AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ ‘ಜನ ನಾಯಗನ್’; ಭರ್ಜರಿ ಸೆಲೆಬ್ರೇಷನ್

Jana Nayagan Movie: ದಳಪತಿ ವಿಜಯ್ ನಟನೆಯ ಕೊನೆಯ ಹಾಗೂ ಬಹುನಿರೀಕ್ಷಿತ 'ಜನ ನಾಯಗನ್' ಸಿನಿಮಾ ಇಂದು (ಜುಲೈ 23) ಅದ್ಧೂರಿಯಾಗಿ ರಿಲೀಸ್ ಆಗಿದೆ. ಈಗ ಸಿಎಂ ಆಗಿರುವ ವಿಜಯ್ ಅವರ ಈ ರಾಜಕೀಯ ಚಿತ್ರಕ್ಕೆ ಮುಂಜಾನೆ 6 ಗಂಟೆಯಿಂದಲೇ ಪ್ರದರ್ಶನಗಳು ಆರಂಭವಾಗಿದೆ. ಚಿತ್ರಮಂದಿರಗಳ ಮುಂದೆ ಅಭಿಮಾನಿಗಳ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದ ‘ಜನ ನಾಯಗನ್’; ಭರ್ಜರಿ ಸೆಲೆಬ್ರೇಷನ್
ವಿಜಯ್
ರಾಜೇಶ್ ದುಗ್ಗುಮನೆ
|

Updated on:Jul 23, 2026 | 8:42 AM

Share

ಮುಖ್ಯಾಂಶಗಳು

  • ಮುಂಜಾನೆ 6 ಗಂಟೆಯಿಂದಲೇ ದಳಪತಿ ದರ್ಬಾರ್
  • ಅಡೆತಡೆಗಳನ್ನು ದಾಟಿ 'ಎ' ಸರ್ಟಿಫಿಕೇಟ್‌ನೊಂದಿಗೆ ಎಂಟ್ರಿ
  • ಬಾಕ್ಸ್ ಆಫೀಸ್ ಧೂಳೆಬ್ಬಿಸಲು ಸಜ್ಜಾದ 'ಜನ ನಾಯಗನ್'

ದಳಪತಿ ವಿಜಯ್ (Thalapathy Vijay) ನಟನೆಯ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಇಂದು (ಜುಲೈ 23) ರಿಲೀಸ್ ಆಗಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮುಂಜಾನೆ 6 ಗಂಟೆಗೆ ಶೋ ಆಯೋಜನೆ ಮಾಡಲಾಗಿದೆ. ಈ ಸಿನಿಮಾ ಸ್ವಾಗತ ಜೋರಾಗಿದೆ. ವಿಜಯ್ ಅವರ ಕೊನೆಯ ಸಿನಿಮಾ ಇದು. ಅಲ್ಲದೆ, ಈಗ ವಿಜಯ್ ಸಿಎಂ ಆಗಿರುವುದರಿಂದ ಫ್ಯಾನ್ಸ್ ಚಿತ್ರವನ್ನು ಭರ್ಜರಿ ಸ್ವಾಗತ ಮಾಡಿದ್ದು, ಥಿಯೇಟರ್ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

ಹಲವು ಅಡೆತಡೆಗಳನ್ನು ದಾಟಿ ಬಂದ ಸಿನಿಮಾ

‘ಜನ ನಾಯಗನ್’ ಸಿನಿಮಾ ತೆರೆಗೆ ಬರಲು ಸಾಕಷ್ಟು ಸಮಯ ತಗೆದುಕೊಂಡಿದೆ. ಈ ಚಿತ್ರಕ್ಕೆ ಸಾಕಷ್ಟು ತೊಂದರೆಗಳು ಎದುರಾಗಿದ್ದವು. ಸೆನ್ಸಾರ್ ಮಂಡಳಿ ಸಮಸ್ಯೆ ಮತ್ತು ಆನ್​​ಲೈನ್ ಸೋರಿಕೆಯಂತಹ ಹಲವು ಅಡೆತಡೆಗಳಿಂದ ಸಿನಿಮಾ ತಡವಾಗಿತ್ತು. ಆದರೆ ಈಗ ಎಲ್ಲಾ ಕಷ್ಟಗಳು ಮುಗಿದಿವೆ. ಸಿನಿಮಾ ಎ ಪ್ರಮಾಣಪತ್ರ ಪಡೆದು ಅದ್ಧೂರಿಯಾಗಿ ರಿಲೀಸ್ ಆಗಿದೆ.

ಚಿತ್ರಮಂದಿರಗಳ ಬಳಿ ಹಬ್ಬದ ವಾತಾವರಣ

ಬೆಂಗಳೂರು, ಚೆನ್ನೈ, ಹೈದರಾಬಾದ್ ಮೊದಲಾದ ಕಡೆಯಲ್ಲಿ ಈಗಲೇ ಹಬ್ಬದ ಸಂಭ್ರಮ ಶುರುವಾಗಿದೆ. ವಿಜಯ್ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಪ್ರಮುಖ ಸಿಂಗಲ್ ಸ್ಕ್ರೀನ್ ಥಿಯೇಟರ್‌ಗಳ ಮುಂದೆ ವಿಜಯ್ ಅವರ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಲಾಗಿದೆ. ಬ್ಯಾನರ್‌ಗಳು ಮತ್ತು ತಳಿರು ತೋರಣಗಳಿಂದ ಚಿತ್ರಮಂದಿರಗಳನ್ನು ಅಲಂಕರಿಸಲಾಗಿದೆ.

ಬಾಕ್ಸ್ ಆಫೀಸ್ ದಾಖಲೆ ಬರೆಯುತ್ತಾ ‘ಜನ ನಾಯಗನ್’?

ಸಿನಿಮಾದ ಅಡ್ವಾನ್ಸ್ ಬುಕಿಂಗ್ ತುಂಬಾ ಚೆನ್ನಾಗಿ ನಡೆದಿದೆ. ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಭರ್ಜರಿ ಓಪನಿಂಗ್ ಪಡೆಯುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಚಿತ್ರಕ್ಕೆ ಒಳ್ಳೆಯ ವಿಮರ್ಶೆ ಸಿಕ್ಕರೆ ಮೊದಲ ದಿನವೇ ದಾಖಲೆ ಕಲೆಕ್ಷನ್ ಮಾಡುವುದು ಗ್ಯಾರಂಟಿ. ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಧೂಳೆಬ್ಬಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಜನ ನಾಯಗನ್’ ಪ್ರಚಾರ ಮಾಡದ ಸಿಎಂ ವಿಜಯ್; ಆದರೂ ಹೇಗಿದೆ ಅಭಿಮಾನಿಗಳ ಕ್ರೇಜ್?

ಎಚ್. ವಿನೋದ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಮಿತಾ ಬೈಜು ಮತ್ತು ಪೂಜಾ ಹೆಗ್ಡೆ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಪ್ರಶ್ನೆ: ಜನ ನಾಯಗನ್ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ?  ಉತ್ತರ: ಜುಲೈ 23

ಪ್ರಶ್ನೆ: ಇದು ವಿಜಯ್ ಕೊನೆ ಚಿತ್ರವೇ? ಉತ್ತರ: ಹೌದು

ಪ್ರಶ್ನೆ: ಚಿತ್ರಕ್ಕೆ ಯಾವ ಪ್ರಮಾಣ ಪತ್ರ ನೀಡಲಾಗಿದೆ? ಉತ್ತರ: ಎ ಪ್ರಮಾಣಪತ್ರ

Published On - 7:36 am, Thu, 23 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ