Sign In

By signing in or creating an account, you agree with Associated Broadcasting Company's Terms & Conditions and Privacy Policy.

NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​

Janhvi Kapoor | Jr NTR: ಜಾನ್ವಿ ಕಪೂರ್​ ಅವರು ‘ಎನ್​ಟಿಆರ್​ 30’ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಹಂಚಿಕೊಂಡಿದ್ದಾರೆ. ಅದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​
ಜಾನ್ವಿ ಕಪೂರ್​, ಜೂನಿಯರ್​ ಎನ್​ಟಿಆರ್​
Follow us
ಮದನ್​ ಕುಮಾರ್​
|

Updated on: Mar 06, 2023 | 12:52 PM

ನಟಿ ಜಾನ್ವಿ ಕಪೂರ್​ (Janhvi Kapoor) ಅವರು ಬಾಲಿವುಡ್​ನಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ. ಮೊದಲ ಸಿನಿಮಾ ‘ಧಡಕ್​’ ಹೊರತುಪಡಿಸಿ ಬೇರೆ ಯಾವುದೇ ಚಿತ್ರವೂ ಗೆದ್ದಿಲ್ಲ. ಆದರೂ ಕೂಡ ಅವರು ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವಕಾಶಗಳು ಸಿಗುತ್ತಿವೆ. ಅವಕಾಶ ಅಂದ್ರೆ ಸಣ್ಣ-ಪುಟ್ಟ ಚಾನ್ಸ್​ ಅಲ್ಲ. ಜೂನಿಯರ್​ ಎನ್​ಟಿಆರ್ (Jr NTR)​ ಜೊತೆ ನಟಿಸುವ ಅವಕಾಶ ಜಾನ್ವಿ ಕಪೂರ್​ಗೆ ಸಿಕ್ಕಿದೆ. ಈ ಬಗ್ಗೆ ಸ್ವತಃ ಅವರ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಜೂನಿಯರ್​ ಎನ್​ಟಿಆರ್​ ನಟನೆಯ 30ನೇ (NTR 30) ಸಿನಿಮಾಗೆ ಜಾನ್ವಿ ಕಪೂರ್ ಅವರು ಹೀರೋಯಿನ್​ ಆಗಿ ಆಯ್ಕೆ ಆಗಿದ್ದಾರೆ. ಅವರ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಆ ಮೂಲಕ ಅಭಿಮಾನಿಗಳಿಗೆ ಜಾನ್ವಿ ಕಪುರ್​ ಖುಷಿ ಸುದ್ದಿ ನೀಡಿದ್ದಾರೆ.

ಜೂನಿಯರ್​ ಎನ್​ಟಿಆರ್​ ಅಭಿನಯದ ಈ ಹೊಸ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘ಎನ್​ಟಿಆರ್​ 30’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾಗೆ ಹೀರೋಯಿನ್​ ಯಾರು ಎಂಬ ಬಗ್ಗೆ ಹಲವು ತಿಂಗಳಿಂದ ಸುದ್ದಿಗಳು ಹರಿದಾಡುತ್ತಿದ್ದವು. ಜಾನ್ವಿ ಕಪೂರ್​ ಅವರು ಆಯ್ಕೆ ಆಗಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಯಾರೂ ಕೂಡ ಅಧಿಕೃತವಾಗಿ ಹೇಳಿಕೆ ನೀಡಿರಲಿಲ್ಲ. ಈಗ ಆ ಸುದ್ದಿ ನಿಜವಾಗಿದೆ.

ಇದನ್ನೂ ಓದಿ
Image
44 ಕೋಟಿ ರೂಪಾಯಿಗೆ ಮನೆ ಮಾರಿಕೊಂಡ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​; ಖರೀದಿಸಿದ ಹೀರೋ ಯಾರು?
Image
ಡಿಗ್ಲಾಮ್ ಲುಕ್​ನಲ್ಲಿ ನಟಿ ಜಾನ್ವಿ ಕಪೂರ್​; ಆದರೆ, ಈ ನಟಿ ನೀವಂದುಕೊಂಡ ಹಾಗಲ್ಲ
Image
Janhvi Kapoor: ಜಾನ್ವಿ ಕಪೂರ್​ ಫೋಟೋ ವೈರಲ್​; ಶ್ರೀದೇವಿ ಪುತ್ರಿಯ ಅಂದ-ಚಂದ ಕಂಡು ವಾವ್​ ಎಂದ ಅಭಿಮಾನಿಗಳು
Image
Janhvi Kapoor: ಪ್ರಕೃತಿಯ ಮಡಿಲಿನಲ್ಲಿ ಜಾನ್ವಿ ಕಪೂರ್ ವಿಹಾರ; ಫೋಟೋಗಳಿಗೆ ಮಸ್ತ್​ ಪೋಸ್​​

ಇದನ್ನೂ ಓದಿ: Janhvi Kapoor: ‘ಅವಕಾಶ ಇದೆ ಆದರೆ ಗೌರವ ಮಾತ್ರ ಸಿಗುತ್ತಿಲ್ಲ’; ನಟಿ ಜಾನ್ವಿ ಕಪೂರ್ ಬೇಸರದ ನುಡಿ

ಜಾನ್ವಿ ಕಪೂರ್​ ವೃತ್ತಿಜೀವನದಲ್ಲಿ ಇದು ಬಹುದೊಡ್ಡ ಸಿನಿಮಾ ಆಗಲಿದೆ. ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಹಲವು ತಿಂಗಳ ಕಾಲ ಮಾತುಕಥೆ ನಡೆದು, ಅಂತಿಮವಾಗಿ ಜಾನ್ವಿ ಕಪೂರ್​ ಅವರಿಗೆ ಅವಕಾಶ ನೀಡಲಾಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಲಿದೆ. ಆ ಕಾರಣಕ್ಕಾಗಿ ಬಾಲಿವುಡ್​ ನಟಿಗೆ ಮಣೆ ಹಾಕಲಾಗಿದೆ.

ಇದನ್ನೂ ಓದಿ: Janhvi Kapoor: ತಂದೆ, ತಂಗಿ ಜೊತೆ ಫ್ಯಾಮಿಲಿ ಟ್ರಿಪ್​ ಹೊರಟ ಜಾನ್ವಿ ಕಪೂರ್​; ಸಾಥ್​ ನೀಡಿದ ಬಾಯ್​ಫ್ರೆಂಡ್​

ನಟನೆಯ ವಿಚಾರದಲ್ಲಿ ಜಾನ್ವಿ ಕಪೂರ್​ ಅವರು ಇನ್ನೂ ಜನಮೆಚ್ಚುಗೆ ಗಳಿಸುವುದು ಬಾಕಿ ಇದೆ. ಅಂಥ ನಟಿಯನ್ನು ಜೂನಿಯರ್​ ಎನ್​ಟಿಆರ್​ಗೆ ಜೋಡಿ ಆಗಿಸಿರುವುದು ಕೆಲವರಿಗೆ ಬೇಸರ ಮೂಡಿಸಬಹುದು. ‘ಎನ್​ಟಿಆರ್​ 30’ ಚಿತ್ರದ ಮೂಲಕ ಜಾನ್ವಿ ಕಪೂರ್​ ಅವರು ದಕ್ಷಿಣ ಭಾರತಕ್ಕೆ ಕಾಲಿಟ್ಟಂತೆ ಆಗಲಿದೆ. ಅವರ ಪಾತ್ರದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

ಜಾನ್ವಿ ಕಪೂರ್​ ಅವರು ಫಸ್ಟ್​ ಲುಕ್​ ಪೋಸ್ಟರ್​ ಹಂಚಿಕೊಂಡಿದ್ದಾರೆ. ಅದಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇಂಥ ಚಾನ್ಸ್​ ಪಡೆದಿರುವುದಕ್ಕೆ ಅನೇಕ ಸೆಲೆಬ್ರಿಟಿಗಳು ಕೂಡ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದಲ್ಲದೇ, ‘ಬವಾಲ್​’ ಹಾಗೂ ‘ಮಿಸ್ಟರ್​ ಆ್ಯಂಡ್​ ಮಿಸಸ್​ ಮಾಹಿ’ ಚಿತ್ರಗಳಲ್ಲೂ ಜಾನ್ವಿ ಕಪೂರ್​ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ