AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ vs ಸಿಬಿಎಫ್​​ಸಿ: ವಿಜಯ್​​ಗೆ ಬೆಂಬಲಿಸಿದ ಕಾಂಗ್ರೆಸ್: ಡಿಎಂಕೆ?

Jana Nayagan vs CBFC: ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದಲ್ಲಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿರುವುದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ ಎನ್ನಲಾಗುತ್ತಿದೆ. ಇದೀಗ ಕಾಂಗ್ರೆಸ್ ಪಕ್ಷವು ಈ ವಿಷಯದಲ್ಲಿ ವಿಜಯ್​​ಗೆ ಬೆಂಬಲ ಘೋಷಣೆ ಮಾಡಿದೆ.

‘ಜನ ನಾಯಗನ್’ vs ಸಿಬಿಎಫ್​​ಸಿ: ವಿಜಯ್​​ಗೆ ಬೆಂಬಲಿಸಿದ ಕಾಂಗ್ರೆಸ್: ಡಿಎಂಕೆ?
Jana Nayagan
ಮಂಜುನಾಥ ಸಿ.
|

Updated on:Jan 08, 2026 | 7:21 PM

Share

ರಾಜಕೀಯಕ್ಕೆ ಪ್ರವೇಶಿಸಿರುವ ದಳಪತಿ ವಿಜಯ್ (Thalapathy Vijay), ಸಿನಿಮಾಗಳಿಂದ ದೂರಾಗುವುದಾಗಿ ಹೇಳಿದ್ದು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದಿದ್ದರು. ಸಿನಿಮಾ ನಾಳೆ (ಜನವರಿ 09) ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿಲ್ಲ. ಇದೀಗ ಪ್ರಕರಣ ನ್ಯಾಯಾಲಯದಲ್ಲಿದೆ. ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿರುವುದು ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತ ನಡೆ ಎನ್ನಲಾಗುತ್ತಿದೆ. ಇದೀಗ ಕಾಂಗ್ರೆಸ್ ಪಕ್ಷವು ಈ ವಿಷಯದಲ್ಲಿ ವಿಜಯ್​​ಗೆ ಬೆಂಬಲ ಘೋಷಣೆ ಮಾಡಿದೆ.

‘ಜನ ನಾಯಗನ್’ ಸಿನಿಮಾಕ್ಕೆ ಪ್ರಮಾಣ ಪತ್ರ ನಿರಾಕರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಕಾಂಗ್ರೆಸ್ ಮುಖಂಡ ಪ್ರವೀಣ್ ಚಕ್ರವರ್ತಿ, ಸಂಸದೆ ಎಸ್ ಜೋತಿಮಣಿ ಅವರುಗಳು ‘ವಿಜಯ್ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲು ವಿಳಂಬ ಮಾಡುತ್ತಿರುವುದು ಕೆಟ್ಟ ರಾಜಕೀಯ ನಡೆ’ ಎಂದು ಟೀಕಿಸಿದ್ದಾರೆ.

ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಪ್ರವೀಣ್ ಚಕ್ರವರ್ತಿ, ರಾಹುಲ್ ಗಾಂಧಿ ಒಂಬತ್ತು ವರ್ಷಗಳ ಹಿಂದೆ ತಮಿಳು ಸಿನಿಮಾ ಬಗ್ಗೆ ಮೋದಿ ಅವರಿಗೆ ಮಾಡಿದ್ದ ಟ್ವೀಟ್​ ಅನ್ನು ನೆನಪಿಸಿದ್ದು, ‘ಆಗಲೇ ರಾಹುಲ್ ಗಾಂಧಿ ಅವರು ಮೋದಿ ಅವರಿಗೆ ಹೇಳಿದ್ದರು, ತಮಿಳುನಾಡು ಸಂಸ್ಕೃತಿ ಮತ್ತು ತಮಿಳು ಸಿನಿಮಾಗಳನ್ನು ತುಳಿಯುವ ಪ್ರಯತ್ನ ಮಾಡಬೇಡಿ ಎಂದು. ಆದರೆ ‘ಜನ ನಾಯಗನ್’ ಸಿನಿಮಾಕ್ಕೆ ಪ್ರಮಾಣಪತ್ರ ನಿರಾಕರಿಸುವ ಮೂಲಕ ಮತ್ತೊಮ್ಮೆ ಮೋದಿ, ತಮಿಳು ಜನರನ್ನು ಅವಮಾನಿಸಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ:‘ಜನ ನಾಯಗನ್’ ಬಳಿಕ ಈಗ ‘ಪರಾಶಕ್ತಿ’ಗೂ ಸಿಬಿಎಫ್​​ಸಿ ಸಂಕಟ

ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಸಹ ಇದೇ ವಿಷಯವಾಗಿ ಟ್ವೀಟ್ ಮಾಡಿದ್ದು, ‘ಇದು ತಮಿಳು ಚಿತ್ರರಂಗದ ಮೇಲೆ ಮಾಡುತ್ತಿರುವ ದಾಳಿ. ಯಾರ್ಯಾರು ವಾಕ್ ಸ್ವಾತಂತ್ರ್ಯದ ಮೇಲೆ ನಂಬಿಕೆ ಇರಿಸಿದ್ದಾರೆಯೋ ಅವರೆಲ್ಲರೂ ಸಿಬಿಎಫ್​​ಸಿಯ ಈ ನಡೆಯನ್ನು ಖಂಡಿಸಬೇಕು. ನೂರಾರು ಜನರ ಶ್ರಮದಿಂದ, ಕೋಟ್ಯಂತರ ರೂಪಾಯಿಗಳ ಹಣ ಖರ್ಚು ಮಾಡಿ ಸಿನಿಮಾ ಮಾಡಲಅಗಿರುತ್ತದೆ. ಆದರೆ ಹೀಗೆ ಸಿನಿಮಾಕ್ಕೆ ಸಮಸ್ಯೆ ನೀಡುವುದು ಕ್ರಿಯಾತ್ಮಕ ಸ್ವಾತಂತ್ರ್ಯದ ಹರಣ ಮಾಡಿದಂತೆ. ಅದರಲ್ಲೂ ರಾಜಕೀಯ ಕಾರಣಕ್ಕೆ ಸಿನಿಮಾಕ್ಕೆ ಕಿರುಕುಳ ನೀಡುವುದು ಮತ್ತೂ ಅಪಾಯಕಾರಿ’ ಎಂದಿದ್ದಾರೆ.

ಅಂದಹಾಗೆ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಪಕ್ಷಗಳಾಗಿವೆ. ಆದರೆ ವಿಜಯ್, ರಾಜಕೀಯ ಪ್ರವೇಶಿಸಿದಾಗಿನಿಂದಲೂ ಆಡಳಿತಾರೂಢ ಡಿಎಂಕೆ ಪಕ್ಷದ ವಿರುದ್ಧವೇ ಹೋರಾಡುತ್ತಿದ್ದಾರೆ. ಇದೀಗ ಡಿಎಂಕೆಯ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್, ಡಿಎಂಕೆಯ ವಿರೋಧಿ ನಾಯಕ ಎನಿಸಿಕೊಂಡಿರುವ ವಿಜಯ್​​ಗೆ ಬೆಂಬಲ ಸೂಚಿಸಿರುವುದು ರಾಜಕೀಯ ವಿಶ್ಲೇಷಕರ ಕುತೂಹಲಕ್ಕೆ ಕಾರಣವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Thu, 8 January 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ