಲ್ಲಿ ‘ಮುಖ್ಯಮಂತ್ರಿ’ ವಿಜಯ್ ಎಂಬ ಪದವನ್ನು ಬಳಸಲು ಚಿತ್ರತಂಡ ಯೋಜಿಸಿದೆಯಂತೆ ಆದರೆ ಅದನ್ನು ವಿರೋಧಿಸಿರುವ ಸಿಎಂ ವಿಜಯ್, ‘ಮುಖ್ಯಮಂತ್ರಿ’ ಬದಲಾಗಿ ಈ ಹಿಂದಿನಂತೆ ‘ದಳಪತಿ’ ಎಂಬ ಬಿರುದನ್ನೇ ಮುಂದುವರಿಸುವಂತೆ ವಿಜಯ್ ಚಿತ್ರತಂಡಕ್ಕೆ ವಿನಂತಿಸಿದ್ದಾರೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್